Kallakurichi Hooch Tragedy: ತಮಿಳುನಾಡಿನಲ್ಲಿ ಕಳ್ಳಭಟ್ಟಿ ಕುಡಿದು ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆ, ಸಿಬಿ ಸಿಐಡಿ ತನಿಖೆಗೆ ಸ್ಟಾಲಿನ್ ಆದೇಶ

|

Updated on: Jun 20, 2024 | 8:47 AM

Tamil Nadu Hooch Tragedy: ತಮಿಳುನಾಡಿನ ಕಲ್ಲಕುರಿಚಿಯಲ್ಲಿ ಅಕ್ರಮ ಮದ್ಯ ಸೇವಿಸಿ ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆಯಾಗಿದ್ದು, 60 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲಾಧಿಕಾರಿ ಎಂ.ಎಸ್.ಪ್ರಶಾಂತ್ ಈ ಮಾಹಿತಿ ನೀಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಈ ಕುರಿತು ಸಿಬಿ-ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.

Kallakurichi Hooch Tragedy: ತಮಿಳುನಾಡಿನಲ್ಲಿ ಕಳ್ಳಭಟ್ಟಿ ಕುಡಿದು ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆ, ಸಿಬಿ ಸಿಐಡಿ ತನಿಖೆಗೆ ಸ್ಟಾಲಿನ್ ಆದೇಶ
Image Credit source: India TV
Follow us on

ತಮಿಳುನಾಡಿನ ಕಲ್ಲಕುರಿಚಿ(Kallakurichi) ದುರಂತದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಕಳ್ಳಭಟ್ಟಿ ಕುಡಿದ ಪರಿಣಾಮ 29 ಮಂದಿ ಮೃತಪಟ್ಟಿದ್ದು 60ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದು, ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸಿಬಿ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.

ಕಲ್ಲಕುರಿಚಿ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಅಸ್ವಸ್ಥರ ಚಿಕಿತ್ಸೆ ನಡೆಯುತ್ತಿದೆ.ಅಕ್ರಮ ಮದ್ಯ ಪ್ಯಾಕೆಟ್ ‘ಅರಕ್’ ಸೇವಿಸಿ ಜನರು ಅಸ್ವಸ್ಥಗೊಂಡಿದ್ದರು ಎಂದು ಮೂಲಗಳು ತಿಳಿಸಿವೆ. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಈ ಪ್ರಕರಣದಲ್ಲಿ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.

ಕಲ್ಲಕುರಿಚಿಯಲ್ಲಿ ಕಲಬೆರಕೆ ಮದ್ಯ ಸೇವಿಸಿ ಸಾವನ್ನಪ್ಪಿರುವ ಸುದ್ದಿ ಕೇಳಿ ನನಗೆ ಆಘಾತವಾಗಿದೆ ಮತ್ತು ದುಃಖವಾಗಿದೆ. ಈ ಪ್ರಕರಣದಲ್ಲಿ ಅಪರಾಧದಲ್ಲಿ ಭಾಗಿಯಾದವರನ್ನು ಬಂಧಿಸಲಾಗಿದೆ. ಇದನ್ನು ತಡೆಯಲು ವಿಫಲರಾದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ. ತಕ್ಷಣವೇ ಸಮಾಜವನ್ನು ಹಾಳುಗೆಡವುವ ಇಂತಹ ಕೃತ್ಯಗಳಲ್ಲಿ ಭಾಗಿಯಾದವರ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸ್ಟಾಲಿನ್​ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದಾರೆ.

ಮತ್ತಷ್ಟು ಓದಿ: Hooch Tragedy: ತಮಿಳುನಾಡು ಕಳ್ಳಭಟ್ಟಿ ದುರಂತ; ಕಲ್ಲಕುರಿಚಿಯಲ್ಲಿ ಅಕ್ರಮ ಮದ್ಯ ಸೇವಿಸಿ 10 ಜನ ಸಾವು

ಸಾವಿನ ವರದಿ ಹೊರಬಿದ್ದ ಕೂಡಲೇ ಡಿಎಂಕೆ ಸರ್ಕಾರ ಕ್ರಮ ಕೈಗೊಂಡು ಜಿಲ್ಲಾಧಿಕಾರಿ ಶ್ರವಣಕುಮಾರ್ ಜಾತಾವತ್ ಅವರನ್ನು ವರ್ಗಾವಣೆ ಮಾಡಿದೆ.

ಕಲ್ಲಕುರಿಚಿ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಎಂ.ಎಸ್.ಪ್ರಶಾಂತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎಂಕೆ ಸ್ಟಾಲಿನ್ ನೇತೃತ್ವದ ಸರ್ಕಾರ ಕಲ್ಲಕುರಿಚಿ ಎಸ್ಪಿ ಸಮಯಸಿಂಗ್ ಮೀನಾ ಅವರನ್ನು ಅಮಾನತುಗೊಳಿಸಿದೆ ಮತ್ತು ರಜತ್ ಚತುರ್ವೇದಿ ಅವರನ್ನು ಹೊಸ ಎಸ್ಪಿಯಾಗಿ ನೇಮಿಸಿದೆ.

ಹೆಚ್ಚುವರಿಯಾಗಿ, ಕಲ್ಲಕುರಿಚಿ ಜಿಲ್ಲೆಯ ನಿಷೇಧಿತ ವಿಭಾಗದವರು ಸೇರಿದಂತೆ ಒಂಬತ್ತು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:34 am, Thu, 20 June 24