Tamil Nadu: ಮನೆಯ ಗೋಡೆ ಕುಸಿದು ಮಹಿಳೆ ಸಾವು

| Updated By: ಅಕ್ಷಯ್​ ಪಲ್ಲಮಜಲು​​

Updated on: Nov 01, 2022 | 5:46 PM

ತಮಿಳುನಾಡಿನ ಪುಲಿಯಾಂತೋಪ್‌ ದುರಂತ ಘಟನೆಯೊಂದು ನಡೆದಿದೆ. ಚೆನ್ನೈನ ಪುಲಿಯಾಂತೋಪ್‌ನಲ್ಲಿ ಮಂಗಳವಾರ ಮನೆಯ ಗೋಡೆ ಕುಸಿದು 46 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ.

Tamil Nadu: ಮನೆಯ ಗೋಡೆ ಕುಸಿದು ಮಹಿಳೆ ಸಾವು
ಸಾಂದರ್ಭಿಕ ಚಿತ್ರ
Follow us on

ಚೆನ್ನೈ: ತಮಿಳುನಾಡಿನ ಪುಲಿಯಾಂತೋಪ್‌ ದುರಂತ ಘಟನೆಯೊಂದು ನಡೆದಿದೆ. ಚೆನ್ನೈನ ಪುಲಿಯಾಂತೋಪ್‌ನಲ್ಲಿ ಮಂಗಳವಾರ ಮನೆಯ ಗೋಡೆ ಕುಸಿದು 46 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ 8.45ಕ್ಕೆ ಈ ಘಟನೆ ನಡೆದಿದ್ದು, ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ನಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಿಳೆ ಅವಶೇಷಗಳ ನಡುವೆ ಶವವಾಗಿ ಬಿದ್ದಿರುವುದು ಕಂಡುಬಂದಿದೆ.

ಚೆನ್ನೈನಲ್ಲಿ ಸೋಮವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗೋಡೆ ಕುಸಿದಿದೆ ಎಂದು ವರದಿಯಾಗಿದೆ. ಚೆನ್ನೈ ಮತ್ತು ಕಡಲೂರು ಸೇರಿದಂತೆ ತಮಿಳುನಾಡಿನ ಕರಾವಳಿಯ ಹಲವಾರು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ಗುಡುಗು ಸಹಿತ ಮಳೆ ಬರಲಿದೆ ಎಂದು ಹೇಳಲಾಗಿದೆ. ನಿರೀಕ್ಷಿತ ಮಳೆಯ ಕಾರಣ ತಿರುವಾರೂರ್, ನಾಗಪಟ್ಟಣಂ, ಮೈಲಾಡುತುರೈ, ಚೆನ್ನೈ, ಚೆಂಗಲ್ಪಟ್ಟು, ಕಾಂಚೀಪುರಂ, ತಿರುವಳ್ಳೂರು ಮತ್ತು ತಂಜಾವೂರು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ತಮಿಳುನಾಡು ಎಂಕೆ ಸ್ಟಾಲಿನ್ ಅವರು ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮತ್ತು ಚೆನ್ನೈನಲ್ಲಿ ಮಳೆಯಿಂದಾಗಿ ಯಾವುದೇ ಸಮಸ್ಯೆಗಳಿಲ್ಲ ಎಂದು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

Published On - 5:45 pm, Tue, 1 November 22