AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ವಿವಾದ; ಕರ್ನಾಟಕದ ಜತೆ ಮಾತುಕತೆ ಇಲ್ಲವೆಂದ ತಮಿಳುನಾಡು ಸಚಿವ ದುರೈ ಮುರುಗನ್

Tamil Nadu minister Duraimurgan says no talks with Karnataka; ಮಾತುಕತೆಗಳಿಗೆ ಈಗ ಅವಕಾಶವಿಲ್ಲ. ಹಲವು ವರ್ಷಗಳ ಮಾತುಕತೆ ಫಲ ನೀಡದ ಕಾರಣ ನ್ಯಾಯಾಧಿಕರಣದ ಮೊರೆ ಹೋಗಿದ್ದೆವು. ಏನೇ ಇರಲಿ, ಅಂತಿಮ ಅಧಿಕಾರ ಸುಪ್ರೀಂ ಕೋರ್ಟ್​ಗೆ ಬಿಟ್ಟಿದ್ದು ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದುರೈ ಮುರುಗನ್ ಗುರುವಾರ ಹೇಳಿದ್ದಾರೆ.

ಕಾವೇರಿ ವಿವಾದ; ಕರ್ನಾಟಕದ ಜತೆ ಮಾತುಕತೆ ಇಲ್ಲವೆಂದ ತಮಿಳುನಾಡು ಸಚಿವ ದುರೈ ಮುರುಗನ್
ತಮಿಳುನಾಡು ಸಚಿವ ದುರೈ ಮುರುಗನ್
ಗಣಪತಿ ಶರ್ಮಾ
|

Updated on: Sep 21, 2023 | 7:50 PM

Share

ಚೆನ್ನೈ, ಸೆಪ್ಟೆಂಬರ್ 21: ಕಾವೇರಿ ನದಿ ನೀರು ಹಂಚಿಕೆಗೆ (Cauvery water dispute) ಸಂಬಂಧಿಸಿದಂತೆ ಕರ್ನಾಟಕದೊಂದಿಗೆ ಯಾವುದೇ ಮಾತುಕತೆ ನಡೆಸುವುದಿಲ್ಲ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದುರೈ ಮುರುಗನ್ (Duraimurgan) ಗುರುವಾರ ಹೇಳಿದ್ದಾರೆ. ಈ ಹಿಂದಿನ ಮಾತುಕತೆಗಳು ಸಕಾರಾತ್ಮಕ ಫಲಿತಾಂಶಗಳನ್ನು ನೀಡದ ಕಾರಣ ತಮಿಳುನಾಡು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದೆ ಎಂದು ಅವರು ಹೇಳಿದರು. ವಿವಾದ ಬಗೆಹರಿಸಲು ರಾಜ್ಯಗಳ ಸಭೆ ಕರೆಯುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರ್ನಾಟಕ ಸರ್ಕಾರ ಮನವಿ ಮಾಡಿದ್ದಕ್ಕೆ ದುರೈ ಮುರುಗನ್ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಈ ಮಧ್ಯೆ, ಪ್ರತಿದಿನ 5,000 ಕ್ಯೂಸೆಕ್‌ನಷ್ಟು ನೀರನ್ನು ತಮಿಳುನಾಡಿಗೆ ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ ನಿರ್ದೇಶನ ನೀಡಿರುವ ವಿಚಾರದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ. ಆದೇಶ ಪ್ರಶ್ನಿಸಿ ಎರಡೂ ರಾಜ್ಯಗಳು ನ್ಯಾಯಾಲಯದ ಮೆಟ್ಟಿಲೇರಿದ್ದವು.

ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ದುರೈ ಮುರುಗನ್, ನ್ಯಾಯಾಲಯದ ತೀರ್ಪಿನ ಆಧಾರದ ಮೇಲೆ ಮುಂದಿನ ಕ್ರಮವನ್ನು ರಾಜ್ಯ ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ.

ಮಾತುಕತೆಗಳಿಗೆ ಈಗ ಅವಕಾಶವಿಲ್ಲ. ಹಲವು ವರ್ಷಗಳ ಮಾತುಕತೆ ಫಲ ನೀಡದ ಕಾರಣ ನ್ಯಾಯಾಧಿಕರಣದ ಮೊರೆ ಹೋಗಿದ್ದೆವು. ಏನೇ ಇರಲಿ, ಅಂತಿಮ ಅಧಿಕಾರ ಸುಪ್ರೀಂ ಕೋರ್ಟ್​ಗೆ ಬಿಟ್ಟಿದ್ದು (ತಮಿಳುನಾಡಿಗೆ) ಎಂದು ಸಚಿವರು ಹೇಳಿದರು.

ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು; ಬೆಂಗಳೂರಿನಲ್ಲಿರುವ ತಮಿಳರ ವಾಪಸ್ ಕರೆಸಿಕೊಳ್ಳಿ, ಸ್ಟಾಲಿನ್​ಗೆ ವಾಟಾಳ್ ನಾಗರಾಜ್ ಆಗ್ರಹ

ಅಲ್ಪಾವಧಿ ಕುರುವಾಯಿ ಸಾಗುವಳಿ ಇನ್ನೂ ಮುಂದುವರಿದಿರುವ ಹಿನ್ನೆಲೆಯಲ್ಲಿ 93 ಟಿಎಂಸಿ ಅಡಿ ಸಾಮರ್ಥ್ಯಕ್ಕೆ ಬದಲಾಗಿ ಕೇವಲ 11 ಟಿಎಂಸಿ ಅಡಿ ನೀರು ಸಂಗ್ರಹವಾಗಿದ್ದರೂ, ಮೆಟ್ಟೂರು ಜಲಾಶಯದ ನಾಲೆಗಳನ್ನು ಮುಚ್ಚಲು ರಾಜ್ಯ ಮುಂದಾಗುವುದಿಲ್ಲ ಎಂದು ಮೂಲಗಳು ತಿಳಿಸಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಈ ಮಧ್ಯೆ, ತಮಿಳುನಾಡಿಗೆ ನೀರು ಬಿಡುವಂತೆ ನೀಡಿರುವ ಆದೇಶದ ವಿರುದ್ಧ ಬೆಂಗಳೂರು, ಮಂಡ್ಯ, ಮೈಸೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ಪ್ರತಿಭಟನೆಗಳು ಭುಗಿಲೆದ್ದಿವೆ. ಮಂಡ್ಯದಲ್ಲಿ ರೈತ ಸಂಘಟನೆಗಳು ಹೆದ್ದಾರಿ ತಡೆ ನಡೆಸಿವೆ. ಮತ್ತೊಂದೆಡೆ, ಕೆಆರ್​ಎಸ್ ಡ್ಯಾಂಗೆ ನುಗ್ಗಲು ಯತ್ನಿಸಿದ ಪ್ರತಿಭಟನಾ ನಿರತ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೆಪ್ಟೆಂಬರ್ 23ರಂದು ಮಂಡ್ಯ ಬಂದ್​ಗೆ ಕರೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್