Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಬಸ್​ ನಿಲ್ದಾಣದಲ್ಲಿರುವ ಸಾರ್ವಜನಿಕ ಶೌಚಾಲಯದಲ್ಲಿ ನವಜಾತ ಶಿಶು ಪತ್ತೆ

ಬಸ್​ ನಿಲ್ದಾಣದಲ್ಲಿರುವ ಸಾರ್ವಜನಿಕ ಶೌಚಾಲಯದಲ್ಲಿ ನವಜಾತ ಶಿಶು ಪತ್ತೆಯಾಗಿರುವ ಘಟನೆ ತಮಿಳುನಾಡಿನ ಮೈಲಾಡುತುರೈನಲ್ಲಿ ನಡೆದಿದೆ. ಹೊಸ ಬಸ್ ನಿಲ್ದಾಣದ ಸಾರ್ವಜನಿಕ ಶೌಚಾಲಯದಲ್ಲಿ ನವಜಾತ ಹೆಣ್ಣು ಶಿಶುವನ್ನು ಬಿಟ್ಟು ಹೋಗಿದ್ದಾರೆ.

ತಮಿಳುನಾಡು: ಬಸ್​ ನಿಲ್ದಾಣದಲ್ಲಿರುವ ಸಾರ್ವಜನಿಕ ಶೌಚಾಲಯದಲ್ಲಿ ನವಜಾತ ಶಿಶು ಪತ್ತೆ
ಮಗುImage Credit source: India Today
Follow us
ನಯನಾ ರಾಜೀವ್
|

Updated on: Oct 10, 2024 | 2:59 PM

ಬಸ್​ ನಿಲ್ದಾಣದಲ್ಲಿರುವ ಸಾರ್ವಜನಿಕ ಶೌಚಾಲಯದಲ್ಲಿ ನವಜಾತ ಶಿಶು ಪತ್ತೆಯಾಗಿರುವ ಘಟನೆ ತಮಿಳುನಾಡಿನ ಮೈಲಾಡುತುರೈನಲ್ಲಿ ನಡೆದಿದೆ. ಹೊಸ ಬಸ್ ನಿಲ್ದಾಣದ ಸಾರ್ವಜನಿಕ ಶೌಚಾಲಯದಲ್ಲಿ ನವಜಾತ ಹೆಣ್ಣು ಶಿಶುವನ್ನು ಬಿಟ್ಟು ಹೋಗಿದ್ದಾರೆ.

ಶೌಚಾಲಯವನ್ನು ಶುಚಿಗೊಳಿಸಲು ಬಂದಿದ್ದ ಮಹಿಳೆ ಮಗುವನ್ನು ರಕ್ಷಿಸಿದ್ದಾರೆ. ಅವರು ತಕ್ಷಣ ಆಸ್ಪತ್ರೆಗೆ ಕರೆದೊಯ್ದರು. ಶೌಚಾಲಯದಲ್ಲಿ ಬಕೆಟ್​ನಲ್ಲಿ ಮಗು ತಲೆಕೆಳಗಾಗಿ ಬಿದ್ದಿರುವುದನ್ನು ಕಂಡ ಮಹಿಳೆ ಕೂಡಲೇ ಅದನ್ನು ತೆಗೆದು ನೆಲದ ಮೇಲೆ ಮಲಗಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಸಮಯ ವ್ಯರ್ಥ ಮಾಡದೆ ಕಾರ್ಮಿಕರು ಆಕೆಯನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನವಜಾತ ಶಿಶುವನ್ನು ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ನವಜಾತ ಶಿಶುವಿನ ವಾರ್ಡ್ ಸಿಬ್ಬಂದಿಗೆ ಹಸ್ತಾಂತರಿಸಲಾಗಿದೆ. ಮಗುವಿನ ಸ್ಥಿತಿ ಸ್ಥಿರವಾಗಿದ್ದು, ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಮತ್ತಷ್ಟು ಓದಿ: ನವಜಾತ ಶಿಶುವಿನ ಬಾಯಿಗೆ ಮೆಣಸಿನ ಪುಡಿ ಹಾಕಿದ ಕ್ರೂರ ತಾಯಿ

ಸ್ಥಳೀಯ ಪೊಲೀಸರಿಗೆ ವಿಷಯ ತಿಳಿಸಲಾಗಿದ್ದು, ಪೋಷಕರ ಪತ್ತೆಗೆ ತನಿಖೆ ಆರಂಭಿಸಿದ್ದಾರೆ. ಮಗುವನ್ನು ಏಕೆ ಬಿಟ್ಟು ಹೋಗಿದ್ದಾರೆ ಎಂದು ನಿರ್ಧರಿಸಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ.

ಎರಡು ದಿನಗಳ ಹಿಂದೆ, ಚಿದಂಬರಂ ಸಮೀಪದ ಕಡಲೂರು ಜಿಲ್ಲೆಯ ಪಿಚ್ಚಾವರಂ ಪಟ್ಟಣದ ಮನೆಯೊಂದರ ಹಿಂದೆ ಮತ್ತೊಂದು ನವಜಾತ ಹೆಣ್ಣು ಮಗು ಪತ್ತೆಯಾಗಿತ್ತು. ಗ್ರಾಮಸ್ಥರು ಆಕೆಯನ್ನು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ