AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿ ಸೈನಿಕನ ಪತ್ನಿಯನ್ನು ಅರೆಬೆತ್ತಲೆ ಮಾಡಿ ಚಿತ್ರಹಿಂಸೆ ಕೊಟ್ಟ ಪ್ರಕರಣ, ಓರ್ವನ ಬಂಧನ

ಕಾಶ್ಮೀರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸೈನಿಕರೊಬ್ಬರ ಪತ್ನಿಯನ್ನು ಅರೆನಗ್ನಗೊಳಿಸಿ 100ಕ್ಕೂ ಅಧಿಕ ಮಂದಿ ಚಿತ್ರಹಿಂಸೆ ನೀಡಿದ್ದಾರೆ, ಈ ಕುರಿತು ದೂರು ದಾಖಲಾಗಿದ್ದು, ಓರ್ವನನ್ನು ಬಂಧಿಸಲಾಗಿದೆ.

ತಮಿಳುನಾಡಿನಲ್ಲಿ ಸೈನಿಕನ ಪತ್ನಿಯನ್ನು ಅರೆಬೆತ್ತಲೆ ಮಾಡಿ ಚಿತ್ರಹಿಂಸೆ ಕೊಟ್ಟ ಪ್ರಕರಣ, ಓರ್ವನ ಬಂಧನ
ಸೈನಿಕ
ನಯನಾ ರಾಜೀವ್
|

Updated on:Jun 12, 2023 | 8:03 AM

Share

ಕಾಶ್ಮೀರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸೈನಿಕರೊಬ್ಬರ ಪತ್ನಿಯನ್ನು ಅರೆನಗ್ನಗೊಳಿಸಿ 100ಕ್ಕೂ ಅಧಿಕ ಮಂದಿ ಚಿತ್ರಹಿಂಸೆ ನೀಡಿದ್ದಾರೆ, ಈ ಕುರಿತು ದೂರು ದಾಖಲಾಗಿದ್ದು, ಓರ್ವನನ್ನು ಬಂಧಿಸಲಾಗಿದೆ. ತನ್ನ ಪತ್ನಿ ತಮಿಳುನಾಡಿನಲ್ಲಿ ವಾಸವಿದ್ದಾಳೆ, ಆಕೆಯನ್ನು ಅರೆ ನಗ್ನಗೊಳಿಸಿ ಚಿತ್ರಹಿಂಸೆ ನೀಡಲಾಗಿದೆ, ಎಷ್ಟೇ ಪ್ರಯತ್ನ ಪಟ್ಟರೂ ಪೊಲೀಸರು ದೂರು ದಾಖಲಿಸಿಕೊಂಡಿಲ್ಲ ಎಂದು ವಿಡಿಯೋ ಮೂಲಕ ಅಳಲು ತೋಡಿಕೊಂಡಿದ್ದರು. ಇದೀಗ ಬಂದಿರುವ ಮಾಹಿತಿ ಪ್ರಕಾರ ಓರ್ವನನ್ನು ಬಂಧಿಸಲಾಗಿದೆ.

ಹೀಗಾಗಿ ಅದರ ಸತ್ಯಾಸತ್ಯತೆಯನ್ನು ಇನ್ನೂ ಕಂಡುಹಿಡಿಯಲಾಗಿಲ್ಲ. ತನ್ನನ್ನು ತಾನು ಹವಲ್ದಾರ್ ಪ್ರಭಾಕರ್ ಎಂದು ಗುರುತಿಸಸಿಕೊಂಡ ಸೈನಿಕ, ತನ್ನ ಹೆಂಡತಿಯನ್ನು ಅರೆಬೆತ್ತಲೆಗೊಳಿಸಿ ತುಂಬಾ ಕೆಟ್ಟದಾಗಿ ಥಳಿಸಲಾಗಿದೆ ಎಂದು ಹೇಳಿಕೊಂಡಿದ್ದರು.

ದಯಮಾಡಿ ಕಾಪಾಡಿ ಎಂದು ಹೇಳಿಕೊಂಡಿದ್ದಾರೆ. ಈ ವೀಡಿಯೊದಲ್ಲಿ ಯಾವ ದಿನಾಂಕದ್ದು ಎಂದು ತಿಳಿದುಬಂದಿಲ್ಲ ಜೊತೆಗೆ ಅದರ ಸತ್ಯಾಸತ್ಯತೆ ಇನ್ನೂ ಖಚಿತವಾಗಿಲ್ಲ. ಯೋಧನ ಮನವಿಗೆ ಪ್ರತಿಕ್ರಿಯಿಸಿದ ತಮಿಳುನಾಡು ಬಿಜೆಪಿ (BJP) ಅಧ್ಯಕ್ಷ ಕೆ ಅಣ್ಣಾಮಲೈ ()K Annamalai ಅವರನ್ನು ಭೇಟಿ ಮಾಡಿ ಅವರ ಪತ್ನಿಗೆ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಅಣ್ಣಾಮಲೈ ಅವರು ತಿರುವಣ್ಣಾಮಲೈ ಮೂಲದ ಹವಾಲ್ದಾರ್ ಮತ್ತು ಅವರ ಪತ್ನಿಯೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದೇನೆ. ಅವರ ಕಥೆಯನ್ನು ಕೇಳಿ ನಿಜವಾಗಿಯೂ ಧೈರ್ಯ ಎನಿಸಿತು ಮತ್ತು ಈ ಘಟನೆ ಸಂಭವಿಸಿರುವುದಕ್ಕೆ ನಾಚಿಕೆ ಪಡುತ್ತೇನೆ ಎಂದಿದ್ದಾರೆ.

ಒಬ್ಬ ಸೈನಿಕನು ದೇಶವನ್ನು ರಕ್ಷಿಸಲು ಹೊರಟಾಗ, ಸೈನಿಕನ ಪತ್ನಿ ಮತ್ತು ಕುಟುಂಬವನ್ನು ನೋಡಿಕೊಳ್ಳುವುದು ಸರ್ಕಾರದ ಅತ್ಯುನ್ನತ ಜವಾಬ್ದಾರಿಯಾಗಿದೆ ಎಂದಿದ್ದಾರೆ. ತಮಿಳುನಾಡು (Tamil Nadu) ರಾಜ್ಯಪಾಲರು, ರಾಜ್ಯ ಪೊಲೀಸರು ಮತ್ತು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಸೂಕ್ತ ಕ್ರಮ ಕೈಗೊಂಡು ಮಹಿಳೆಯರ ಘನತೆ ಕಾಪಾಡುವಂತೆ ಮನವಿ ತ್ಯಾಗರಾಜನ್ ಮಾಡಿದ್ದಾರೆ.

ಮತ್ತಷ್ಟು ಓದಿ: ಪಕ್ಕದ ಮನೆ ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡುತ್ತಿದ್ದಾಗ ಸಿಕ್ಕಿಬಿದ್ದ ಆಸಾಮಿ

ನನ್ನ ಪತ್ನಿ ಭೋಗ್ಯಕ್ಕೆ ಸ್ಥಳದಲ್ಲಿ ಅಂಗಡಿ ನಡೆಸುತ್ತಿದ್ದಾರೆ. ಆಕೆಯನ್ನು 120 ಮಂದಿ ಥಳಿಸಿ ಅಂಗಡಿಯ ವಸ್ತುಗಳನ್ನು ಹೊರಹಾಕಿದ್ದಾರೆ. ಈ ಬಗ್ಗೆ ಎಸ್ಪಿಗೆ ಮನವಿ ಸಲ್ಲಿಸಿದ್ದು, ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಡಿಜಿಪಿ ಸರ್ ದಯವಿಟ್ಟು ಸಹಾಯ ಮಾಡಿ. ಅವರು ನನ್ನ ಮನೆಯವರ ಮೇಲೆ ಹಲ್ಲೆ ನಡೆಸಿ ಚಾಕುವಿನಿಂದ ಬೆದರಿಸಿದ್ದಾರೆ. ನನ್ನ ಹೆಂಡತಿಯನ್ನು ಅರೆಬೆತ್ತಲೆ ಮಾಡಿ ಕ್ರೂರವಾಗಿ ಥಳಿಸಿದ್ದಾರೆ ಎಂದು ಕೇಳಿಕೊಂಡಿದ್ದಾರೆ.

ಕಾಶ್ಮೀರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸೈನಿಕನೊಬ್ಬ ತನ್ನ ಹೆಂಡತಿಯ ಮೇಲೆ ತಮಿಳುನಾಡಿನಲ್ಲಿ 100 ಕ್ಕೂ ಹೆಚ್ಚು ಜನರು ಸೇರಿ ಹಲ್ಲೆ ನಡೆಸಿದ್ದು ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:03 am, Mon, 12 June 23