Bomb Threat: ತಮಿಳುನಾಡಿನ 2 ಶಾಲೆಗಳಿಗೆ ಬಾಂಬ್ ಬೆದರಿಕೆ

ತಮಿಳುನಾಡಿನ ಎರಡು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಭೀತಿ ಮೂಡಿಸಿದೆ. ಫೆಬ್ರವರಿಯಲ್ಲಿ ಚೆನ್ನೈನ 5 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿತ್ತು, ಅದಕ್ಕೂ ಮುನ್ನ ದೆಹಲಿ ಪಬ್ಲಿಕ್ ಶಾಲೆ ಹಾಗೂ ಮುಂಬೈನ 6 ಕಡೆ ಬಾಂಬ್​ ಇಟ್ಟಿರುವುದಾಗಿಯೂ ಬೆದರಿಕೆಯ ಇ ಮೇಲೆ ಬಂದಿತ್ತು. ತನಿಖೆ ನಡೆಸಿದಾಗ ಅದೃಷ್ಟವಶಾತ್ ಎಲ್ಲಿಯೂ ಬಾಂಬ್​ ಪತ್ತೆಯಾಗಿರಲಿಲ್ಲ.

Bomb Threat: ತಮಿಳುನಾಡಿನ 2 ಶಾಲೆಗಳಿಗೆ ಬಾಂಬ್ ಬೆದರಿಕೆ
ಶಾಲೆImage Credit source: India Today
Follow us
ನಯನಾ ರಾಜೀವ್
|

Updated on:Mar 04, 2024 | 10:59 AM

ತಮಿಳುನಾಡಿನ ಎರಡು ಶಾಲೆಗಳಿಗೆ ಬಾಂಬ್ ಬೆದರಿಕೆ(Bomb Threat) ಬಂದಿದ್ದು, ವಿದ್ಯಾರ್ಥಿಗಳು, ಸಿಬ್ಬಂದಿ ಮತ್ತು ಪೋಷಕರಲ್ಲಿ ಭೀತಿ ಮೂಡಿಸಿದೆ. ಶಾಲೆಗಳನ್ನು ಕೊಯಮತ್ತೂರಿನ PSBB ಮಿಲೇನಿಯಮ್ ಶಾಲೆ ಮತ್ತು ಕಾಂಚೀಪುರಂ ಜಿಲ್ಲೆಯ ಖಾಸಗಿ ಶಾಲೆ ಎಂದು ಗುರುತಿಸಲಾಗಿದೆ.

ಪಿಎಸ್‌ಬಿಬಿ ಮಿಲೇನಿಯಂ ಶಾಲೆಗೆ ಭಾನುವಾರ ರಾತ್ರಿ ಇಮೇಲ್ ಬಂದಿದ್ದರೆ, ಸೋಮವಾರ ಬೆಳಗ್ಗೆ ಶಾಲೆಗೆ ಕರೆ ಮಾಡಲಾಗಿದೆ. ಬೆದರಿಕೆ ಇ-ಮೇಲ್ ಹಿನ್ನೆಲೆಯಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ನಂತರ ಸ್ಥಳದಲ್ಲಿ ಯಾವುದೇ ಬಾಂಬ್ ಪತ್ತೆಯಾಗಿಲ್ಲದ ಕಾರಣ ಶಿಕ್ಷಕರು, ಪೋಷಕರು, ಮಕ್ಕಳು ನಿಟ್ಟುಸಿರುಬಿಟ್ಟಿದ್ದಾರೆ.

ಮತ್ತೊಂದು ಘಟನೆ ಚೆನ್ನೈನ 5 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ, ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿದ ಶಿಕ್ಷಕರು ಚೆನ್ನೈನ 5 ಖ್ಯಾತ ಖಾಸಗಿ ಶಾಲೆ(Private School)ಗಳಿಗೆ ಅಪರಿಚಿತ ವ್ಯಕ್ತಿಯೊಬ್ಬ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ(Bomb Threat)ಯ ಸಂದೇಶ ರವಾನಿಸಿದ್ದು ಆತಂಕ ಸೃಷ್ಟಿಸಿದೆ. ಗೋಪಾಲಪುರಂ, ಜೆಜೆ ನಗರ, ಆರ್‌ಎ ಪುರಂ, ಅಣ್ಣಾನಗರ, ಪರಿಮಳ ಶಾಲೆಗಳಿಗೆ ಬೆದರಿಕೆ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಸ್ನಿಫರ್ ಡಾಗ್‌ಗಳ ಸಹಾಯದಿಂದ ಪರೀಕ್ಷೆ ನಡೆಸುತ್ತಿದೆ.

ಶಾಲಾ ಆಡಳಿತ ಮಂಡಳಿಯು ಸಂದೇಶ ಕಳುಹಿಸಿದ ನಂತರ ಪೋಷಕರು ಬಂದು ಮಕ್ಕಳನ್ನು ಕರೆದುಕೊಂಡು ಹೋಗುತ್ತಾರೆ. ಈ ನಡುವೆ ಯಾರೂ ಭಯಪಡಬೇಡಿ ಎಂದು ಪೊಲೀಸರು ಮನವಿ ಮಾಡಿದ್ದಾರೆ. ಇ-ಮೇಲ್ ಮೂಲಕ ಬೆದರಿಕೆ ಕಳುಹಿಸಿದವರ ಪತ್ತೆಗೆ ಕಾರ್ಯಾಚರಣೆ ನಡೆದಿತ್ತು.

ಈ ಬಗ್ಗೆ ಮೆಟ್ರೋಪಾಲಿಟನ್ ಚೆನ್ನೈ ಕಾರ್ಪೊರೇಷನ್ ಪೊಲೀಸ್ ಎಕ್ಸ್ ಸೈಟ್ ಪ್ರಕಟಿಸಿರುವ ವರದಿಯಲ್ಲಿ, ಚೆನ್ನೈ ಕಾರ್ಪೊರೇಷನ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲವು ಶಿಕ್ಷಣ ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಇರುವ ಇ-ಮೇಲ್ ಗಳು ಬಂದಿವೆ. ಮೇಲ್‌ನಲ್ಲಿ ಉಲ್ಲೇಖಿಸಲಾದ ಶಿಕ್ಷಣ ಸಂಸ್ಥೆಗಳಿಗೆ ಸ್ನಿಫರ್ ಡಾಗ್‌ಗಳ ತಂಡವನ್ನು ರವಾನಿಸಲಾಗಿದೆ. ಇ-ಮೇಲ್‌ಗಳನ್ನು ಕಳುಹಿಸಿದ ಆರೋಪಿಯನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ಈ ಮಧ್ಯೆ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ, ಎಂದು ಚೆನ್ನೈ ಕಾರ್ಪೊರೇಷನ್ ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಮುಂಬೈ: 6 ಕಡೆಗಳಲ್ಲಿ ಬಾಂಬ್​ ಇಟ್ಟಿರುವುದಾಗಿ ಟ್ರಾಫಿಕ್​ ಪೊಲೀಸ್​ ಕಂಟ್ರೋಲ್​ ರೂಂಗೆ ಬೆದರಿಕೆ ಕರೆ

ದೆಹಲಿ ಪಬ್ಲಿಕ್ ಶಾಲೆ ಬಾಂಬ್ ಬೆದರಿಕೆ ರಾಷ್ಟ್ರ ರಾಜಧಾನಿ ದೆಹಲಿಯ ಆರ್‌ಕೆ ಪುರಂ ಪ್ರದೇಶದ ದೆಹಲಿ ಪಬ್ಲಿಕ್ ಸ್ಕೂಲ್‌ಗೆ ಶುಕ್ರವಾರ ಬಾಂಬ್ ಬೆದರಿಕೆ(Bomb Threat) ಕರೆ ಬಂದಿದೆ. ಸುಮಾರು 10 ಗಂಟೆಗೆ ಕರೆ ಸ್ವೀಕರಿಸಿದ ನಂತರ ಮಕ್ಕಳನ್ನು ಸ್ಥಳಾಂತರಿಸಲಾಗಿದೆ. ಕರೆ ಬಂದ ಬಗ್ಗೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಕಳೆದ ಎರಡು ಗಂಟೆಗಳಿಂದ ಶೋಧ ಕಾರ್ಯ ನಡೆಯುತ್ತಿದೆ. ಆದರೆ, ಪೊಲೀಸರಿಗೆ ಇದುವರೆಗೆ ಯಾವುದೇ ಅನುಮಾನಾಸ್ಪದ ಸಂಗತಿಗಳು ಪತ್ತೆಯಾಗಿಲ್ಲ.

ಮುಂಬೈನ 6 ಸ್ಥಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಕರೆ ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ ಬಾಂಬ್​ ಸ್ಫೋಟಿಸುವುದಾಗಿ ಅಪರಿಚಿತರು ಬೆದರಿಕೆ ಹಾಕಿದ್ದಾರೆ. ಮುಂಬೈನ 6 ಸ್ಥಳಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಮುಂಬೈ ಟ್ರಾಫಿಕ್​ ಪೊಲೀಸ್​ ಕಂಟ್ರೋಲ್​ ರೂಂಗೆ ಅಪರಿಚಿತರು ಬೆದರಿಕೆ ಕರೆ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಗರದ 6 ಸ್ಥಳಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಎಂಬ ಸುದ್ದಿ ತಿಳಿದ ತಕ್ಷಣ ಮುಂಬೈ ಸಂಚಾರ ಪೊಲೀಸ್ ನಿಯಂತ್ರಣ ಕೊಠಡಿಗೆ ತಲುಪಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:52 am, Mon, 4 March 24

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು