Tamil Nadu: ತಮಿಳುನಾಡಿನಲ್ಲಿ ನಕಲಿ ಮದ್ಯ ಸೇವಿಸಿ 10 ಮಂದಿ ಸಾವು, ಹಲವರು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ತಮಿಳುನಾಡಿನ ವಿಲ್ಲುಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ಮೂವರು ಮಹಿಳೆಯರು ಸೇರಿದಂತೆ 10 ಮಂದಿ ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿದ್ದಾರೆ. ವಿಲ್ಲುಪುರಂ ಜಿಲ್ಲೆಯ ಮರಕ್ಕನಂ ಬಳಿಯ ಎಕ್ಕಿರಕುಪ್ಪಂ ನಿವಾಸಿಗಳಾದ ಆರು ಮಂದಿ ಭಾನುವಾರ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

Tamil Nadu: ತಮಿಳುನಾಡಿನಲ್ಲಿ ನಕಲಿ ಮದ್ಯ ಸೇವಿಸಿ 10 ಮಂದಿ ಸಾವು, ಹಲವರು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಮದ್ಯ
Follow us
ನಯನಾ ರಾಜೀವ್
|

Updated on: May 15, 2023 | 8:07 AM

ತಮಿಳುನಾಡಿನ ವಿಲ್ಲುಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ಮೂವರು ಮಹಿಳೆಯರು ಸೇರಿದಂತೆ 10 ಮಂದಿ ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿದ್ದಾರೆ. ವಿಲ್ಲುಪುರಂ ಜಿಲ್ಲೆಯ ಮರಕ್ಕನಂ ಬಳಿಯ ಎಕ್ಕಿರಕುಪ್ಪಂ ನಿವಾಸಿಗಳಾದ ಆರು ಮಂದಿ ಭಾನುವಾರ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ ಇಬ್ಬರು ಸಾವನ್ನಪ್ಪಿದ್ದು, ಭಾನುವಾರ ದಂಪತಿ ಸಾವನ್ನಪ್ಪಿದ್ದು, ನಾಲ್ವರು ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿದ್ದಾರೆ. ಪ್ರಸ್ತುತ, ಎರಡು ಡಜನ್‌ಗಿಂತಲೂ ಹೆಚ್ಚು ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಮಾಹಿತಿಯ ಪ್ರಕಾರ ಅವರ ಆರೋಗ್ಯ ಉತ್ತಮವಾಗಿದೆ.

ಪೊಲೀಸ್ ಮಹಾನಿರೀಕ್ಷಕ (ಉತ್ತರ) ಎನ್ ಕಣ್ಣನ್ ಅವರು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಎಲ್ಲಾ 10 ಸಂತ್ರಸ್ತರು ಎಥೆನಾಲ್-ಮೆಥೆನಾಲ್ ಪದಾರ್ಥಗಳೊಂದಿಗೆ ಮದ್ಯವನ್ನು ಸೇವಿಸಿದ್ದಾರೆ ಎಂದು ಹೇಳಿದರು.

ನಕಲಿ ಮದ್ಯ ಸೇವನೆಯಿಂದ ಮೃತಪಟ್ಟಿರುವ ಎರಡು ಪ್ರತ್ಯೇಕ ಘಟನೆಗಳು ವರದಿಯಾಗಿವೆ ಮತ್ತು ಇದುವರೆಗೆ ಎರಡು ಘಟನೆಗಳ ನಡುವಿನ ಸಂಬಂಧದ ಯಾವುದೇ ಪುರಾವೆಗಳು ಪೊಲೀಸರಿಗೆ ಸಿಕ್ಕಿಲ್ಲ.

ಮತ್ತಷ್ಟು ಓದಿ: Bihar: ನಕಲಿ ಮದ್ಯ ಸೇವನೆ, ಬಿಹಾರದಲ್ಲಿ 22 ಮಂದಿ ಸಾವು

ವಿಲ್ಲುಪುರಂ ಜಿಲ್ಲೆಯಲ್ಲಿ ವಾಂತಿಭೇದಿ, ಕಣ್ಣುಗಳಲ್ಲಿ ಉರಿ, ತಲೆ ಸುತ್ತುವಿಕೆಯಿಂದ ಆರು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಹಲವರು ಮೃತಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಆರೋಪಿ ಅಮರನ್‌ನನ್ನು ಬಂಧಿಸಲಾಗಿದ್ದು, ನಕಲಿ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಕಣ್ಣುಗಳಲ್ಲಿ ಉರಿ ಮತ್ತು ತಲೆಸುತ್ತು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಾಗಿರುವ 33 ಜನರ ಸ್ಥಿತಿ ಚಿಂತಾಜನಕವಾಗಿದೆ.

ಐವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಪೈಕಿ 4 ಮಂದಿ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ. ಮರಣೋತ್ತರ ಪರೀಕ್ಷೆ ನಡೆದಿದೆ. ಚೆಂಗಲ್ಪಟ್ಟು ಜಿಲ್ಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಆರೋಪಿ ಅಮ್ಮಾವಸಾಯಿಯನ್ನು ಬಂಧಿಸಲಾಗಿದೆ. ಎರಡೂ ಘಟನೆಗಳಲ್ಲಿ ಕೆಲವು ಆರೋಪಿಗಳು ತಲೆಮರೆಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ