ತಾನು ಸತ್ತರೆ ಮಕ್ಕಳಿಗೆ ಪರಿಹಾರ ಧನ ಸಿಗುತ್ತದೆ ಎಂದು ಬಸ್ಸಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಅಮ್ಮ

ಸಿಂಗಲ್ ಮದರ್ ಆಗಿರುವ ಪಾಪ್ಪತಿ ಅವರ ಮಕ್ಕಳು ಕಾಲೇಜಿನಲ್ಲಿ ಓದುತ್ತಿದ್ದಾರೆ. ಮಗಳು ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ ಕೋರ್ಸ್‌ನ ಅಂತಿಮ ವರ್ಷದಲ್ಲಿ ಓದುತ್ತಿದ್ದು ಮಗ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆರ್ಕಿಟೆಕ್ಚರ್ ಓದುತ್ತಿದ್ದಾನೆ. ಆಕೆ ಬಡ ಕುಟುಂಬದವಳು. ಯಾರೋ ಅವಳನ್ನು ದಾರಿ ತಪ್ಪಿಸಿದ್ದಾರೆ. ನಾವು ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾನು ಸತ್ತರೆ ಮಕ್ಕಳಿಗೆ ಪರಿಹಾರ ಧನ ಸಿಗುತ್ತದೆ ಎಂದು ಬಸ್ಸಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಅಮ್ಮ
ಸೇಲಂ ಮಹಿಳೆ
Follow us
ರಶ್ಮಿ ಕಲ್ಲಕಟ್ಟ
|

Updated on:Jul 18, 2023 | 4:44 PM

ಚೆನ್ನೈ ಜುಲೈ 18: ತಮಿಳುನಾಡಿನ  ಸೇಲಂನಲ್ಲಿ (Salem )ಮಹಿಳೆಯೊಬ್ಬರು ಚಲಿಸುತ್ತಿದ್ದ ಬಸ್ಸಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾನು ಸತ್ತರೆ ಸಿಗುವ ಪರಿಹಾರದಿಂದ ತನ್ನ ಮಕ್ಕಳ ಕಾಲೇಜು ಶುಲ್ಕವನ್ನು ಪಾವತಿಸಬಹುದು ಎಂಬ ಉದ್ದೇಶದಿಂದ ಆಕೆ ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ. ಸೇಲಂ ಕಲೆಕ್ಟರೇಟ್‌ನಲ್ಲಿ ತಾತ್ಕಾಲಿಕ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದ 39 ವರ್ಷದ ಪಾಪ್ಪತಿ ಈ ರೀತಿ ಬಸ್ಸಿನ ಮುಂದೆ ಹಾರಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಈ ಘಟನೆಯ 48 ಸೆಕೆಂಡ್‌ಗಳ ಸಿಸಿಟಿವಿ ವಿಡಿಯೊದಲ್ಲಿ ಮಹಿಳೆ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವುದು ಕಾಣಿಸುತ್ತದೆ. ನಂತರ ವೇಗವಾಗಿ ಬರುತ್ತಿದ್ದ ಬಸ್‌ನ ಕಡೆಗೆ ಇದ್ದಕ್ಕಿದ್ದಂತೆ ರಸ್ತೆ ದಾಟುತ್ತಿರುವುದನ್ನು ತೋರಿಸುತ್ತದೆ. ಬಸ್ಸು ಆಕೆಗೆ ಡಿಕ್ಕಿ ಹೊಡೆದು ಆಕೆ ರಸ್ತೆಯಲ್ಲಿ ಬೀಳುತ್ತಿರುವುದು ಕಾಣಿಸುತ್ತದೆ

“ಕಳೆದ ತಿಂಗಳು ಈ ಘಟನೆ ನಡೆದಿದ್ದು, ಆಕೆ ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ. ಆರಂಭದಲ್ಲಿ, ನಾವು ಅಪಘಾತದಿಂದ ಸಾವಿನ ಪ್ರಕರಣವನ್ನು ದಾಖಲಿಸಿದ್ದೇವೆ. ಈಗ ನಾವು ಅದನ್ನು ಬದಲಾಯಿಸುತ್ತಿದ್ದೇವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿರುವುದಾಗಿ ಎನ್​​ಡಿಟಿವಿ ವರದಿ ಮಾಡಿದೆ.

ಸಿಂಗಲ್ ಮದರ್ ಆಗಿರುವ ಪಾಪ್ಪತಿ ಅವರ ಮಕ್ಕಳು ಕಾಲೇಜಿನಲ್ಲಿ ಓದುತ್ತಿದ್ದಾರೆ. ಮಗಳು ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ ಕೋರ್ಸ್‌ನ ಅಂತಿಮ ವರ್ಷದಲ್ಲಿ ಓದುತ್ತಿದ್ದು ಮಗ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆರ್ಕಿಟೆಕ್ಚರ್ ಓದುತ್ತಿದ್ದಾನೆ. ಆಕೆ ಬಡ ಕುಟುಂಬದವಳು. ಯಾರೋ ಅವಳನ್ನು ದಾರಿ ತಪ್ಪಿಸಿದ್ದಾರೆ. ನಾವು ತನಿಖೆ ನಡೆಸುತ್ತಿದ್ದೇವೆ” ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಯೇ ವಿಜಯ್ ಅನ್ನು ಕಣಕ್ಕಿಳಿಸಿದೆಯೇ? ತಮಿಳುನಾಡು ರಾಜಕೀಯದಲ್ಲಿ ಹೀಗೊಂದು ಚರ್ಚೆ

ಆದಾಗ್ಯೂ, ಪಾಪ್ಪತಿ ಅವರ ಮಗ ಈ ವರದಿಗಳನ್ನು ನಿರಾಕರಿಸಿದ್ದು, ಅದು “ನಕಲಿ ಸುದ್ದಿ” ಎಂದಿದ್ದಾರೆ. ನಮ್ಮ ಸಂಬಂಧಿಕರು ಶುಲ್ಕ ಪಾವತಿಗೆ ನಮಗೆ ಸಹಾಯ ಮಾಡುತ್ತಿದ್ದಾರೆ. ನಾಳೆ, ಸತ್ಯಗಳು ಹೊರಬರುತ್ತವೆ”ಎಂದು ಆತ ಹೇಳಿರುವುದಾಗಿ ಎನ್​​ಡಿಟಿವಿ ವರದಿ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:28 pm, Tue, 18 July 23

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್