AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿ ಮತವೂ ಅಮೂಲ್ಯ: ತಿರುಪ್ಪತ್ತೂರಿನಲ್ಲಿ ಒಂದೇ ಒಂದು ಮತದಿಂದ ಡಿಎಂಕೆ ಸಚಿವರನ್ನು ಸೋಲಿಸಿದ ಶ್ರೀನಿವಾಸ ಸೇತುಪತಿ

Tamil Nadu Assembly election results 2026: ತಮಿಳುನಾಡಿನ ತಿರುಪ್ಪತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಡಿಎಂಕೆ ಸಚಿವ ಕೆ.ಆರ್. ಪೆರಿಯಕರುಪ್ಪನ್ ಕೇವಲ ಒಂದೇ ಒಂದು ಮತದ ಅಂತರದಿಂದ ನಟ ವಿಜಯ್ ಅವರ ಟಿವಿಕೆ ಪಕ್ಷದ ಅಭ್ಯರ್ಥಿ ಶ್ರೀನಿವಾಸ ಸೇತುಪತಿ ವಿರುದ್ಧ ಸೋತಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಂದು ಮತದ ಮಹತ್ವವನ್ನು ಈ ಫಲಿತಾಂಶ ಎತ್ತಿ ತೋರಿಸುತ್ತದೆ. ನಿಮ್ಮ ಒಂದು ಮತವೂ ನಿರ್ಣಾಯಕವಾಗಬಲ್ಲದು ಎಂಬ ಸಂದೇಶವನ್ನು ತಿರುಪ್ಪತ್ತೂರು ಚುನಾವಣೆ ಸಾರಿದೆ.

ಪ್ರತಿ ಮತವೂ ಅಮೂಲ್ಯ: ತಿರುಪ್ಪತ್ತೂರಿನಲ್ಲಿ ಒಂದೇ ಒಂದು ಮತದಿಂದ ಡಿಎಂಕೆ ಸಚಿವರನ್ನು ಸೋಲಿಸಿದ ಶ್ರೀನಿವಾಸ ಸೇತುಪತಿ
ಪೆರಿಯಕರುಪ್ಪನ್ -ಶ್ರೀನಿವಾಸImage Credit source: Patrika
ನಯನಾ ರಾಜೀವ್
|

Updated on: May 05, 2026 | 11:56 AM

Share

ಚೆನ್ನೈ, ಮೇ 05: ಪ್ರಜಾಪ್ರಭುತ್ವದಲ್ಲಿ ಪ್ರತಿ ಮತವೂ ಎಷ್ಟು ನಿರ್ಣಾಯಕ ಎಂಬುದಕ್ಕೆ ತಮಿಳುನಾಡಿ(Tamil Nadu)ನ ತಿರುಪ್ಪತ್ತೂರು ವಿಧಾನಸಭಾ ಕ್ಷೇತ್ರದ ಫಲಿತಾಂಶವು ಒಂದು ಜೀವಂತ ಸಾಕ್ಷಿಯಾಗಿದೆ. ದಶಕಗಳ ಕಾಲದ ರಾಜಕೀಯ ಅನುಭವವಿರುವ ಡಿಎಂಕೆ ಸಚಿವ ಕೆ.ಆರ್. ಪೆರಿಯಕರುಪ್ಪನ್ ಅವರು ನಟ ವಿಜಯ್ ನೇತೃತ್ವದ ಟಿವಿಕೆ (ತಮಿಳಗ ವೆಟ್ರಿ ಕಳಗಂ) ಪಕ್ಷದ ಅಭ್ಯರ್ಥಿ  ಶ್ರೀನಿವಾಸ ಸೇತುಪತಿ ವಿರುದ್ಧ ಕೇವಲ ಒಂದೇ ಒಂದು ಮತದ ಅಂತರದಿಂದ ಸೋಲೊಪ್ಪಿಕೊಂಡಿದ್ದಾರೆ.

ಉಸಿರು ಬಿಗಿಹಿಡಿಯುವಂತಿದ್ದ ಮತ ಎಣಿಕೆ ಮತ ಎಣಿಕೆಯ ಆರಂಭದಿಂದಲೂ ಪೆರಿಯಕರುಪ್ಪನ್ ಮತ್ತು ಸೀನಿವಾಸ ಸೇತುಪತಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಪ್ರತಿ ಸುತ್ತಿನಲ್ಲೂ ಮುನ್ನಡೆಯು ಕ್ಷಣಕ್ಷಣಕ್ಕೂ ಬದಲಾಗುತ್ತಿತ್ತು. ಅಂತಿಮ ಸುತ್ತಿನ ಎಣಿಕೆ ಮುಗಿದಾಗ ಇಬ್ಬರ ನಡುವಿನ ವ್ಯತ್ಯಾಸ ಕೇವಲ ಒಂದು ಮತವಾಗಿತ್ತು. ಮರು ಎಣಿಕೆಯ ನಂತರವೂ ಫಲಿತಾಂಶದಲ್ಲಿ ಯಾವುದೇ ಬದಲಾವಣೆಯಾಗದ ಕಾರಣ, ಸೀನಿವಾಸ ಸೇತುಪತಿ ಅವರನ್ನು ವಿಜೇತರೆಂದು ಘೋಷಿಸಲಾಯಿತು.

ಟಿವಿಕೆಯ ಚೊಚ್ಚಲ ಚುನಾವಣೆಯಲ್ಲಿ ಐತಿಹಾಸಿಕ ಜಯ ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ಇದು ಮೊದಲ ಚುನಾವಣೆಯಾಗಿದ್ದು, ಆಡಳಿತಾರೂಢ ಡಿಎಂಕೆಯ ಪ್ರಭಾವಿ ಸಚಿವರನ್ನು ಸೋಲಿಸಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಯುವ ನಾಯಕ ಶ್ರೀನಿವಾಸ ಸೇತುಪತಿ ಅವರ ಈ ‘ಜಾಕ್‌ಪಾಟ್’ ಗೆಲುವು ಹೊಸ ರಾಜಕೀಯ ಸಮೀಕರಣಗಳಿಗೆ ನಾಂದಿ ಹಾಡಿದೆ.

ಮತ್ತಷ್ಟು ಓದಿ: ತಮಿಳುನಾಡು ಚುನಾವಣೆ ಫಲಿತಾಂಶಕ್ಕೂ ಮುನ್ನ ಶಿರಡಿ ಸಾಯಿಬಾಬಾ ದರ್ಶನ ಪಡೆದ ವಿಜಯ್

ಚುನಾವಣಾ ವ್ಯವಸ್ಥೆಯಲ್ಲಿ ಮತದಾರರ ಪಟ್ಟಿಯ ಶುದ್ಧೀಕರಣ ಮತ್ತು ನೈಜ ಮತದಾರರ ಪಾಲ್ಗೊಳ್ಳುವಿಕೆ ಎಷ್ಟು ಮುಖ್ಯ ಎಂಬುದನ್ನು ಈ ಫಲಿತಾಂಶ ತೋರಿಸುತ್ತದೆ. ಒಂದು ಮತದ ಮೌಲ್ಯ ಎಷ್ಟಿರುತ್ತದೆ ಎಂಬುದಕ್ಕೆ ಈ ಅಂತರವೇ ಉತ್ತರವಾಗಿದೆ. ಇತ್ತೀಚೆಗೆ ಜಾರಿಯಾದ ವಿಶೇಷ ತೀವ್ರ ಪರಿಷ್ಕರಣೆಯ (SIR) ನಂತರದ ಪಾರದರ್ಶಕ ವ್ಯವಸ್ಥೆಯು ಇಂತಹ ಅತ್ಯಂತ ನಿಖರ ಮತ್ತು ಆಶ್ಚರ್ಯಕರ ಫಲಿತಾಂಶಗಳಿಗೆ ದಾರಿ ಮಾಡಿಕೊಟ್ಟಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಈ ಸೋಲು ಡಿಎಂಕೆ ಪಾಲಿಗೆ ಆಘಾತಕಾರಿಯಾಗಿದ್ದರೂ, ಪ್ರಜಾಪ್ರಭುತ್ವದ ಶಕ್ತಿಯನ್ನು ಇದು ಮತ್ತೊಮ್ಮೆ ಸಾಬೀತುಪಡಿಸಿದೆ. ನನ್ನ ಒಂದು ಮತದಿಂದ ಏನಾಗಲಿದೆ? ಎಂದು ಭಾವಿಸುವ ಪ್ರತಿಯೊಬ್ಬ ಮತದಾರನಿಗೂ ತಿರುಪ್ಪತ್ತೂರಿನ ಈ ಫಲಿತಾಂಶವು ದೊಡ್ಡ ಪಾಠವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?