Chennai Rains Highlights: ತಮಿಳುನಾಡಿನಲ್ಲಿ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ; ಶಾಲೆಗಳಿಗೆ ರಜೆ ಘೋಷಣೆ

TV9 Web
| Updated By: sandhya thejappa

Updated on:Nov 08, 2021 | 5:36 PM

Tamil Nadu Rains Highlights: ಮಳೆಯ ಆರ್ಭಟಕ್ಕೆ ಜನ ವಸತಿ ಪ್ರದೇಶಗಳು ಮುಳುಗಡೆಯಾಗಿವೆ. ರಸ್ತೆಯಲ್ಲಿ ನೀರು ಹರಿಯುತ್ತಿರುವ ಕಾರಣ ವಾಹನ ಸವಾರರು ಪರದಾಡುತ್ತಿದ್ದಾರೆ.

Chennai Rains Highlights: ತಮಿಳುನಾಡಿನಲ್ಲಿ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ; ಶಾಲೆಗಳಿಗೆ ರಜೆ ಘೋಷಣೆ
ಮಳೆ

ತಮಿಳುನಾಡಿನಲ್ಲಿ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಭಾರಿ ಮಳೆಗೆ ನಗರದ ಸುತ್ತಾಮುತ್ತ ಜಲಾವೃತಗೊಂಡಿದ್ದು, ನವೆಂಬರ್ 11ರವರೆಗೂ ಮಳೆ ಆರ್ಭಟ ಮುಂದುವರಿಯುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಆರು ವರ್ಷದ ಬಳಿಕ ತಮಿಳುನಾಡಿನಲ್ಲಿ ಭಾರಿ ಮಳೆಯಾಗಿದೆ. ಮಳೆಯ ಆರ್ಭಟಕ್ಕೆ ಜನ ವಸತಿ ಪ್ರದೇಶಗಳು ಮುಳುಗಡೆಯಾಗಿವೆ. ರಸ್ತೆಯಲ್ಲಿ ನೀರು ಹರಿಯುತ್ತಿರುವ ಕಾರಣ ವಾಹನ ಸವಾರರು ಪರದಾಡುತ್ತಿದ್ದಾರೆ. ಇನ್ನು ಮಳೆ ಬಿಟ್ಟುಬಿಡದೆ ಸುರಿಯುತ್ತಿರುವುದರಿಂದ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಮುಂದಿನ 2 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

LIVE NEWS & UPDATES

The liveblog has ended.
  • 08 Nov 2021 05:18 PM (IST)

    ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್

    ಸತತ ಎರಡನೇ ದಿನವೂ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • 08 Nov 2021 05:02 PM (IST)

    ಪ್ರವಾಹ ಪೀಡಿತರಿಗೆ 3.36 ಲಕ್ಷ ಆಹಾರ ಪ್ಯಾಕೆಟ್‌ಗಳ ಪೂರೈಕೆ

    ಚೆನ್ನೈನಲ್ಲಿ ಭಾರಿ ಮಳೆಯಿಂದ ನಗರದ ಹಲವು ಪ್ರದೇಶಗಳು ಜಲಾವೃತವಾಗಿವೆ. ವಾಹನ ಸವಾರರು ಪರದಾಡುತಿದ್ದಾರೆ. ಪ್ರವಾಹ ಪೀಡಿತರಿಗೆ ಸುಮಾರು 3.36 ಲಕ್ಷ ಆಹಾರ ಪ್ಯಾಕೆಟ್‌ಗಳನ್ನು ಪೂರೈಸಿದೆ. 15 ಮನೆಗಳಲ್ಲಿ ಅಡುಗೆ ಮಾಡಲಾಗುತ್ತಿದೆ. ಚೆನ್ನೈನ ಎಲ್ಲಾ 200 ವಿಭಾಗಗಳಲ್ಲಿ ವೈದ್ಯಕೀಯ ಶಿಬಿರಗಳು ಮತ್ತು ಲಸಿಕೆ ಶಿಬಿರಗಳನ್ನು ಸಹ ಆಯೋಜಿಸಲಾಗಿದೆ.

  • 08 Nov 2021 04:54 PM (IST)

    ಪ್ರವಾಹ ಪೀಡಿತರಿಗೆ ಅಗತ್ಯ ವಸ್ತುಗಳನ್ನು ವಿತರಿಸಿದ ಸಿಎಂ ಎಂಕೆ ಸ್ಟಾಲಿನ್

    ತಮಿಳುನಾಡಿನ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಚೆನ್ನೈ ನಗರದ ರಾಯಪುರಂ ಮತ್ತು ಬಂದರು ಪ್ರದೇಶಗಳಲ್ಲಿ ಪ್ರವಾಹ ಪೀಡಿತರಿಗೆ ಅಗತ್ಯ ವಸ್ತುಗಳನ್ನು ಮತ್ತು ಆಹಾರವನ್ನು ವಿತರಿಸಿದರು.

  • 08 Nov 2021 01:48 PM (IST)

    ಭಾರಿ ಮಳೆಗೆ ಕೊರಟ್ಟೂರು ಪ್ರದೇಶ ಜಲಾವೃತ

    ಭಾರೀ ಮಳೆಯಿಂದ ಚೆನ್ನೈನ ಕೆಲವು ಭಾಗಗಳಲ್ಲಿ ನೀರು ನಿಂತಿದೆ. ಕೊರಟ್ಟೂರು ಪ್ರದೇಶದಲ್ಲಿ ಇಂದು ಬೆಳಿಗ್ಗೆ ನೀರು ನಿಂತಿದೆ. ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಕರಾವಳಿ ಪ್ರದೇಶಗಳಲ್ಲಿ ನವೆಂಬರ್ 9ರಿಂದ11 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಅಂತ ಐಎಮ್ಡಿ ತಿಳಿಸಿದೆ.

  • 08 Nov 2021 01:04 PM (IST)

    ಪ್ರವಾಹ ಪೀಡಿತ ಪ್ರದೇಶಗಳಿಗೆ ಊಟದ ಪ್ಯಾಕೆಟ್‌ಗಳ ಹಸ್ತಾಂತರ

    ಚೆನ್ನೈ ನಾಗರಿಕ ಸಂಸ್ಥೆಯು ಪ್ರವಾಹ ಪೀಡಿತರಿಗೆ ಊಟವನ್ನು ನೀಡಿದೆ. ಸುಮಾರು 65,000 ಊಟದ ಪ್ಯಾಕೆಟ್​ಗಳನ್ನು ಹಸ್ತಾಂತರ ಮಾಡಲಾಗಿದೆ.

  • 08 Nov 2021 12:33 PM (IST)

    ಚೆನ್ನೈನ ಪೆರಂಬೂರ್​ನಲ್ಲಿ 14 ಸೆಂ.ಮೀ ಮಳೆ ದಾಖಲು

    24 ಗಂಟೆಗಳಲ್ಲಿ ಚೆನ್ನೈ ಜಿಲ್ಲೆಯ ಪೆರಂಬೂರ್‌ನಲ್ಲಿ 14 ಸೆಂ.ಮೀ ಮಳೆಯಾಗಿದೆ. ಚೆಂಗಲ್ಪಟ್ಟು ಜಿಲ್ಲೆಯ ಚೆಯ್ಯೂರ್ ಮತ್ತು ಮಧುರಾಂತಗಂನಲ್ಲಿ ತಲಾ 13 ಸೆಂ.ಮೀ, ಚೆನ್ನೈನ ತೊಂಡಯಾರ್‌ಪೇಟ್‌ನಲ್ಲಿ 10 ಸೆಂ.ಮೀ., ಅಯ್ಯನವರಂ, ಚೆನ್ನೈ ಕಲೆಕ್ಟರೇಟ್ ಮತ್ತು ಗುಮ್ಮಿಡಿಪೂಂಡಿಯಲ್ಲಿ ತಲಾ 9 ಸೆಂ.ಮೀ ಮಳೆಯಾಗಿದೆ ಎಂದು ತಿಳಿದುಬಂದಿದೆ.

  • 08 Nov 2021 12:15 PM (IST)

    24 ಗಂಟೆಗಳಲ್ಲಿ ಚೆನ್ನೈನಲ್ಲಿ 134.29 ಮಿಮೀ ಮಳೆ ದಾಖಲು

    ಚೆನ್ನೈನಲ್ಲಿ ಕಳೆದ 24 ಗಂಟೆಗಳಲ್ಲಿ 134.29 ಮಿಮೀ ಮಳೆಯಾಗಿರುವ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಸ್ತೆಗಳು ಸಂಪೂರ್ಣ ಜಲಾವೃಗೊಂಡಿವೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಮನೆಗಳು ಮುಳುಗಡೆಯಾಗಿವೆ.

  • 08 Nov 2021 11:45 AM (IST)

    ಪುದುಚೇರಿಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

    ಇಂದು ಚೆನ್ನೈ, ವಿಲ್ಲುಪುರಂ, ಕಡಲೂರು, ನಾಗಪಟ್ಟಣಂ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಪುದುಚೇರಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

  • 08 Nov 2021 11:29 AM (IST)

    ದಾಖಲೆ ಮಳೆಗೆ ಚೆನ್ನೈ ತತ್ತರ

    ಆಂಧ್ರಪ್ರದೇಶದ ಕರಾವಳಿ ಭಾಗ, ತಮಿಳುನಾಡಿನಲ್ಲಿ ನವೆಂಬರ್ 11 ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆಯಿದೆ. ಭಾರತೀಯ ಹವಾಮಾನ ಇಲಾಖೆಯಿಂದ ಮುನ್ಸೂಚನೆಯಿದ್ದು, ತಮಿಳುನಾಡಿನ ಹಲವು ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶನಿವಾರ ರಾತ್ರಿ 23 ಸೆಂಟಿ ಮೀಟರ್ ಮಳೆಯಾಗಿದ್ದು, ಚೆನ್ನೈ ತತ್ತರವಾಗಿದೆ.

  • 08 Nov 2021 11:22 AM (IST)

    ತಮಿಳುನಾಡಿನಲ್ಲಿ 12 ಗಂಟೆ ಅವಧಿಯಲ್ಲಿ ಭಾರಿ ಮಳೆ

    ತಮಿಳುನಾಡಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಮಹಾ ಮಳೆಗೆ ಚೆನ್ನೈ ಮಹಾನಗರ ತತ್ತರಿಸಿದೆ. ಕಳೆದ 12 ಗಂಟೆ ಅವಧಿಯಲ್ಲಿ ಭಾರಿ ಮಳೆಯಾಗಿದೆ. ಚೆನ್ನೈನ ಹಲವು ರಸ್ತೆಗಳು ಕೆರೆಗಳಂತಾಗಿವೆ. ಚೆಂಬರಂ ಬಾಕ್ಕಂ, ಪೊಂಡಿ, ಪುಳಲ್ ಡ್ಯಾಂಗಳು ಭರ್ತಿಯಾದ ಹಿನ್ನೆಲೆ ನೀರು ಬಿಡುಗಡೆ ಮಾಡಲಾಗಿದೆ.

  • 08 Nov 2021 11:05 AM (IST)

    ಆಂಧ್ರ, ತಮಿಳುನಾಡಿನಲ್ಲಿ ನವೆಂಬರ್ 11ರವರೆಗೂ ಭಾರಿ ಮಳೆಯಾಗುವ ಸಾಧ್ಯತೆ

    9ರಿಂದ 11 ರವರೆಗೆ ಆಂಧ್ರ ಮತ್ತು ತಮಿಳುನಾಡಿನ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು IMD  ತಿಳಿಸಿದೆ.

  • 08 Nov 2021 10:58 AM (IST)

    ಭಾರಿ ಮಳೆಗೆ ವಾಹನ ಸವಾರರು ತೀವ್ರ ಪರದಾಟ!

    ಭಾರಿ ಮಳೆಗೆ ವಾಹನ ಸವಾರರು ತೀವ್ರ ಪರದಾಟ ಪಡುತ್ತಿದ್ದಾರೆ. ಚೆಂಬರಂ ಬಾಕ್ಕಂ, ಪೊಂಡಿ, ಪುಳಲ್ ಡ್ಯಾಂಗಳು ಭರ್ತಿಯಾದ ಹಿನ್ನೆಲೆ ನೀರು ಬಿಡುಗಡೆ ಮಾಡಲಾಗಿದೆ. ಚೆನ್ನೈನ ಉತ್ತರ, ದಕ್ಷಿಣ ಭಾಗದ ಹಲವೆಡೆ ಜಲಾವೃತಗೊಂಡಿವೆ.

    ವಾಹನ ಸವಾರರ ಪರದಾಟ

  • 08 Nov 2021 10:56 AM (IST)

    ಆರು ವರ್ಷಗಳ ಬಳಿಕ ತಮಿಳುನಾಡಿನಲ್ಲಿ ಭಾರಿ ಮಳೆ

    ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಮಾತ್ರವಲ್ಲದೇ ಆದಷ್ಟು ಮನೆಯಲ್ಲೇ ಇರುವಂತೆ ಜನರಿಗೆ ಸೂಚನೆಯನ್ನೂ ನೀಡಿದೆ. 2015ರಿಂದ ಈಚೆಗೆ ಚೆನ್ನೈನಲ್ಲಿ ಇಷ್ಟು ಪ್ರಮಾಣದಲ್ಲಿ ಮಳೆ ಆಗಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

  • 08 Nov 2021 10:55 AM (IST)

    ತಮಿಳುನಾಡಿಗೆ ಅಗತ್ಯ ನೆರವು ನೀಡುವ ಭರವಸೆ ನೀಡಿದ ಪ್ರಧಾನಿ

    ತಮಿಳುನಾಡಿನಲ್ಲಿ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಮಳೆ ಹಾನಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್​ನಿಂದ ಮಾಹಿತಿ ಪಡೆದು, ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

  • 08 Nov 2021 10:52 AM (IST)

    ಮುಂದಿನ 2 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ

    ಮುಂದಿನ 2 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಧಾರಾಕಾರ ಮಳೆಗೆ ಚೆನ್ನೈ ಮಹಾನಗರ ಸ್ತಬ್ಧವಾಗಿದೆ. ಚೆನ್ನೈ ಏರ್​ಪೋರ್ಟ್​ ರನ್​ವೇ ಕೂಡ ಬಂದ್ ಆಗಿದ್ದು, ಚೆನ್ನೈ ಲೋಕಲ್ ಟ್ರೈನ್​ಗಳು ಸ್ತಬ್ಧಗೊಂಡಿವೆ.

  • 08 Nov 2021 10:51 AM (IST)

    ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

    ಭಾರಿ ಮಳೆಗೆ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ತಿರುವಳ್ಳೂರ್, ಚೆಂಗಲ್ಪಟ್ಟು, ಕಾಂಚಿಪುರ ಸೇರಿ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ.

  • 08 Nov 2021 10:50 AM (IST)

    ಮಹಾಮಳೆಗೆ ತತ್ತರಿಸಿದ ತಮಿಳುನಾಡು; ಮುಂದಿನ 2 ದಿನ ಭಾರಿ ಮಳೆ

    ಹಲವು ವರ್ಷಗಳ ನಂತರ ತಮಿಳುನಾಡಿನಲ್ಲಿ ಭಾರಿ ಮಳೆಯಾಗುತ್ತಿದೆ. ಮಳೆಯ ಆರ್ಭಟಕ್ಕೆ ಜನ ಜೀವನ ಅಸ್ತವ್ಯಸ್ತವಾಗಿದ್ದು, ಭೀತಿ ಎದುರಾಗಿದೆ.

  • Published On - Nov 08,2021 10:48 AM

    Follow us
    ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
    ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
    Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
    Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
    ‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
    ‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
    ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
    ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
    ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
    ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
    ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
    ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
    ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
    ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
    ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
    ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
    ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
    ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
    ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
    ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?