ತಮಿಳುನಾಡಿನ ಕಡಲೂರಿನಲ್ಲಿ ನಡೆದ ಡಿಎಂಕೆಯ ಕಾರ್ಯಕ್ರಮದ ವೇಳೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್(Petrol Bomb) ಎಸೆದಿದ್ದು ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯವಾಗಿಲ್ಲ. ಈ ಕಾರ್ಯಕ್ರಮದಲ್ಲಿ ಶಾಸಕ ಅಯ್ಯಪ್ಪನ್ ಉಪಸ್ಥಿತರಿದ್ದರು. ಶಾಸಕ ಅಯ್ಯಪ್ಪನ್ ಆರೋಗ್ಯದ ಕಾರಣದಿಂದ ಇತ್ತೀಚೆಗೆ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರಲಿಲ್ಲ.
ಈಗ ಅವರು ಚೇತರಿಸಿಕೊಂಡಿದ್ದ ಕಾರಣ ಭಾನುವಾರ ನಲ್ಲತ್ತೂರಿನಲ್ಲಿ ಡಿಎಂಕೆ ಪದಾಧಿಕಾರಿಯೊಬ್ಬರು ಆಯೋಜಿಸಿದ್ದ ಕುಟುಂಬ ಕಾರ್ಯಕ್ರಮದಲ್ಲಿ ಭಾಗವಹಿಸಲು ಶಾಸಕರು ನಿರ್ಧರಿಸಿದ್ದರು.
ಮತ್ತಷ್ಟು ಓದಿ: Hyderabad: ವಿಮಾನ ತಪ್ಪಿಹೋಗುತ್ತೆಂದು ಫ್ಲೈಟ್ ಅಲ್ಲಿ ಬಾಂಬ್ ಇದೆ ಎಂದು ಕರೆ ಮಾಡಿದ ವ್ಯಕ್ತಿಯ ಬಂಧನ
ಅವರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದು ಪರಾರಿಯಾಗಿದ್ದಾರೆ, ಯಾರಿಗೂ ಯಾವುದೇ ರೀತಿಯ ಗಾಯಗಳಾಗಿಲ್ಲ. ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಅಯ್ಯಪ್ಪನ್ ಅವರನ್ನು ಅಲ್ಲಿಂದ ಕರೆದೊಯ್ದರು, ಈ ಘಟನೆ ಕುರಿತು ತನಿಖೆ ಆರಂಭಿಸಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ