Chennai Floods ತಮಿಳುನಾಡಿನಲ್ಲಿ ಎಡೆಬಿಡದೆ ಸುರಿದ ಮಳೆಗೆ ಚೆನ್ನೈ ನಗರ ಜಲಾವೃತ; ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯ ಎಚ್ಚರಿಕೆ
Tamil Nadu Rains ಚೆನ್ನೈನ ಹಲವು ಭಾಗಗಳಲ್ಲಿ ಜಲಾವೃತ ವರದಿಯಾಗಿದ್ದು, ತಮಿಳುನಾಡು ರಾಜಧಾನಿಯಲ್ಲಿ ಅಧಿಕಾರಿಗಳು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದಾರೆ.
ಚೆನ್ನೈ: ನವೆಂಬರ್ 10-11 ರಂದು ತಮಿಳುನಾಡಿನಲ್ಲಿ(TamilNadu) ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದ್ದರಿಂದ ಚೆನ್ನೈ (Chennai) ಭಾರೀ ಮಳೆಗೆ ಸಾಕ್ಷಿಯಾಗಿದೆ. ಚೆನ್ನೈನ ಹಲವು ಭಾಗಗಳಲ್ಲಿ ಜಲಾವೃತ ವರದಿಯಾಗಿದ್ದು, ತಮಿಳುನಾಡು ರಾಜಧಾನಿಯಲ್ಲಿ ಅಧಿಕಾರಿಗಳು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದಾರೆ. ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ ರಸ್ತೆಗೆ ಬಿದ್ದ ಮರಗಳು, ಮುಳುಗಿದ ಕಾರುಗಳು ಮತ್ತು ಚೆನ್ನೈ ಬೀದಿಗಳಲ್ಲಿ ಸಂಚಾರಕ್ಕೆ ಅಡ್ಡಿಪಡಿಸಿದವು. ವರದಿಗಳ ಪ್ರಕಾರ ಚೆನ್ನೈನ ಅಗ್ರಹಾರಂ, ಕೊರತ್ತೂರ್ ಪ್ರದೇಶಗಳಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿದೆ. ತಮಿಳುನಾಡಿನಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹದ ಹಿನ್ನೆಲೆಯಲ್ಲಿ ಸೋಮವಾರ ಮತ್ತು ಮಂಗಳವಾರ 16 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದೆ. ಮಧುರೈ, ತಿರುನಲ್ವೇಲಿ, ಶಿವಗಂಗಾ, ತಿರುವಾರೂರ್, ಕಡಲೂರು, ತೆಂಕಶಿ, ಪುದುಕೊಟ್ಟೈ, ವಿರುಧುನಗರ, ನಾಗಪಟ್ಟಣಂ, ರಾಮನಾಥಪುರಂ, ಮೈಲಾಡುತುರೈ, ವಿಲ್ಲುಪುರಂ ಜಿಲ್ಲೆಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
ಸೋಮವಾರದಂದು ಚೆನ್ನೈ, ಚೆಂಗಲ್‌ಪೇಟ್, ಕಾಂಚೀಪುರಂ ಮತ್ತು ತಿರುವಳ್ಳೂರ್‌ನಲ್ಲಿ ರಜೆ ಘೋಷಿಸಲಾಗಿತ್ತು. ಆಡಳಿತವು ತಗ್ಗು ಪ್ರದೇಶದ ಜನರನ್ನು ತಾತ್ಕಾಲಿಕ ಸರ್ಕಾರಿ ಆಶ್ರಯಕ್ಕೆ ಸ್ಥಳಾಂತರಿಸುವಂತೆ ಒತ್ತಾಯಿಸಿತು ಮತ್ತು ಒಂದು ಲಕ್ಷಕ್ಕೂ ಹೆಚ್ಚು ಜನರಿಗೆ ಆಹಾರವನ್ನು ಒದಗಿಸಿತು.
ನವೆಂಬರ್ 8 ಮತ್ತು 9 ರಂದು ತಮಿಳುನಾಡಿನಲ್ಲಿ ಪ್ರತ್ಯೇಕವಾದ ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಅದೇ ವೇಳೆ ನವೆಂಬರ್ 10 ಮತ್ತು 11 ರಂದು ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದೇ ಅವಧಿಯಲ್ಲಿ ಆಂಧ್ರಪ್ರದೇಶದ ದಕ್ಷಿಣ ಕರಾವಳಿಯಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಸೋಮವಾರ ಹೇಳಿಕೆಯಲ್ಲಿ ತಿಳಿಸಿದೆ.
ವಿಮಾನ ಕಾರ್ಯಾಚರಣೆಗಳಿಗೆ ಅಡೆತಡೆಯಿಲ್ಲ ಪ್ರತಿಕೂಲ ಹವಾಮಾನದ ಹೊರತಾಗಿಯೂ, ಚೆನ್ನೈ ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಗಳು ಅಡೆತಡೆಯಿಲ್ಲದೆ ಮುಂದುವರೆಯಿತು. ಚೆನ್ನೈಗೆ ಮತ್ತು ಅಲ್ಲಿಂದ ಹೊರಡುವ ವಿಮಾನಗಳು ವೇಳಾಪಟ್ಟಿಯಂತೆ ಕಾರ್ಯನಿರ್ವಹಿಸುತ್ತಿವೆ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ತಿಳಿಸಿದೆ. ಆದಾಗ್ಯೂ, ಅಧಿಕಾರಿಗಳು, ಪ್ರಯಾಣಿಕರು ಸಮಯಕ್ಕೆ ವಿಮಾನ ನಿಲ್ದಾಣವನ್ನು ತಲುಪಲು ಪ್ರಯಾಣಿಸಲು ಸಾಕಷ್ಟು ಪ್ರಯಾಣದ ಸಮಯವನ್ನು ಹೊಂದಿಸುವಂತೆ ಒತ್ತಾಯಿಸಿದರು.
#UPDATE | Despite adverse weather conditions, flight operations at #AAI Chennai Airport are continuing as per schedule. We also request our valued passengers to give sufficient time to reach airport due to #rainy weather and to avoid any inconvenience. #ChennaiRains@pibchennai
— Chennai (MAA) Airport (@aaichnairport) November 8, 2021
ಪ್ರಯಾಣಿಕರಿಗೆ ಮಳೆಯ ವಾತಾವರಣದಿಂದಾಗಿ ವಿಮಾನ ನಿಲ್ದಾಣವನ್ನು ತಲುಪಲು ಮತ್ತು ಯಾವುದೇ ಅನಾನುಕೂಲತೆಯನ್ನು ತಪ್ಪಿಸಲು ಸಾಕಷ್ಟು ಸಮಯವನ್ನು ಹೊಂದಿಸಿಕೊಳ್ಳಿ ಎಂದು ನಾವು ವಿನಂತಿಸುತ್ತೇವೆ ಎಂದು ಎಎಐ ಟ್ವೀಟ್ ಮಾಡಿದೆ.
ಇದನ್ನೂ ಓದಿ: ಮಹಾಮಳೆಗೆ ತತ್ತರಿಸಿದ ತಮಿಳುನಾಡು! ಮುಂದಿನ 2 ದಿನಗಳ ಕಾಲ ಭಾರಿ ಮಳೆ ಮುನ್ಸೂಚನೆ
Published On - 12:43 pm, Tue, 9 November 21