ತಮಿಳುನಾಡಿನಲ್ಲಿ 2000 ಅಮ್ಮ ಮಿನಿ ಕ್ಲಿನಿಕ್ ಉದ್ಘಾಟಿಸಿದ ಮುಖ್ಯಮಂತ್ರಿ ಪಳನಿಸ್ವಾಮಿ
ಕೋವಿಡ್-19 ಪರೀಕ್ಷೆಗಾಗಿ ತಮಿಳುನಾಡಿನಲ್ಲಿ 2000 ಮಿನಿ ಕ್ಲಿನಿಕ್ಗಳನ್ನು ಏಕಕಾಲದಲ್ಲಿ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಪಳನಿಸ್ವಾಮಿ ಹೇಳಿದ್ದಾರೆ.
ಚೆನ್ನೈ: ಕೋವಿಡ್-19 ಪರೀಕ್ಷೆಗಾಗಿ ತಮಿಳುನಾಡಿನಲ್ಲಿ 2,000 ಅಮ್ಮ ಮಿನಿ ಕ್ಲಿನಿಕ್ಗಳನ್ನು ಸ್ಥಾಪಿಸಿದ್ದು, ಸೋಮವಾರ ರೋಯಪುರಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪಳನಿಸ್ವಾಮಿ ಕ್ಲಿನಿಕ್ ಉದ್ಘಾಟಿಸಿದ್ದಾರೆ. ರಾಜ್ಯದಾದ್ಯಂತ 2000 ಮಿನಿ ಕ್ಲಿನಿಕ್ಗಳನ್ನು ಏಕಕಾಲದಲ್ಲಿ ಆರಂಭಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ತಮಿಳುನಾಡಿನ ಉಪಮುಖ್ಯಮಂತ್ರಿ ಒ.ಪನ್ನೀರ್ ಸೆಲ್ವಂ, ರಾಜ್ಯದಲ್ಲಿ ನಾವು ಕೊರೊನಾವೈರಸ್ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ಮಾಡಿದ್ದಾರೆ. ಕೊರೊನಾ ಸೋಂಕು ವ್ಯಾಪಿಸದಂತೆ ತಡೆಯಲು ನಾವು ಮನೆಮನೆಗೆ ತೆರಳಿ ಮಾಹಿತಿ ನೀಡುವ ಅಭಿಯಾನ ಕೈಗೊಂಡಿದ್ದೇವೆ. ಈಗ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದಿದೆ ಎಂದು ಹೇಳಿದ್ದಾರೆ.
ಈ ಮಿನಿ ಕ್ಲಿನಿಕ್ಗಳನ್ನು ಉದ್ಘಾಟನೆ ಮಾಡುವ ಮೂಲಕ ನಾವು ತಮಿಳುನಾಡಿನ ಇತಿಹಾಸದಲ್ಲಿ ಮೈಲಿಗಲ್ಲು ಸ್ಥಾಪಿಸಿದ್ದೇವೆ. ಕೊರೊನಾವೈರಸ್ ಮುಕ್ತಗೊಳಿಸಲು ಜವರು ರಾಜ್ಯ ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಅವರು ಹೇಳಿದ್ದಾರೆ. ಡಿಸೆಂಬರ್ 13ರಂದು ತಮಿಳುನಾಡಿನಲ್ಲಿ 1,195 ಹೊಸ ಪ್ರಕರಣಗಳು ವರದಿಯಾಗಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 7,98,888ಕ್ಕೇರಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
2021ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವೆ: ಕಮಲ್ ಹಾಸನ್
Published On - 7:28 pm, Mon, 14 December 20