AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu: ಆರ್​ಎನ್ ರವಿ ರಾಜ್ಯಪಾಲ ಹುದ್ದೆಗೆ ಅರ್ಹರಲ್ಲ, ರಾಷ್ಟ್ರಪತಿ ಮುರ್ಮುಗೆ ಪತ್ರ ಬರೆದ ಎಂಕೆ ಸ್ಟಾಲಿನ್

ತಮಿಳುನಾಡು ರಾಜ್ಯಪಾಲ ಆರ್​ಎನ್​ ರವಿ(RN Ravi)) ಅವರ ಕಾರ್ಯವೈಖರಿ ವಿರುದ್ಧ ರಾಷ್ಟ್ರಪತಿ ದ್ರೌಪದಿ ಮುರ್ಮು(Draupadi Murmu) ಅವರಿಗೆ ಸಿಎಂ ಎಂಕೆ ಸ್ಟಾಲಿನ್ ಪತ್ರ ಬರೆದಿದ್ದಾರೆ.

Tamil Nadu: ಆರ್​ಎನ್ ರವಿ ರಾಜ್ಯಪಾಲ ಹುದ್ದೆಗೆ ಅರ್ಹರಲ್ಲ, ರಾಷ್ಟ್ರಪತಿ ಮುರ್ಮುಗೆ ಪತ್ರ ಬರೆದ ಎಂಕೆ ಸ್ಟಾಲಿನ್
ಎಂಕೆ ಸ್ಟಾಲಿನ್
ನಯನಾ ರಾಜೀವ್
|

Updated on: Jul 10, 2023 | 9:52 AM

Share

ತಮಿಳುನಾಡು ರಾಜ್ಯಪಾಲ ಆರ್​ಎನ್​ ರವಿ(RN Ravi)) ಅವರ ಕಾರ್ಯವೈಖರಿ ವಿರುದ್ಧ ರಾಷ್ಟ್ರಪತಿ ದ್ರೌಪದಿ ಮುರ್ಮು(Draupadi Murmu) ಅವರಿಗೆ ಸಿಎಂ ಎಂಕೆ ಸ್ಟಾಲಿನ್ ಪತ್ರ ಬರೆದಿದ್ದಾರೆ.  15 ಪುಟಗಳ  ಪತ್ರ ಬರೆದಿದ್ದು, ಇದರಲ್ಲಿ ರಾಜ್ಯಪಾಲ ಆರ್.ಎನ್.ರವಿ ಅವರು ಹೇಳಿದ ಹುದ್ದೆಗೆ ಅರ್ಹರಲ್ಲ ಎಂದು ಹೇಳಿದ್ದಾರೆ. ರಾಜ್ಯಪಾಲರ ಚಟುವಟಿಕೆಗಳು ತಮಿಳುನಾಡಿನ ಜನತೆಯ ವಿರುದ್ಧ ಮತ್ತು ಚುನಾಯಿತ ಸರ್ಕಾರದ ವಿರುದ್ಧವಾಗಿದೆ ಎಂದು ಸ್ಟಾಲಿನ್ ಹೇಳಿದ್ದಾರೆ.

ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರ ವಿವಿಧ ಚಟುವಟಿಕೆಗಳು ಅವರು ರಾಜ್ಯಪಾಲರಾಗಲು ಯೋಗ್ಯರಲ್ಲ ಎಂಬುದನ್ನು ತೋರಿಸುತ್ತದೆ ಎಂದು ದೂರು ಪತ್ರದಲ್ಲಿ ತಿಳಿಸಿದ್ದಾರೆ. ತಮಿಳುನಾಡು ವಿಧಾನಸಭೆಯಲ್ಲಿ ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲ ರವಿ ಒಪ್ಪಿಗೆ ನೀಡುವಲ್ಲಿ ಅನಗತ್ಯ ವಿಳಂಬ ಮಾಡುತ್ತಾರೆ. ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಎಐಎಡಿಎಂಕೆ ಮಾಜಿ ಸಚಿವರ ಮೇಲಿನ ಪ್ರಕರಣಗಳನ್ನು ತೆರವುಗೊಳಿಸಲು ರಾಜ್ಯಪಾಲರು ಅನುಮತಿ ನೀಡುತ್ತಿಲ್ಲ.

ಜನರಿಂದ ಆಯ್ಕೆಯಾದ ರಾಜ್ಯ ಸರ್ಕಾರದ ನೀತಿಗಳು ಮತ್ತು ಸಿದ್ಧಾಂತಗಳಿಗೆ ರಾಜ್ಯಪಾಲರು ಶತ್ರುಗಳಂತೆ ವರ್ತಿಸುತ್ತಾರೆ ಎಂದು ಮುಖ್ಯಮಂತ್ರಿ ಸ್ಟಾಲಿನ್ ಹೇಳಿದ್ದಾರೆ. ರಾಜ್ಯಪಾಲರು ಸೆಂಥಿಲ್ ಬಾಲಾಜಿ ಅವರನ್ನು ಸಂಪುಟದಿಂದ ವಜಾಗೊಳಿಸುವ ಮೂಲಕ ಸಂವಿಧಾನವನ್ನು ಉಲ್ಲಂಘಿಸಿದ್ದಾರೆ ಎಂದಿದ್ದಾರೆ.

V Senthil Balaji: ಸೆಂಥಿಲ್ ಬಾಲಾಜಿ ಬಿಡುಗಡೆ ಕೋರಿ ಅರ್ಜಿ, ಮದ್ರಾಸ್ ಹೈಕೋರ್ಟ್​ನಿಂದ ವಿಭಜಿತ ತೀರ್ಪು

ಚಿದಂಬರಂ ನಟರಾಜ ದೇಗುಲದಲ್ಲಿ ಬಾಲ್ಯವಿವಾಹ ನಡೆದಿಲ್ಲ ಎಂದು ರಾಜ್ಯಪಾಲ ರವಿ ಹೇಳಿದ್ದು, ಬಳಿಕ ಬಾಲ್ಯವಿವಾಹದ ವಿಡಿಯೋವನ್ನು ಬಿಡುಗಡೆ ಮಾಡಿ ರಾಜ್ಯಪಾಲರ ಹೇಳಿಕೆಯನ್ನು ಸುಳ್ಳು ಎಂದು ಬಣ್ಣಿಸಲಾಗಿತ್ತು. ಅದೇ ರೀತಿ ಸೆಂಥಿಲ್ ಬಾಲಾಜಿ ಅವರನ್ನು ಸಂಪುಟದಿಂದ ವಜಾ ಮಾಡುವ ಮೂಲಕ ರಾಜ್ಯಪಾಲರು ದೊಡ್ಡ ಪ್ರಮಾಣದಲ್ಲಿ ಸಂವಿಧಾನವನ್ನು ಉಲ್ಲಂಘಿಸಿ ನಂತರ ತಮ್ಮ ನಿರ್ಧಾರವನ್ನು ಮುಂದೂಡಿದರು.

ಜುಲೈ 8 ರಂದು ರಾಜ್ಯಪಾಲ ರವಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ರಾಷ್ಟ್ರ ರಾಜಧಾನಿಯಲ್ಲಿ ಭೇಟಿಯಾದ ದಿನವೇ ಮುಖ್ಯಮಂತ್ರಿ ಸ್ಟಾಲಿನ್ ಅವರು ದೂರು ಪತ್ರ ಬರೆದಿದ್ದರು. ಪತ್ರದಲ್ಲಿ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷದ ವಿವಿಧ ವಿಷಯಗಳನ್ನು ಸ್ಟಾಲಿನ್ ಉಲ್ಲೇಖಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ