ಎರಡು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಗಣೇಶಮೂರ್ತಿ ಹೃದಯಾಘಾತದಿಂದ ಸಾವು

|

Updated on: Mar 28, 2024 | 8:44 AM

ಎರಡು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಗಣೇಶಮೂರ್ತಿ(A Ganeshamoorthi) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಡಿಎಂಕೆ ಸಂಸದ ಗಣೇಶಮೂರ್ತಿ ನಿಧನರಾಗಿದ್ದಾರೆ.

ಎರಡು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಗಣೇಶಮೂರ್ತಿ ಹೃದಯಾಘಾತದಿಂದ ಸಾವು
ಎ ಗಣೇಶಮೂರ್ತಿ
Follow us on

ಎರಡು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಗಣೇಶಮೂರ್ತಿ(A Ganeshamoorthi) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಡಿಎಂಕೆ ಸಂಸದ ಗಣೇಶಮೂರ್ತಿ ನಿಧನರಾಗಿದ್ದಾರೆ. 2019 ರ ಲೋಕಸಭೆ ಚುನಾವಣೆಯಲ್ಲಿ ಈರೋಡ್‌ನಿಂದ ಡಿಎಂಕೆ ಟಿಕೆಟ್‌ನಲ್ಲಿ ಆಯ್ಕೆಯಾದ ಗಣೇಶಮೂರ್ತಿ ಅವರಿಗೆ ಏಕಾಏಕಿ ಅನಾರೋಗ್ಯ ಕಾಣಿಸಿಕೊಂಡಿತ್ತು ಆಸ್ಪತ್ರೆಗೆ ದಾಖಲಿಸಿದ ಬಳಿಕ ಕೀಟನಾಶಕ ಸೇವಿಸಿರುವ ವಿಚಾರ ಬೆಳಕಿಗೆ ಬಂದಿತ್ತು.

ಅವರನ್ನು ಆಂಬ್ಯುಲೆನ್ಸ್‌ನಲ್ಲಿ ಇಬ್ಬರು ವೈದ್ಯರು ಮತ್ತು ಅವರ ಕುಟುಂಬ ಸದಸ್ಯರೊಂದಿಗೆ ಮಧ್ಯಾಹ್ನ 2.30 ರ ಸುಮಾರಿಗೆ ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಡಿಎಂಕೆ ನಾಯಕ ದುರೈ ವೈಕೋ ಆಸ್ಪತ್ರೆಗೆ ಭೇಟಿ ನೀಡಿದ್ದು, ಗಣೇಶಮೂರ್ತಿ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಇಸಿಎಂಒ ಚಿಕಿತ್ಸೆಯಲ್ಲಿದೆ ಎಂದು ಹೇಳಿದ್ದಾರೆ.

ಸಚಿವ ಎಸ್.ಮುತ್ತುಸಾಮಿ, ಮೊಡಕುರಿಚಿಯ ಬಿಜೆಪಿ ಶಾಸಕ ಡಾ.ಸಿ.ಸರಸ್ವತಿ, ಎಐಎಡಿಎಂಕೆಯ ಕೆ.ವಿ.ರಾಮಲಿಂಗಂ ಮುಂತಾದ ರಾಜಕೀಯ ಮುಖಂಡರು ಆಸ್ಪತ್ರೆಗೆ ಧಾವಿಸಿ ಗಣೇಶಮೂರ್ತಿ ಅವರ ಆರೋಗ್ಯ ವಿಚಾರಿಸಿದರು. ಅವರ ಈ ನಿರ್ಧಾರಕ್ಕೆ ಕಾರಣವೇನೆಂಬುದು ತಿಳಿದುಬಂದಿಲ್ಲ.

ಮತ್ತಷ್ಟು ಓದಿ: ಕೀಟನಾಶಕ ಸೇವಿಸಿ ಆಸ್ಪತ್ರೆಗೆ ದಾಖಲಾದ ತಮಿಳುನಾಡು ಸಂಸದ
ಲೋಕಸಭಾ ಚುನಾವಣೆ ಘೋಷಣೆಯಾಗಿದ್ದು, ಏಪ್ರಿಲ್ 19ರಿಂದ ಆರಂಭವಾಗಿ ಜೂನ್ 1ರವರೆಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ, ಜೂನ್ 4ರಂದು ಫಲಿತಾಂಶ ಹೊರಬರಲಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ