ಚೆನ್ನೈ: ತಮಿಳುನಾಡಿನಲ್ಲಿ ಮತ್ತೆ ಭಾರೀ ಮಳೆ ಶುರುವಾಗಿದ್ದು, ಚೆನ್ನೈ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತೂತುಕುಡಿ, ತಿರುನೆಲ್ವೆಲಿ, ರಾಮನಾಥಪುರಂ, ಪುದುಕ್ಕೊಟ್ಟೈ, ನಾಗಪಟ್ಟಣಂ ಜಿಲ್ಲೆಗಳಲ್ಲಿ ಇಂದು ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಎಡೆಬಿಡದೆ ಸುರಿಯುತ್ತಿರುವ ವ್ಯಾಪಕ ಮಳೆಗೆ ತಮಿಳುನಾಡು ತತ್ತರಿಸಿದೆ. ಚೆನ್ನೈ, ಕನ್ನಿಯಾಕುಮಾರಿ, ಕಡಲೂರು, ಮೈಲಾಡುತುರೈ, ನಾಗಪಟ್ಟಿಣಂ, ತಂಜಾವೂರು, ಪೆರಂಬಲೂರು, ತಿರುಚಿರಾಪಳ್ಳಿ, ಥೇಣಿ, ದಿಂಡಿಗಲ್, ರಾಮನಾಥಪುರಂ, ಅರಿಯಲೂರ್, ವಿರುದುನಗರ, ಪುದುಕ್ಕೊಟ್ಟೈ, ತೂತುಕುಡಿ, ತಿರುನೆಲ್ವೇಲಿ, ತಿರುನೆಲ್ವೇಲಿ, ತಿರುನೆಲ್ವೇಲಿ, ವಿರುದುನಗರ ಸೇರಿದಂತೆ 25 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ನಿನ್ನೆ ತಮಿಳುನಾಡಿನ ತೂತುಕುಡಿ ಮತ್ತು ರಾಮನಾಥಪುರಂ ಜಿಲ್ಲೆಗಳು ಸೇರಿದಂತೆ ತಮಿಳುನಾಡಿನ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿದಿದೆ. ಭಾರೀ ಮಳೆಯಿಂದಾಗಿ ತೂತುಕುಡಿಯ ತಿರುಚೆಂದೂರ್ ದೇವಾಲಯದ ಸುತ್ತಲೂ ಸಂಪೂರ್ಣ ಜಲಾವೃತಗೊಂಡಿರುವ ವಿಡಿಯೋಗಳು ವೈರಲ್ ಆಗಿತ್ತು. ಇಂದು ತಮಿಳುನಾಡಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮಳೆಯ ಹಿನ್ನೆಲೆ ರಾಮನಾಥಪುರಂ ಜಿಲ್ಲಾಧಿಕಾರಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ್ದು, ಪರಮಕುಡಿ, ಆರ್.ಎಸ್. ಮಂಗಲ ಸೇರಿದಂತೆ ತಗ್ಗು ಪ್ರದೇಶಗಳ ಪರಿಸ್ಥಿತಿಯನ್ನು ಕಂದಾಯ ಮತ್ತು ವಿಪತ್ತು ನಿರ್ವಹಣಾ ಅಧಿಕಾರಿಗಳು ನಿರಂತರವಾಗಿ ನಿಗಾ ವಹಿಸುತ್ತಿದ್ದಾರೆ. ಈಶಾನ್ಯ ಮಾನ್ಸೂನ್ ಆಗಮನ ಮತ್ತು ಭಾರೀ ಮಳೆಯಿಂದಾಗಿ ದೇವಾಲಯಗಳ ಪಟ್ಟಣವಾದ ರಾಮೇಶ್ವರಂಗೆ ಯಾತ್ರಾರ್ಥಿಗಳು ಹರಿದುಬರುತ್ತಿದ್ದಾರೆ ಎಂದು ಜಿಲ್ಲೆಯ ಪ್ರವಾಸೋದ್ಯಮ ಅಧಿಕಾರಿಗಳು ತಿಳಿಸಿದ್ದಾರೆ.
Current updates and situation of Traffic movements in Chennai City in view of North East Monsoon Rainfall.#chennaicitypolice#greaterchennaipolice#chennaipolice#shankarjiwalips#gcprescueteam pic.twitter.com/2hiGdULxO5
— GREATER CHENNAI POLICE -GCP (@chennaipolice_) November 25, 2021
ಇಂದು ಕನ್ಯಾಕುಮಾರಿ, ತಿರುನಲ್ವೇಲಿ ಮತ್ತು ತೆಂಕಾಸಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯಿದೆ. ತೂತುಕುಡಿ, ಕಡಲೂರು, ವಿಲ್ಲುಪುರಂ, ಚೆಂಗಲ್ಪಟ್ಟು, ಚೆನ್ನೈ, ಕಾಂಚೀಪುರಂ, ತಿರುವಳ್ಳೂರು, ಥೇಣಿ, ಮಧುರೈ, ಪುದುಕೊಟ್ಟೈ ಮತ್ತು ಪುದುಚೇರಿಯಲ್ಲೂ ಮಳೆ ಹೆಚ್ಚಾಗಲಿದೆ. ದಕ್ಷಿಣ ತಮಿಳುನಾಡು ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ತಮಿಳುನಾಡಿನಲ್ಲಿ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಹವಾಮಾನ ವೈಪರೀತ್ಯದಿಂದಾಗಿ ನಿನ್ನೆ ಚೆನ್ನೈ-ತೂತುಕುಡಿ ವಿಮಾನವನ್ನು ತಿರುಚ್ಚಿಗೆ ತಿರುಗಿಸಲಾಗಿತ್ತು. IMD ಹವಾಮಾನ ಮುನ್ಸೂಚನೆಯ ಪ್ರಕಾರ, ಆಂಧ್ರಪ್ರದೇಶದ ಕೆಲವು ಭಾಗಗಳಲ್ಲೂ ಮುಂದಿನ ಐದು ದಿನಗಳಲ್ಲಿ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡಿನ ರಾಜಧಾನಿ ಚೆನ್ನೈ, ತೂತುಕುಡಿ ಸೇರಿದಂತೆ ತಮಿಳುನಾಡಿನ ಹಲವು ಭಾಗಗಳಲ್ಲಿ ಇಂದಿನಿಂದ ಭಾರೀ ಮಳೆಯಾಗಲಿದೆ. ಸತತ ಮಳೆಯ ಹಿನ್ನೆಲೆಯಲ್ಲಿ 25 ಜಿಲ್ಲೆಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
ಇದನ್ನೂ ಓದಿ: Karnataka Rain: ಬೆಂಗಳೂರು, ಕರಾವಳಿ ಸೇರಿ ಹಲವೆಡೆ ನ. 28ರವರೆಗೂ ವ್ಯಾಪಕ ಮಳೆ; ಮತ್ತೊಂದು ಚಂಡಮಾರುತದ ಭೀತಿ