ಚೆನ್ನೈ ಜುಲೈ 18: ತಮಿಳುನಾಡಿನ ಸೇಲಂನಲ್ಲಿ (Salem )ಮಹಿಳೆಯೊಬ್ಬರು ಚಲಿಸುತ್ತಿದ್ದ ಬಸ್ಸಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾನು ಸತ್ತರೆ ಸಿಗುವ ಪರಿಹಾರದಿಂದ ತನ್ನ ಮಕ್ಕಳ ಕಾಲೇಜು ಶುಲ್ಕವನ್ನು ಪಾವತಿಸಬಹುದು ಎಂಬ ಉದ್ದೇಶದಿಂದ ಆಕೆ ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ. ಸೇಲಂ ಕಲೆಕ್ಟರೇಟ್‌ನಲ್ಲಿ ತಾತ್ಕಾಲಿಕ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದ 39 ವರ್ಷದ ಪಾಪ್ಪತಿ ಈ ರೀತಿ ಬಸ್ಸಿನ ಮುಂದೆ ಹಾರಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಈ ಘಟನೆಯ 48 ಸೆಕೆಂಡ್‌ಗಳ ಸಿಸಿಟಿವಿ ವಿಡಿಯೊದಲ್ಲಿ ಮಹಿಳೆ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವುದು ಕಾಣಿಸುತ್ತದೆ. ನಂತರ ವೇಗವಾಗಿ ಬರುತ್ತಿದ್ದ ಬಸ್‌ನ ಕಡೆಗೆ ಇದ್ದಕ್ಕಿದ್ದಂತೆ ರಸ್ತೆ ದಾಟುತ್ತಿರುವುದನ್ನು ತೋರಿಸುತ್ತದೆ. ಬಸ್ಸು ಆಕೆಗೆ ಡಿಕ್ಕಿ ಹೊಡೆದು ಆಕೆ ರಸ್ತೆಯಲ್ಲಿ ಬೀಳುತ್ತಿರುವುದು ಕಾಣಿಸುತ್ತದೆ
“ಕಳೆದ ತಿಂಗಳು ಈ ಘಟನೆ ನಡೆದಿದ್ದು, ಆಕೆ ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ. ಆರಂಭದಲ್ಲಿ, ನಾವು ಅಪಘಾತದಿಂದ ಸಾವಿನ ಪ್ರಕರಣವನ್ನು ದಾಖಲಿಸಿದ್ದೇವೆ. ಈಗ ನಾವು ಅದನ್ನು ಬದಲಾಯಿಸುತ್ತಿದ್ದೇವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ.
A Women allegedly killed herself by coming under a bus to arrange money for her son’s education in Tamil Nadu.
She was working as a ‘safai karmachari’ (cleaning staff) at the Collector’s office in Salem district.
pic.twitter.com/nwLrd4TxS5— Ahmed Khabeer احمد خبیر (@AhmedKhabeer_) July 18, 2023
ಸಿಂಗಲ್ ಮದರ್ ಆಗಿರುವ ಪಾಪ್ಪತಿ ಅವರ ಮಕ್ಕಳು ಕಾಲೇಜಿನಲ್ಲಿ ಓದುತ್ತಿದ್ದಾರೆ. ಮಗಳು ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ ಕೋರ್ಸ್‌ನ ಅಂತಿಮ ವರ್ಷದಲ್ಲಿ ಓದುತ್ತಿದ್ದು ಮಗ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆರ್ಕಿಟೆಕ್ಚರ್ ಓದುತ್ತಿದ್ದಾನೆ. ಆಕೆ ಬಡ ಕುಟುಂಬದವಳು. ಯಾರೋ ಅವಳನ್ನು ದಾರಿ ತಪ್ಪಿಸಿದ್ದಾರೆ. ನಾವು ತನಿಖೆ ನಡೆಸುತ್ತಿದ್ದೇವೆ” ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಬಿಜೆಪಿಯೇ ವಿಜಯ್ ಅನ್ನು ಕಣಕ್ಕಿಳಿಸಿದೆಯೇ? ತಮಿಳುನಾಡು ರಾಜಕೀಯದಲ್ಲಿ ಹೀಗೊಂದು ಚರ್ಚೆ
ಆದಾಗ್ಯೂ, ಪಾಪ್ಪತಿ ಅವರ ಮಗ ಈ ವರದಿಗಳನ್ನು ನಿರಾಕರಿಸಿದ್ದು, ಅದು “ನಕಲಿ ಸುದ್ದಿ” ಎಂದಿದ್ದಾರೆ. ನಮ್ಮ ಸಂಬಂಧಿಕರು ಶುಲ್ಕ ಪಾವತಿಗೆ ನಮಗೆ ಸಹಾಯ ಮಾಡುತ್ತಿದ್ದಾರೆ. ನಾಳೆ, ಸತ್ಯಗಳು ಹೊರಬರುತ್ತವೆ”ಎಂದು ಆತ ಹೇಳಿರುವುದಾಗಿ ಎನ್ಡಿಟಿವಿ ವರದಿ ಹೇಳಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 4:28 pm, Tue, 18 July 23