AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಪೊಲೀಸ್​ ಠಾಣೆ ಬಳಿ ಜಾಮೀನಿನ ಮೇಲೆ ಹೊರ ಬಂದಿದ್ದ ಆರೋಪಿಯ ಬರ್ಬರ ಹತ್ಯೆ

ಜಾಮೀನಿನ ಮೇಲೆ ಹೊರಬಂದಿದ್ದ ಆರೋಪಿಯನ್ನು ಪೊಲೀಸ್ ಠಾಣೆ ಬಳಿಯೇ ದುಷ್ಕರ್ಮಿಗಳು ಕೊಚ್ಚಿ ಕೊಲೆ(Murder) ಮಾಡಿರುವ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ. ಮೃತ ಆರೋಪಿಯನ್ನು ಮದನ್ ಅಲಿಯಾಸ್ ಅಪ್ಪುಲು ಎಂದು ಗುರುತಿಸಲಾಗಿದೆ. ತೂತುಕುಡಿ ಮೂಲದವನಾಗಿದ್ದು, ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಆತ ಷರತ್ತುಬದ್ಧ ಜಾಮೀನಿನ ಮೇಲೆ ಹೊರಬಂದಿದ್ದ. ಬೆಳಗ್ಗೆ 10 ಗಂಟೆ ವೇಳೆಗೆ ತಮ್ಮ ಪತ್ನಿ ಜತೆಗೆ ಪೊಲೀಸ್​ ಸ್ಟೇಷನ್​ಗೆ ಬಂದಿದ್ದ, ನಿತ್ಯವೂ ಠಾಣೆಗೆ ಬಂದು ಸಹಿಹಾಕುವ ನಿಯಮವಿದೆ. ಅಲ್ಲಿಂದ ಊಟ ಮಾಡಲೆಂದು ಹೋಟೆಲ್​ಗೆ ಹೋಗಿದ್ದ.

ತಮಿಳುನಾಡು: ಪೊಲೀಸ್​ ಠಾಣೆ ಬಳಿ ಜಾಮೀನಿನ ಮೇಲೆ ಹೊರ ಬಂದಿದ್ದ ಆರೋಪಿಯ ಬರ್ಬರ ಹತ್ಯೆ
ಸಾವುImage Credit source: Times Of India
ನಯನಾ ರಾಜೀವ್
|

Updated on: Jul 18, 2025 | 9:29 AM

Share

ಸೇಲಂ, ಜುಲೈ 18: ಜಾಮೀನಿನ ಮೇಲೆ ಹೊರಬಂದಿದ್ದ ಆರೋಪಿಯನ್ನು ಪೊಲೀಸ್ ಠಾಣೆ ಬಳಿಯೇ ದುಷ್ಕರ್ಮಿಗಳು ಕೊಚ್ಚಿ ಕೊಲೆ(Murder) ಮಾಡಿರುವ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ. ಮೃತ ಆರೋಪಿಯನ್ನು ಮದನ್ ಅಲಿಯಾಸ್ ಅಪ್ಪುಲು ಎಂದು ಗುರುತಿಸಲಾಗಿದೆ. ತೂತುಕುಡಿ ಮೂಲದವನಾಗಿದ್ದು, ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಆತ ಷರತ್ತುಬದ್ಧ ಜಾಮೀನಿನ ಮೇಲೆ ಹೊರಬಂದಿದ್ದ.

ಬೆಳಗ್ಗೆ 10 ಗಂಟೆ ವೇಳೆಗೆ ತಮ್ಮ ಪತ್ನಿ ಜತೆಗೆ ಪೊಲೀಸ್​ ಸ್ಟೇಷನ್​ಗೆ ಬಂದಿದ್ದ, ನಿತ್ಯವೂ ಠಾಣೆಗೆ ಬಂದು ಸಹಿಹಾಕುವ ನಿಯಮವಿದೆ. ಅಲ್ಲಿಂದ ಊಟ ಮಾಡಲೆಂದು ಹೋಟೆಲ್​ಗೆ ಹೋಗಿದ್ದ. ಹೋಟೆಲ್​​ನಲ್ಲಿ ಕುಳಿತಿದ್ದಾಗ ಮೂವರು ಅಪಚರಿತರುಇದ್ದಕ್ಕಿದ್ದಂತೆ ಅವರನ್ನು ಸುತ್ತುವರೆದು ಹರಿತವಾದ ಆಯುಧಗಳಿಂದ ಚುಚ್ಚಿ ಬರ್ಬರವಾಗಿ ಹತ್ಯೆ ಮಾಡಿ ಅಲ್ಲಿಂದ ಪರಾರಿಯಾಗಿದ್ದಾರೆ. ಹಸ್ತಂಪಟ್ಟಿ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ, ಮದನ್ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆಂದು ಸೇಲಂನ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ.

ಪ್ರಾಥಮಿಕ ತನಿಖೆ ನಡೆಯುತ್ತಿದೆ. ಆರು ಸದಸ್ಯರ ಗ್ಯಾಂಗ್ ಈ ಕೃತ್ಯದಲ್ಲಿ ಭಾಗಿಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದು, ದಾಳಿಕೋರರನ್ನು ಗುರುತಿಸಲು ಮತ್ತು ಬಂಧಿಸಲು ಸಂಪೂರ್ಣ ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ಓದಿ: ಗೋಪಾಲ್ ಖೇಮ್ಕಾ ಕೊಲೆ ಪ್ರಕರಣ: ಆರೋಪಿ ವಿಕಾಸ್ ಪೊಲೀಸ್ ಎನ್​ಕೌಂಟರ್​​ನಲ್ಲಿ ಹತ್ಯೆ

ಮತ್ತೊಂದು ಘಟನೆ 

ಪೆರೋಲ್​ ಮೇಲೆ ಹೊರಗಿದ್ದ ಕೈದಿಗೆ ಆಸ್ಪತ್ರೆಯಲ್ಲಿ ಗುಂಡು ಹಾರಿಸಿದ ದುಷ್ಕರ್ಮಿಗಳು ಪೆರೋಲ್(Parole) ಮೇಲೆ ಹೊರಗಿದ್ದ ಕೈದಿಗೆ ಆಸ್ಪತ್ರೆಯಲ್ಲಿ ದುಷ್ಕರ್ಮಿಗಳು ಗುಂಡು ಹಾರಿಸಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಶಾಸ್ತ್ರಿ ನಗರ ಪೊಲೀಸ್ ಠಾಣೆ ಪ್ರದೇಶದಲ್ಲಿರುವ ಪ್ಯಾರಾಸ್ ಆಸ್ಪತ್ರೆ ಆವರಣದಲ್ಲಿ ಈ ಘಟನೆ ನಡೆದಿದ್ದು, ನಾಲ್ವರು ಅಪರಿಚಿತ ದುಷ್ಕರ್ಮಿಗಳು ಕೈದಿಯ ಮೇಲೆ ಗುಂಡು ಹಾರಿಸಿದ್ದಾರೆ. ದಾಳಿಕೋರರನ್ನು ಗುರುತಿಸಲು ಮತ್ತು ಹಲ್ಲೆಯ ಹಿಂದಿನ ಉದ್ದೇಶವನ್ನು ಕಂಡುಹಿಡಿಯಲು ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ.

ಈ ಘಟನೆಯು ಆಸ್ಪತ್ರೆಯೊಳಗೆ ಭೀತಿ ಮತ್ತು ಅವ್ಯವಸ್ಥೆಗೆ ಕಾರಣವಾಯಿತು. ಗಾಯಗೊಂಡ ಕೈದಿ ಪ್ರಸ್ತುತ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಬಕ್ಸಾರ್ ಮೂಲದ ಕೈದಿ ಚಂದನ್ ಮಿಶ್ರಾ, ಕೇಸರಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದು, ಪ್ರಸ್ತುತ ಬೇವೂರ್ ಜೈಲಿನಲ್ಲಿದ್ದಾನೆ. ವೈದ್ಯಕೀಯ ಚಿಕಿತ್ಸೆಗಾಗಿ ಆತನನ್ನು ಪೆರೋಲ್ ಮೇಲೆ ಆಸ್ಪತ್ರೆಗೆ ಕರೆತರಲಾಗಿತ್ತು. ಘಟನೆಯ ನಂತರ, ಶಾಸ್ತ್ರಿ ನಗರ ಪೊಲೀಸ್ ಠಾಣೆಯ ತಂಡವೊಂದು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ