AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಎನ್​ಸಿಸಿ ಶಿಬಿರದಲ್ಲಿ 12 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ, 9 ಮಂದಿ ಬಂಧನ

ಶಾಲೆಯೊಂದರಲ್ಲಿ ನಡೆದ ಎನ್​ಸಿಸಿ ಶಿಬಿರದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಬರ್ಗೂರಿನ ಶಾಲೆಯ ಶಿಬಿರವೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಎನ್‌ಟಿಕೆ ಕಾರ್ಯಕರ್ತ ಸೇರಿದಂತೆ 9 ಜನರನ್ನು ಬಂಧಿಸಲಾಗಿದೆ.

ತಮಿಳುನಾಡು: ಎನ್​ಸಿಸಿ ಶಿಬಿರದಲ್ಲಿ 12 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ, 9 ಮಂದಿ ಬಂಧನ
ಬಾಲಕಿ
ನಯನಾ ರಾಜೀವ್
|

Updated on: Aug 19, 2024 | 11:21 AM

Share

ತಮಿಳುನಾಡಿನಲ್ಲಿ ನಡೆದ ಎನ್​ಸಿಸಿ ಶಿಬಿರದಲ್ಲಿ 12 ಮಂದಿ ವಿದ್ಯಾರ್ಥಿನಿಯರಿಗೆ ನೀಡಿದ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. 13 ವರ್ಷದ ಬಾಲಕಿ ಮೇಲೆ ಎನ್​ಟಿಕೆ ಪಕ್ಷದ ಕಾರ್ಯಕರ್ತ ಶಿವರಾಮನ್​ನನ್ನು ಬಂಧಿಸಲಾಗಿದೆ.

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಬರ್ಗೂರಿನ ಶಾಲೆಯ ಶಿಬಿರವೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಎನ್‌ಟಿಕೆ ಕಾರ್ಯಕರ್ತ ಸೇರಿದಂತೆ 9 ಜನರನ್ನು ಬಂಧಿಸಲಾಗಿದೆ. ಆಗಸ್ಟ್ 9 ರಂದು ಶಾಲೆಯಲ್ಲಿ ವಿದ್ಯಾರ್ಥಿಗಳು ಎನ್‌ಸಿಸಿ ಶಿಬಿರದಲ್ಲಿ ಭಾಗವಹಿಸಿದ್ದರು. ಶಿಬಿರದಲ್ಲಿ 12 ವರ್ಷದ ವಿದ್ಯಾರ್ಥಿ ಸೇರಿದಂತೆ 17 ವಿದ್ಯಾರ್ಥಿಗಳು ಇದ್ದರು ಮತ್ತು ಶಾಲೆಯ ಸಭಾಂಗಣದಲ್ಲಿ ಮಲಗಿದ್ದರು ಎಂದು ವರದಿಯಾಗಿದೆ.

ಆಗಸ್ಟ್ 16 ರಂದು ಬಾಲಕಿ ಅಸ್ವಸ್ಥಳಾಗಿದ್ದು, ಆಕೆಯ ಪೋಷಕರು ಆಕೆಯ ಆರೋಗ್ಯದ ಬಗ್ಗೆ ಕೇಳಿದಾಗ, ಶಿಬಿರದ ಭಾಗವಾಗಿದ್ದ ಶಿವರಾಮನ್ ತನ್ನನ್ನು ಎಬ್ಬಿಸಿ ಏಕಾಂತ ಸ್ಥಳಕ್ಕೆ ಕರೆದೊಯ್ದು ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿದ್ದಾರೆ. ಎನ್‌ಟಿಕೆಯಲ್ಲಿ ಪದಾಧಿಕಾರಿಯೂ ಆಗಿರುವ ಶಿವರಾಮನ್‌ರನ್ನು ಈ ಘಟನೆ ಬೆಳಕಿಗೆ ಬಂದ ನಂತರ ಪಕ್ಷದಿಂದ ಹೊರಹಾಕಲಾಯಿತು.

ಮತ್ತಷ್ಟು ಓದಿ: ಬೆಂಗಳೂರು: ಲಿಫ್ಟ್‌ ಕೇಳಿದ ಯುವತಿ ಮೇಲೆ ಎರಗಿ ಅತ್ಯಾಚಾರ ಎಸಗಿದ್ದ ಕಾಮುಕ ಅರೆಸ್ಟ್, ಸಿಸಿಟಿವಿ ಆಧರಿಸಿ ಆರೋಪಿ ಬಂಧನ

ಈ ಕುರಿತು ತನ್ನ ಶಾಲಾ ಶಿಕ್ಷಕ ಮತ್ತು ಪ್ರಾಂಶುಪಾಲ ಸತೀಶ್ ಕುಮಾರ್ ಅವರಿಗೆ ದೂರು ನೀಡಿದ್ದು, ಅವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬಾಲಕಿ ಆರೋಪಿಸಿದ್ದಾಳೆ. 12 ವರ್ಷದ ಬಾಲಕಿಯನ್ನು ಕೃಷ್ಣಗಿರಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪೋಷಕರ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿ ಸತೀಶ್ ಕುಮಾರ್, ಶಿವರಾಮನ್, ಜೆನ್ನಿಫರ್, ಸ್ಯಾಮ್ಸನ್ ವೆಸ್ಲಿ, ಶಕ್ತಿವೇಲ್, ಸಿಂಧು, ಸತ್ಯ ಮತ್ತು ಸುಬ್ರಮಣಿಯನ್ನು ಬಂಧಿಸಿದ್ದಾರೆ. ಎಲ್ಲರನ್ನೂ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಪರಾರಿಯಾಗಿದ್ದ ಶಿವರಾಮನ್ ಮತ್ತು ಸುಧಾಕರ್ ಬಂಧನಕ್ಕೆ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಮೂಲಗಳ ಪ್ರಕಾರ, ಶಿವರಾಮನ್ ಐದಕ್ಕೂ ಹೆಚ್ಚು ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ತನಿಖೆಯ ವೇಳೆ ಪೊಲೀಸರಿಗೆ ತಿಳಿದುಬಂದಿದೆ. ವಿಶೇಷ ತಂಡ ಕೊಯಮತ್ತೂರಿನಲ್ಲಿ ಶಿವರಾಮನ್‌ನನ್ನು ಬಂಧಿಸಿದ್ದು, ಸುಧಾಕರ್‌ಗಾಗಿ ಹುಡುಕಾಟ ನಡೆಸುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?