AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu Rain: ಕನ್ಯಾಕುಮಾರಿ ಸೇರಿ ತಮಿಳುನಾಡಿನ 4 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ

Weather Today: ಕನ್ಯಾಕುಮಾರಿ, ತೂತುಕುಡಿ, ತಿರುನಲ್ವೇಲಿ ಮತ್ತು ತೆಂಕಶಿಯಲ್ಲಿ ಇಂದು ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

Tamil Nadu Rain: ಕನ್ಯಾಕುಮಾರಿ ಸೇರಿ ತಮಿಳುನಾಡಿನ 4 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ
ತಮಿಳುನಾಡಿನಲ್ಲಿ ಮಳೆ
TV9 Web
| Edited By: |

Updated on: Dec 28, 2022 | 1:20 PM

Share

ಚೆನ್ನೈ: ತಮಿಳುನಾಡಿನ (Tamil Nadu Rains) 4 ಜಿಲ್ಲೆಗಳಲ್ಲಿ ಇಂದು (ಬುಧವಾರ) ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಕನ್ಯಾಕುಮಾರಿ (Kanyakumari), ತೂತುಕುಡಿ, ತಿರುನಲ್ವೇಲಿ ಮತ್ತು ತೆಂಕಶಿಯಲ್ಲಿ ಇಂದು ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಚೆನ್ನೈ ಸುತ್ತಮುತ್ತ ಕೂಡ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ (Karnataka Weather) ಹಲವೆಡೆ ಕೂಡ ಇಂದು ಮಳೆ ಮುಂದುವರೆದಿದೆ.

ಇಂದು ಲಕ್ಷದ್ವೀಪ, ಕೇರಳ ಮತ್ತು ತಮಿಳುನಾಡಿನಲ್ಲಿ ಗುಡುಗು ಸಹಿತ ಚದುರಿದಂತೆ ಮಳೆಯಾಗುವ ಮುನ್ಸೂಚನೆ ಇದೆ. ಅರುಣಾಚಲ ಪ್ರದೇಶ, ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಸಿಕ್ಕಿಂನಲ್ಲಿ ಚದುರಿದ ಮಳೆ ಸಂಭವಿಸಬಹುದು. ಉತ್ತರ ರಾಜಸ್ಥಾನ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ಶೀತದ ಅಲೆಯ ಪರಿಸ್ಥಿತಿಗಳು ಉಂಟಾಗಲಿದೆ. ಪಂಜಾಬ್‌ನಲ್ಲಿ ದಟ್ಟವಾದ ಮಂಜು ತುಂಬಿರುವ ಸಾಧ್ಯತೆಯಿದೆ. ಒಡಿಶಾ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಆಂಧ್ರಪ್ರದೇಶ, ರಾಜಸ್ಥಾನ, ದೆಹಲಿ ಮತ್ತು ಚಂಡೀಗಢಗಳಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದೆ. ದೇಶದ ಉಳಿದ ಭಾಗಗಳಲ್ಲಿ ಶುಷ್ಕ ಹವಾಮಾನವನ್ನು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: Bangalore Weather: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಬೆಂಗಳೂರಲ್ಲಿ ಮುಂದಿನ 2 ದಿನ ಮಳೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕೂಡ ಇಂದು ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಇಂದು ಕರ್ನಾಟಕದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಮೈಸೂರು ಮತ್ತು ರಾಮನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಇಂದು ಒಣಹವೆ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಚಳಿಯ ವಾತಾವರಣವೂ ಹೆಚ್ಚಾಗಲಿದೆ. ಅದರ ಜೊತೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: Bengaluru Rains: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ ಸಾಧ್ಯತೆ; ಕರಾವಳಿ, ಉತ್ತರ ಕರ್ನಾಟಕದಲ್ಲಿ ಒಣಹವೆ

ಇಂದು ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಡಿ. 30ರವರೆಗೂ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಇನ್ನೂ 2 ದಿನ ತುಂತುರು ಮಳೆಯಾಗಲಿದೆ. ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು