ತಮಿಳುನಾಡಿನಲ್ಲಿ ವಿದ್ಯಾರ್ಥಿನಿಯರಿಗೆ ಮದ್ಯ ಸೇವಿಸಲು ಒತ್ತಾಯಿಸಿದ ಶಿಕ್ಷಕನ ಬಂಧನ

|

Updated on: Nov 12, 2024 | 4:00 PM

ಶಿಕ್ಷಕ ಪೋನ್‌ ಸಿಂಗ್ ಅವರು ಕೆಲವು ವಿದ್ಯಾರ್ಥಿಗಳನ್ನು ಮದ್ಯ ಸೇವಿಸುವಂತೆ ಒತ್ತಾಯಿಸಿದ್ದಾರೆ, ಅಶ್ಲೀಲ ಕಾಮೆಂಟ್‌ಗಳನ್ನು ಮಾಡಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳು ಆಘಾತಕ್ಕೊಳಗಾಗಿದ್ದಾರೆ. ಈ ಘಟನೆಯನ್ನು ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ತಿಳಿಸಿದರೂ ಶಾಲೆಯ ಆಡಳಿತ ಮಂಡಳಿ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ತಮಿಳುನಾಡಿನಲ್ಲಿ ವಿದ್ಯಾರ್ಥಿನಿಯರಿಗೆ ಮದ್ಯ ಸೇವಿಸಲು ಒತ್ತಾಯಿಸಿದ ಶಿಕ್ಷಕನ ಬಂಧನ
ಸಾಂದರ್ಭಿಕ ಚಿತ್ರ
Follow us on

ತೂತುಕುಡಿ: ತಮಿಳುನಾಡಿನ ತೂತುಕುಡಿ ಜಿಲ್ಲೆಯ ಉದಂಗುಡಿಯ ಖಾಸಗಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಲೈಂಗಿಕ ಕಿರುಕುಳದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಸಲ್ಮಾ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪೋನ್‌ ಸಿಂಗ್, ವಿದ್ಯಾರ್ಥಿಗಳನ್ನು ಮದ್ಯಪಾನ ಮಾಡಲು ಒತ್ತಾಯಿಸಿದ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ಬಂಧಿಸಲಾಗಿದೆ.

ವರದಿಗಳ ಪ್ರಕಾರ, ಅಕ್ಟೋಬರ್ 22ರಂದು ತೂತುಕುಡಿಯಲ್ಲಿ ನಡೆದ ವಲಯ ಮಟ್ಟದ ಕ್ರೀಡಾ ಸ್ಪರ್ಧೆಯಲ್ಲಿ ಈ ಘಟನೆ ಸಂಭವಿಸಿದೆ. ಈ ಸ್ಪರ್ಧೆಯನ್ನು ಮರುದಿನಕ್ಕೆ ಮುಂದೂಡಿದ ನಂತರ ಪೋನ್​ಸಿಂಗ್, ಶಾಲೆಯ 9 ವಿದ್ಯಾರ್ಥಿಗಳು ಮತ್ತು 6 ವಿದ್ಯಾರ್ಥಿನಿಯರೊಂದಿಗೆ ರಾತ್ರಿ ಹಾಸ್ಟೆಲ್‌ನಲ್ಲಿ ಉಳಿದುಕೊಂಡರು.

ಇದನ್ನೂ ಓದಿ: ಮಂಗಳೂರಿನಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಕೇಸ್​: ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಪೋನ್‌ಸಿಂಗ್ ಅವರು ಕೆಲವು ವಿದ್ಯಾರ್ಥಿನಿಯರನ್ನು ಮದ್ಯ ಸೇವಿಸುವಂತೆ ಒತ್ತಾಯಿಸಿದರು ಮತ್ತು ಅಶ್ಲೀಲ, ಅವಹೇಳನಕಾರಿ ಭಾಷೆಯಲ್ಲಿ ಮಾತನಾಡಿದರು ಎಂದು ಆರೋಪಿಸಲಾಗಿದೆ. ಕುಡಿಯದಿದ್ದರೆ ಮುಂದಿನ ಸ್ಪರ್ಧೆಗಳಲ್ಲಿ ಭಾಗವಹಿಸದಂತೆ ತಡೆಯುವುದಾಗಿಯೂ ಬೆದರಿಕೆ ಹಾಕಿದ್ದಾರೆ. ಈ ಘಟನೆಯ ಕುರಿತು ವಿದ್ಯಾರ್ಥಿಗಳು ಪೋಷಕರಿಗೆ ತಿಳಿಸಿದರೂ ಶಾಲೆಯ ಆಡಳಿತ ಮಂಡಳಿ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ. ಆದರೆ, ನಿನ್ನೆ ಈ ವಿಷಯ ಬೆಳಕಿಗೆ ಬಂದಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಶಾಲೆಯ ಮುಂದೆ ಜಮಾಯಿಸಿದ ಪೋಷಕರು ಹಾಗೂ ಸಂಬಂಧಿಕರು ಆಡಳಿತ ಮಂಡಳಿ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳನ್ನು ವಿಚಾರಣೆಗೊಳಪಡಿಸಲಾಗಿದ್ದು, ಶಾಲಾ ಆಡಳಿತ ಮಂಡಳಿ ಫೋನ್​ಸಿಂಗ್ ಅವರನ್ನು ವಜಾಗೊಳಿಸಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: Viral: ಭತ್ತದ ಗದ್ದೆಯಲ್ಲಿ ಶ್ವಾನಗಳು ಮತ್ತು ಮುಂಗುಸಿ ನಡುವೆ ನಡೆಯಿತು ಬಿಗ್‌ ಫೈಟ್;‌ ವಿಡಿಯೋ ವೈರಲ್‌

ದೂರಿನ ಮೇರೆಗೆ ತಿರುಚೆಂದೂರು ಎಲ್ಲಾ ಮಹಿಳಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕೊಯಮತ್ತೂರಿನಲ್ಲಿ ತಲೆಮರೆಸಿಕೊಂಡಿದ್ದ ಪೋನ್‌ಸಿಂಗ್‌ನನ್ನು ನಿನ್ನೆ ರಾತ್ರಿ ಬಂಧಿಸಿದ್ದಾರೆ. ಆತನನ್ನು ತಿರುಚೆಂದೂರಿಗೆ ಕರೆತರಲಾಗಿದ್ದು, ಸದ್ಯ ವಿಚಾರಣೆ ನಡೆಸಲಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ