AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಾಲಯಗಳಲ್ಲಿ ಸೆಪ್ಟೆಂಬರ್ 1 ರಿಂದ ‘ನೋ ಮೊಬೈಲ್’: ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ತಮಿಳುನಾಡು ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇಧಿಸಲಾಗುವುದು ಎಂದು HR&CE ಸಚಿವರು ಘೋಷಿಸಿದ್ದಾರೆ. ದೇವಸ್ಥಾನಗಳ ಪಾವಿತ್ರ್ಯತೆ ಕಾಪಾಡಲು, ರೀಲ್ಸ್ ಮತ್ತು ವೀಡಿಯೋ ಚಿತ್ರೀಕರಣ ತಡೆಯಲು ಈ ಕ್ರಮ. ಭಕ್ತಾದಿಗಳಿಗೆ ಮೊಬೈಲ್ ಇಡಲು ಡೆಪಾಸಿಟ್ ಕೌಂಟರ್‌ಗಳ ವ್ಯವಸ್ಥೆ ಮಾಡಲಾಗುವುದು. ವಿಐಪಿ ಭೇಟಿಗಳಿಗೂ ಕಟ್ಟುನಿಟ್ಟಿನ ನಿಯಮ ಜಾರಿಗೆ ತರಲಾಗಿದೆ.

ದೇವಾಲಯಗಳಲ್ಲಿ ಸೆಪ್ಟೆಂಬರ್ 1 ರಿಂದ 'ನೋ ಮೊಬೈಲ್': ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Aug 10, 2026 | 12:29 PM

Share

ತಮಿಳುನಾಡು, ಆ.10: ತಮಿಳುನಾಡಿನಾದ್ಯಂತ ಇರುವ ಎಲ್ಲಾ ಪ್ರಸಿದ್ಧ ದೇವಸ್ಥಾನಗಳ ಒಳಗೆ ಮೊಬೈಲ್ ಫೋನ್‌ಗಳ ಬಳಕೆಯನ್ನು ಸೆಪ್ಟೆಂಬರ್ 1 ರಿಂದ ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದರ್ಮಾದಾಯ (HR&CE) ಸಚಿವ ಎಸ್. ರಮೇಶ್ ಘೋಷಿಸಿದ್ದಾರೆ.

ತಿರುಚಿಯ ಶ್ರೀರಂಗಂನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಭಕ್ತಾದಿಗಳು ದೇವಸ್ಥಾನ ಪ್ರವೇಶಿಸುವ ಮೊದಲು ತಮ್ಮ ಮೊಬೈಲ್ ಫೋನ್‌ಗಳನ್ನು ಇಡಲು ದೇವಸ್ಥಾನದ ಹೊರಗೆ ಅಥವಾ ಪ್ರವೇಶ ದ್ವಾರದಲ್ಲೇ ಪ್ರತ್ಯೇಕ ಕೌಂಟರ್‌ಗಳನ್ನು ತೆರೆಯಲಾಗುವುದು ಎಂದು ತಿಳಿಸಿದ್ದಾರೆ.

ನಿಷೇಧಕ್ಕೆ ಮುಖ್ಯ ಕಾರಣವೇನು?:

ಇತ್ತೀಚಿನ ದಿನಗಳಲ್ಲಿ ಹಲವು ದೇವಸ್ಥಾನಗಳ ಗರ್ಭಗುಡಿ ಹಾಗೂ ಪವಿತ್ರ ಪೂಜಾ ಕೈಂಕರ್ಯಗಳ ವೀಡಿಯೊಗಳನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿಸಲಾಗುತ್ತಿತ್ತು. ದೇವಸ್ಥಾನಗಳ ಆವರಣದಲ್ಲಿ ಸಾಮಾಜಿಕ ಜಾಲತಾಣಗಳಿಗಾಗಿ ‘ರೀಲ್ಸ್’ ಮತ್ತು ಶಾರ್ಟ್ಸ್ ವೀಡಿಯೊಗಳನ್ನು ಮಾಡುವುದನ್ನು ತಡೆಯುವುದು ಹಾಗೂ ಪವಿತ್ರತೆಯನ್ನು ಕಾಪಾಡುವುದು ಈ ನಿರ್ಧಾರದ ಮುಖ್ಯ ಉದ್ದೇಶವಾಗಿದೆ.

ಠೇವಣಿ ಕೌಂಟರ್ ಮತ್ತು ಸೇವಾ ಶುಲ್ಕ:

ರಾಜ್ಯದ ಎಲ್ಲಾ ಪ್ರಮುಖ ದೇವಾಲಯಗಳಲ್ಲಿ ಭಕ್ತರ ಮೊಬೈಲ್ ಫೋನ್‌ಗಳನ್ನು ಸುರಕ್ಷಿತವಾಗಿಡಲು ಪ್ರತ್ಯೇಕ ‘ಡೆಪಾಸಿಟ್ ಕೌಂಟರ್’ ಸ್ಥಾಪಿಸಲಾಗುತ್ತದೆ. ವರದಿಗಳ ಪ್ರಕಾರ, ಭಕ್ತರು ದೇವದರ್ಶನ ಮುಗಿಸಿ ಬರುವವರೆಗೆ ಮೊಬೈಲ್ ಸುರಕ್ಷತೆಗಾಗಿ ಪ್ರತಿ ಫೋನ್‌ಗೆ 5 ರೂ ಶುಲ್ಕ ವಿಧಿಸಲಾಗುತ್ತದೆ.

ಇದನ್ನೂ ಓದಿ: ಜಮೀನಿನಲ್ಲಿ ಹೂತುಹಾಕಿದ್ದ 5 ಲಕ್ಷ ರೂ. ನೋಟುಗಳನ್ನು ತಿಂದ ಗೆದ್ದಲು: ಮರೆವಿನಿಂದ ರೈತನಿಗೆ ಎದುರಾಯ್ತು ಬಹುದೊಡ್ಡ ಸಂಕಷ್ಟ

ವಿಐಪಿ, ರಾಜಕಾರಣಿಗಳು ಮತ್ತು ಚಿತ್ರನಟರಿಗೆ ಬಿಗಿ ನಿಯಮಗಳು:

ಸಾಮಾನ್ಯ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ವಿಐಪಿಗಳ (VIP) ಭೇಟಿಗೆ ಸಂಬಂಧಿಸಿದಂತೆ ಇಲಾಖೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ರಾಜಕಾರಣಿಗಳು, ಚಲನಚಿತ್ರ ತಾರೆಯರು ಹಾಗೂ ಇತರ ಗಣ್ಯರು ದೇವಾಲಯಕ್ಕೆ ಭೇಟಿ ನೀಡುವ ಒಂದು ದಿನ ಮುಂಚಿತವಾಗಿ HR&CE ಆಯುಕ್ತರಿಗೆ ಮಾಹಿತಿ ನೀಡಬೇಕು. ಭೇಟಿಯ ಸಮಯ ಹಾಗೂ ಜೊತೆಯಲ್ಲಿ ಬರುವವರ ಸಂಖ್ಯೆಯನ್ನು ಸ್ಪಷ್ಟಪಡಿಸಬೇಕು. ತುರ್ತು ಸಂದರ್ಭದ ವಿಐಪಿ ಭೇಟಿಗಳಿದ್ದರೂ, ಸಾಮಾನ್ಯ ಭಕ್ತರ ದರ್ಶನಕ್ಕೆ ಯಾವುದೇ ಅಡಚಣೆಯಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ. ವಿಐಪಿ ಭೇಟಿಗಳ ಸಂದರ್ಭದಲ್ಲೂ ದೇವಾಲಯದ ಒಳಗೆ ಯಾವುದೇ ರೀತಿಯ ವೀಡಿಯೋಗ್ರಫಿ ಅಥವಾ ಫೋಟೋಗ್ರಫಿಗೆ ಅವಕಾಶವಿರುವುದಿಲ್ಲ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್