Tamil Nadu Rain: ತಮಿಳುನಾಡಿನ ಕರಾವಳಿ ಭಾಗದಲ್ಲಿ ಭಾರಿ ಮಳೆ ಸಾಧ್ಯತೆ, 6 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಕಳೆದ ರಾತ್ರಿಯಿಂದ ತಮಿಳುನಾಡಿನಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ 6 ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

Tamil Nadu Rain: ತಮಿಳುನಾಡಿನ ಕರಾವಳಿ ಭಾಗದಲ್ಲಿ ಭಾರಿ ಮಳೆ ಸಾಧ್ಯತೆ, 6 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ
ಮಳೆ
Image Credit source: NDTV

Updated on: Jun 19, 2023 | 8:36 AM

ಕಳೆದ ರಾತ್ರಿಯಿಂದ ತಮಿಳುನಾಡಿನಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ 6 ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಧ್ಯರಾತ್ರಿಯಿಂದ ಧಾರಾಕಾರ ಮಳೆಯಾಗುತ್ತಿದ್ದು, ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ವೆಲ್ಲೂರು, ರಾಣಿಪೇಟ್ ಮತ್ತು ಚೆಂಗಲ್‌ಪೇಟೆ ಜಿಲ್ಲಾಧಿಕಾರಿಗಳು ಸೋಮವಾರ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಭಾರೀ ಮಳೆ ಮತ್ತು ಮಳೆಯ ಮುನ್ಸೂಚನೆಯಿಂದಾಗಿ, ತಿರುವಳ್ಳೂರು ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿರುವಳ್ಳೂರಿನ ಜಿಲ್ಲಾಧಿಕಾರಿ ಕಚೇರಿಯ ಟಿಪ್ಪಣಿಯಲ್ಲಿ ತಿಳಿಸಲಾಗಿದೆ.

ಚೆನ್ನೈ, ತಿರುವಳ್ಳೂರು, ಚೆಂಗಲ್‌ಪೇಟ್, ಕಾಂಚೀಪುರಂ, ರಾಣಿಪೇಟ್, ತಿರುಪತ್ತೂರ್, ತಿರುವಣ್ಣಾಮಲೈ, ವಿಲ್ಲುಪುರಂ, ಕಡಲೂರು ಮತ್ತು ಕಲ್ಲಕುರಿಚಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಭಾರೀ ಮಳೆಯಿಂದಾಗಿ ಚೆನ್ನೈಗೆ ತೆರಳುತ್ತಿದ್ದ ಆರಕ್ಕೂ ಹೆಚ್ಚು ಅಂತಾರಾಷ್ಟ್ರೀಯ ವಿಮಾನಗಳನ್ನು ಬೆಂಗಳೂರಿಗೆ ತಿರುಗಿಸಲಾಗಿದೆ. ಮಳೆಯಿಂದಾಗಿ ಒಂದು 12ಕ್ಕಿಂತಲೂ ಅಧಿಕ ಅಂತರಾಷ್ಟ್ರೀಯ ವಿಮಾನಗಳ ನಿರ್ಗಮನದಲ್ಲಿ ವಿಳಂಬವಾಯಿತು.

ಮತ್ತಷ್ಟು ಓದಿ: Monsoon 2023: ಕರ್ನಾಟಕದಲ್ಲಿ ಚುರುಕುಗೊಂಡ ಮುಂಗಾರು, ಮುಂದಿನ 48 ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸಾಧ್ಯತೆ

ಚೆನ್ನೈನ ಮೀನಂಬಾಕ್ಕಂನಲ್ಲಿ ಸೋಮವಾರ ಮುಂಜಾನೆ 5.30ರವರೆಗೆ 13.7 ಸೆಂ.ಮೀ ಮಳೆಯಾಗಿದೆ. ರಾತ್ರಿಯಿಡೀ ಸುರಿದ ಮಳೆಯು ಸಾಕಷ್ಟು ಒಳಹರಿವು ಮತ್ತು ಜಲಾವೃತವನ್ನು ತಂದಿದೆ ಮತ್ತು ಜಲಮೂಲಗಳ ಮಟ್ಟದಲ್ಲಿ ಏರಿಕೆ ನಿರೀಕ್ಷಿಸಲಾಗಿದೆ. ಇಂದು ಬೆಳಗ್ಗೆ 10 ಗಂಟೆಯವರೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಚೆನ್ನೈ ಮತ್ತು ಹಲವು ಜಿಲ್ಲೆಗಳಲ್ಲಿ ಜೂನ್ 21 ರವರೆಗೆ ಹಗುರದಿಂದ ಸಾಧಾರಣ ಮಳೆ ಮುಂದುವರಿಯಬಹುದು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us