ತಮಿಳುನಾಡು : ನಿರ್ಮಾಣ ಹಂತದ ಕಟ್ಟಡ ಕುಸಿದು ಆರು ಕಾರ್ಮಿಕರು ಸಾವು
ನಿರ್ಮಾಣ ಹಂತದ ಕಟ್ಟಡ ಕುಸಿದು ಆರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪಿದ್ದಾರೆ. ಈ ಘಟನೆ ತಮಿಳುನಾಡಿನ ಊಟಿಯ ವ್‌ಡೇಲ್ ಬಳಿ ನಡೆದಿದೆ ಎಂದು ಹೇಳಲಾಗಿದರೆ. ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬರು ನಾಪತ್ತೆಯಾಗಿದ್ದಾರೆ.
ಊಟಿ, ಫೆ.7: ತಮಿಳುನಾಡಿನ (Tamil Nadu) ಊಟಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಆರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಇದೀಗ ರಕ್ಷಣೆ ಕಾರ್ಯಚರಣೆ ಮಾಡಲಾಗುತ್ತಿದೆ. ಈ ಘಟನೆ ಲವ್‌ಡೇಲ್ ಬಳಿ ನಡೆದಿದೆ ಎಂದು ಹೇಳಲಾಗಿದರೆ. ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬರು ನಾಪತ್ತೆಯಾಗಿದ್ದಾರೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಸ್ಥಳದಲ್ಲಿ ರಕ್ಷಣಾ ಕಾರ್ಯಚರಣೆ ಮುಂದುವರಿದ್ದು, ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದೆ. ಅಪಾಯಕ್ಕೆ ಸಿಲುಕಿಕೊಂಡಿರುವ 8 ಜನರನ್ನು ರಕ್ಷಣೆ ಮಾಡಲಾಗಿದೆ. ಆದರೆ ಗೋಡೆ ಕುಸಿತದಿಂದ 6 ಮಂದಿ ಜೀವ ಕಳೆದುಕೊಂಡಿದ್ದಾರೆ. ಗಂಭೀರವಾಗಿ ಗೊಂಡಿರುವ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಇಬ್ಬರು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾರೆ. ಇನ್ನೊಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ಹೇಳಿದ್ದಾರೆ.
ಮೃತರನ್ನು ಸಂಗೀತಾ (35), ಸಕೀಲಾ (36), ಪಾಕಿಯಾ (36), ಉಮಾ (35) ಮತ್ತು ಮುತ್ತುಲಕ್ಷ್ಮಿ (35) ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸ್ಥಳೀಯ ಮೂಲಗಳ ಪ್ರಕಾರ, ಲವ್‌ಡೇಲ್ ಪಕ್ಕದ ಗಾಂಧಿನಗರ ಪ್ರದೇಶದಲ್ಲಿ ಹೊಸ ಮನೆ ನಿರ್ಮಾಣ ಕಾರ್ಯ ನಡೆಯುತ್ತಿತ್ತು. 7 ಮಹಿಳೆಯರು ಸೇರಿದಂತೆ 8 ಜನ ಕಟ್ಟಡ ಕಾರ್ಮಿಕರು ಇಂದು ಹೊಸ ಮನೆಗೆ ಶೌಚಾಲಯ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದರು. ಸೆಪ್ಟಿಕ್ ಟ್ಯಾಂಕ್ಗಾಗಿ ತೋಡಿದ ಗುಂಡಿಯ ಬಳಿ ಮಣ್ಣು ಕುಸಿದು ಕಾರ್ಮಿಕರ ಮೇಲೆ ಬಿದ್ದಿದೆ.
ಇದನ್ನೂ ಓದಿ: ಗುದದ್ವಾರದ ಮೂಲಕ 6 ಇಂಚಿನ ಮೊಬೈಲ್ ಹಾಕಿದ್ದು ಹೇಗೆ? ಕೈದಿಯ ಉತ್ತರ ಕೇಳಿ ಬೆಚ್ಚಿ ಬಿದ್ದ ಅಧಿಕಾರಿಗಳು
ಇನ್ನು ಸ್ಥಳೀಯರು ಹೇಳುವಂತೆ ನೀಲಗಿರಿ ಜಿಲ್ಲೆಯಲ್ಲಿ ನಿರ್ಮಾಣ ಕಾಮಗಾರಿಗೆ ವಿವಿಧ ನಿರ್ಬಂಧಗಳನ್ನು ವಿಧಿಸಲಾಗಿದ್ದರೂ, ಹಲವೆಡೆ ಇಂತಹ ಅಕ್ರಮ ನಿರ್ಮಾಣಗಳು ನಡೆಯುತ್ತಿದೆ. ಸೂಕ್ತ ಅನುಮತಿ ಇಲ್ಲದೇ ನಡೆಯುತ್ತಿರುವ ಇಂತಹ ನಿರ್ಮಾಣ ಕಾಮಗಾರಿ ವೇಳೆ ಭೂಕುಸಿತಗಳು ನಡೆಯುತ್ತಿದೆ ಎಂದು ಹೇಳಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:30 pm, Wed, 7 February 24