AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu: ಡ್ರಗ್ಸ್ ಮತ್ತು ಶಸ್ತ್ರಾಸ್ತ್ರಗಳ ಕಳ್ಳಸಾಗಣೆ: ಪಾಕ್ ನಂಟಿದ್ದ ಶ್ರೀಲಂಕಾದ 9 ಮಂದಿಯ ಬಂಧನ

ಶ್ರೀಲಂಕಾ ಮತ್ತು ಭಾರತದ ನಡುವೆ ಅಕ್ರಮ ಡ್ರಗ್ಸ್ ಮತ್ತು ಶಸ್ತ್ರಾಸ್ತ್ರ ಕಳ್ಳಸಾಗಣೆ ವಿಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪಾಕ್ ನಂಟು ಹೊಂದಿದ್ದ 9 ಮಂದಿ ಶ್ರೀಲಂಕಾದವರನ್ನು ಬಂಧಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Tamil Nadu: ಡ್ರಗ್ಸ್ ಮತ್ತು ಶಸ್ತ್ರಾಸ್ತ್ರಗಳ ಕಳ್ಳಸಾಗಣೆ: ಪಾಕ್ ನಂಟಿದ್ದ ಶ್ರೀಲಂಕಾದ 9 ಮಂದಿಯ ಬಂಧನ
NIA
Follow us
TV9 Web
| Updated By: ನಯನಾ ರಾಜೀವ್

Updated on: Dec 20, 2022 | 8:56 AM

ಶ್ರೀಲಂಕಾ ಮತ್ತು ಭಾರತದ ನಡುವೆ ಅಕ್ರಮ ಡ್ರಗ್ಸ್ ಮತ್ತು ಶಸ್ತ್ರಾಸ್ತ್ರ ಕಳ್ಳಸಾಗಣೆ ವಿಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪಾಕ್ ನಂಟು ಹೊಂದಿದ್ದ 9 ಮಂದಿ ಶ್ರೀಲಂಕಾದವರನ್ನು ಬಂಧಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆರೋಪಿಗಳನ್ನು ತಮಿಳುನಾಡಿನ ತಿರುಚ್ಚಿ ವಿಶೇಷ ಶಿಬಿರದಿಂದ ಬಂಧಿಸಲಾಗಿದೆ. ಬಂಧಿತರನ್ನು ಸಿ.ಗುಣಶೇಖರನ್, ಪುಷ್ಪರಾಜ, ಮೊಹಮ್ಮದ್ ಅಸ್ಮಿನ್, ಅಲಹಪ್ಪೆರುಮಗ ಸುನೀಲ್ ಘಾಮಿನಿ ಫೋನ್ಸಿಯಾ, ಸ್ಟಾನ್ಲಿ ಕೆನ್ನಾಡಿ ಫೆರ್ನಾಂಡೋ, ಲಾಡಿಯಾ ಚಂದ್ರಸೇನ, ಧನುಕ್ಕ ರೋಶನ್, ವೆಲ್ಲಾ ಸುರಂಕಾ ಮತ್ತು ತಿಲಿಪನ್ ಎಂದು ಗುರುತಿಸಲಾಗಿದೆ. ಈ ಪ್ರಕರಣವು ಸಿ ಗುಣಶೇಖರನ್ ಅಲಿಯಾಸ್ ಗುಣ ಮತ್ತು ಪುಷ್ಪರಾಜ ಅಲಿಯಾಸ್ ಪೂಕುಟ್ಟಿ ಕಣ್ಣಾ ಮೂಲಕ ನಿಯಂತ್ರಿಸಲ್ಪಡುವ ಶ್ರೀಲಂಕಾದ ಡ್ರಗ್ ಮಾಫಿಯಾದ ಚಟುವಟಿಕೆಗಳಿಗೆ ಸಂಬಂಧಿಸಿದೆ.

ಇವರು ಪಾಕಿಸ್ತಾನ ಮೂಲದ ಮಾದಕವಸ್ತು ಮತ್ತು ಶಸ್ತ್ರಾಸ್ತ್ರ ಪೂರೈಕೆದಾರ ಹಾಜಿ ಸಲೀಂ ಅವರೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಹೊರ ರಾಜ್ಯಗಳಿಂದ ಅಕ್ರಮವಾಗಿ ಶಸ್ತ್ರಾಸ್ತ್ರ ಪೂರೈಕೆ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್

ಜುಲೈ 8 ರಂದು ಏಜೆನ್ಸಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದೆ. ಪ್ರಕರಣ ದಾಖಲಾದ ನಂತರ ರಾಜ್ಯದ ಚೆನ್ನೈ, ತಿರುಪ್ಪೂರ್, ಚೆಂಗಲ್ಪಟ್ಟು ಮತ್ತು ತಿರುಚಿರಾಪಳ್ಳಿ ಜಿಲ್ಲೆಗಳಲ್ಲಿ ಆರೋಪಿಗಳು ಮತ್ತು ಶಂಕಿತರ ಮನೆಗಳ ಮೇಲೆ ದಾಳಿ ನಡೆಸಲಾಯಿತು. ಶ್ರೀಲಂಕಾ ತಮಿಳು ನಿರಾಶ್ರಿತರು ತಂಗಿರುವ ತಿರುಚ್ಚಿ ವಿಶೇಷ ಶಿಬಿರದಿಂದ ಎಲ್ಲಾ ಒಂಬತ್ತು ಜನರನ್ನು ಬಂಧಿಸಲಾಗಿದೆ ಎಂದು ಎನ್‌ಐಎ ಅಧಿಕಾರಿ ತಿಳಿಸಿದ್ದಾರೆ.

ಅಕ್ರಮ ಡ್ರಗ್ಸ್ ಮತ್ತು ಶಸ್ತ್ರಾಸ್ತ್ರ ವ್ಯಾಪಾರ ಮಾಧ್ಯಮ ವರದಿಗಳ ಪ್ರಕಾರ, ಈ ಪ್ರಕರಣವು ಗುಣಶೇಖರನ್ ಮತ್ತು ಪುಷ್ಪರಾಜರಿಂದ ನಿಯಂತ್ರಿಸಲ್ಪಟ್ಟಿರುವ ಶ್ರೀಲಂಕಾದ ಡ್ರಗ್ ಮಾಫಿಯಾಕ್ಕೆ ಸಂಬಂಧಿಸಿದೆ, ಇದು ಭಾರತದಲ್ಲಿ ಎಲ್‌ಟಿಟಿಇ ಪುನರುಜ್ಜೀವನಕ್ಕಾಗಿ ನಿಧಿ ಸಂಗ್ರಹಿಸಲು ಪಾಕಿಸ್ತಾನ ಮೂಲದ ಶಸ್ತ್ರಾಸ್ತ್ರ ಮತ್ತು ಡ್ರಗ್ ಪೂರೈಕೆದಾರ ಹಾಜಿ ಸಲೀಮ್‌ನ ಸಹಯೋಗದೊಂದಿಗೆ ಅಕ್ರಮ ಡ್ರಗ್ಸ್ ಮತ್ತು ಶಸ್ತ್ರಾಸ್ತ್ರಗಳನ್ನು ಕಳ್ಳಸಾಗಣೆ ಮಾಡುತ್ತಿದೆ ಮತ್ತು ಶ್ರೀಲಂಕಾ ವ್ಯಾಪಾರ ಮಾಡುತ್ತಿದೆ ಎಂದು ಹೇಳಲಾಗಿದೆ.

ಎನ್‌ಐಎಗೆ ದೊಡ್ಡ ಯಶಸ್ಸು ಸಿಕ್ಕಿದೆ ಈ ಪ್ರಕರಣದಲ್ಲಿ ಎನ್‌ಐಎ ಜುಲೈ 8 ರಂದು ಭಾರತೀಯ ದಂಡ ಸಂಹಿತೆ, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಮತ್ತು ಮಾದಕ ದ್ರವ್ಯಗಳು ಮತ್ತು ಸೈಕೋಟ್ರೋಪಿಕ್ ವಸ್ತುಗಳ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ