Mekedatu project ಮೇಕೆದಾಟು ಬಗ್ಗೆ ತಮಿಳುನಾಡು ಸರ್ಕಾರದಿಂದ ಹೊಸ ಕ್ಯಾತೆ ; ಯೋಜನೆ ಬಗ್ಗೆ ನಿರ್ಧಾರ ಕೈಗೊಳ್ಳುವಂತೆ ಸುಪ್ರೀಂಗೆ ಮನವಿ

ಪ್ರಾಧಿಕಾರದ ಸಭೆಯಲ್ಲಿ ಮೇಕೆದಾಟು ಯೋಜನೆ ಬಗ್ಗೆ ಚರ್ಚಿಸಬಾರದು. ಕಾವೇರಿ ಪ್ರಾಧಿಕಾರ ನೀರು ನಿರ್ವಹಣೆ ಬಗ್ಗೆ ಮಾತ್ರ ಚರ್ಚೆ ಮಾಡಬೇಕು. ಈ ಯೋಜನೆ ಬಗ್ಗೆ ಸುಪ್ರೀಂಕೋರ್ಟ್ ನಿರ್ಧಾರ ಕೈಗೊಳ್ಳುವಂತೆ ತಮಿಳುನಾಡು ಸರ್ಕಾರ ಮನವಿ ಮಾಡಿದೆ

Mekedatu project ಮೇಕೆದಾಟು ಬಗ್ಗೆ ತಮಿಳುನಾಡು ಸರ್ಕಾರದಿಂದ ಹೊಸ ಕ್ಯಾತೆ ; ಯೋಜನೆ ಬಗ್ಗೆ ನಿರ್ಧಾರ ಕೈಗೊಳ್ಳುವಂತೆ ಸುಪ್ರೀಂಗೆ ಮನವಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jun 07, 2022 | 7:12 PM

ಚೆನ್ನೈ: ಮೇಕೆದಾಟು (Mekedagtu) ಬಗ್ಗೆ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್​​ಗೆ (Supreme Court) ಮತ್ತೊಂದು ಅರ್ಜಿ ಸಲ್ಲಿಸಿದೆ. ಮೇಕೆದಾಟು ಬಗ್ಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (Cauvery Water Management Authority) ನಿರ್ಣಯ ಪರಿಗಣಿಸಬಾರದು. ಪ್ರಾಧಿಕಾರದ ಸಭೆಯಲ್ಲಿ ಮೇಕೆದಾಟು ಯೋಜನೆ ಬಗ್ಗೆ ಚರ್ಚಿಸಬಾರದು. ಕಾವೇರಿ ಪ್ರಾಧಿಕಾರ ನೀರು ನಿರ್ವಹಣೆ ಬಗ್ಗೆ ಮಾತ್ರ ಚರ್ಚೆ ಮಾಡಬೇಕು. ಈ ಯೋಜನೆ ಬಗ್ಗೆ ಸುಪ್ರೀಂಕೋರ್ಟ್ ನಿರ್ಧಾರ ಕೈಗೊಳ್ಳುವಂತೆ ತಮಿಳುನಾಡು ಸರ್ಕಾರ ಮನವಿ ಮಾಡಿದೆ. ಮೇಕೆದಾಟು ಅಣೆಕಟ್ಟು ನಿರ್ಮಾಣ ಕುರಿತು ಚರ್ಚಿಸಲು ದೆಹಲಿಯಲ್ಲಿ ನಡೆಯಲಿರುವ ಕಾವೇರಿ ಪ್ರಾಧಿಕಾರದ ಸಭೆಗೆ ತಮಿಳುನಾಡು ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಸಂಬಂಧ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದುರೈಮುರುಗನ್ ಹೇಳಿದ್ದಾರೆ. ಕಾವೇರಿ ಪ್ರಾಧಿಕಾರದ ಸಭೆ ಜೂನ್ 17ರಂದು ನಡೆಯಲಿದೆ. ಕಾವೇರಿ ನದಿಗೆ ಮೇಕೆದಾಟು ಅಣೆಕಟ್ಟು ನಿರ್ಮಿಸುವ ಕುರಿತು ಕರ್ನಾಟಕದ ಯೋಜನಾ ವರದಿ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ವರದಿಯಾಗಿದೆ. ಕಾವೇರಿ ಆಯೋಗದ ಸಭೆಯಲ್ಲಿ ಮೇಕೆದಾಟು ಅಣೆಕಟ್ಟಿನ ಚರ್ಚೆಗೆ ತಮಿಳುನಾಡು ರಾಜಕೀಯ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು.

ಈ ಕುರಿತಂತೆ ಹೇಳಿಕೆ ನೀಡಿದ್ದ ಪಿಎಂಎಂ ಸಂಸ್ಥಾಪಕ ಡಾ ರಾಮದಾಸ್, ಕಾವೇರಿ ನಿರ್ವಹಣಾ ಪ್ರಾಧಿಕಾರಕ್ಕೆ ಮೇಕೆದಾಟು ಅಣೆಕಟ್ಟಿನ ಬಗ್ಗೆ ಚರ್ಚಿಸಲು ಅಥವಾ ಅನುಮೋದಿಸಲು ಅಧಿಕಾರವಿಲ್ಲ ಎಂದು ಹೇಳಿದ್ದಾರೆ. ನಡೆಯಲಿರುವ ಕಾವೇರಿ ಪ್ರಾಧಿಕಾರದ ಸಭೆಯಲ್ಲಿ ಮೇಕೆದಾಟು ಅಣೆಕಟ್ಟು ಬಗ್ಗೆ ಚರ್ಚಿಸುವಂತಿಲ್ಲ. 17ನೇ ತಾರೀಖಿನಂದು ನಡೆಯಲಿರುವ ಸಭೆಯ ಅಜೆಂಡಾದಿಂದ ಮೇಕೆದಾಟು ವಿಷಯವನ್ನು ತೆಗೆದುಹಾಕಬೇಕು. ಅಗತ್ಯಬಂದರೆ ತಮಿಳುನಾಡು ಸುಪ್ರೀಂಕೋರ್ಟ್ ಮೊರೆ ಹೋಗಬೇಕು ಎಂದಿದ್ದಾರೆ

ಕಳೆದ ವರ್ಷ ಜೂನ್‌ನಲ್ಲಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪ್ರಧಾನಿ ಮೋದಿ ಅವರನ್ನು ಭೇಟಿಯಾದಾಗ ಮೇಕೆದಾಟು ಅಣೆಕಟ್ಟು ಯೋಜನೆ ಕೈಬಿಡುವ ಕುರಿತು ಕರ್ನಾಟಕಕ್ಕೆ ಸಲಹೆ ಕೇಳಿದ್ದರು. ನಂತರ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾದಾಗ ಮೇಕೆದಾಟು ಅಣೆಕಟ್ಟೆಗೆ ಅನುಮತಿ ನೀಡಬಾರದು ಎಂದು ಒತ್ತಾಯಿಸಿದ್ದೆ ಎಂದು ದುರೈಮುರುಗನ್ ಹೇಳಿದ್ದಾರೆ.

ಇದನ್ನೂ ಓದಿ
Image
ಮೇಕೆದಾಟು ಯೋಜನೆ: ತಮಿಳುನಾಡು ನಿರ್ಣಯದ ವಿರುದ್ಧ ಪರಿಷತ್​ನಲ್ಲೂ ಒಮ್ಮತದಿಂದ ಖಂಡನಾ ನಿರ್ಣಯ ಅಂಗೀಕಾರ
Image
ತಮಿಳುನಾಡಿಗೆ ಟಾಂಗ್! ಮೇಕೆದಾಟು ಯೋಜನೆ ಜಾರಿಗಾಗಿ ವಿಧಾನಸಭೆಯಲ್ಲಿ ಕರ್ನಾಟಕ ಸರ್ಕಾರದಿಂದಲೂ ನಿರ್ಣಯ
Image
ಮೇಕೆದಾಟು ಯೋಜನೆ ಕುರಿತು ಸದನದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಅರ್ಥಗರ್ಭಿತ ಮಾತು

ಕಳೆದ ವರ್ಷ ಜುಲೈ 12 ರಂದು ಚೆನ್ನೈನಲ್ಲಿ ನಡೆದ ಶಾಸಕರ ಸರ್ವಪಕ್ಷ ಸಭೆಯಲ್ಲಿ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಅನುಮತಿ ನೀಡದಂತೆ ಸರ್ವಾನುಮತದ ನಿರ್ಣಯವನ್ನು ಅಂಗೀಕರಿಸಲಾಯಿತು. ಈ ನಿರ್ಣಯವನ್ನು ಕಳೆದ ವರ್ಷ ಜೂನ್ 16ರಂದು ಕೇಂದ್ರ ಜಲಸಂಪನ್ಮೂಲ ಸಚಿವರಿಗೆ ಸರ್ವಪಕ್ಷ ಸದಸ್ಯರು ಖುದ್ದಾಗಿ ಮಂಡಿಸಿದ್ದರು. ಆಗ ತಮಿಳುನಾಡಿನ ಅನುಮೋದನೆ ಇಲ್ಲದೆ ಮೇಕೆದಾಟು ಯೋಜನೆಗೆ ಅನುಮತಿ ನೀಡುವುದಿಲ್ಲ ಎಂದು ಭರವಸೆ ನೀಡಲಾಯಿತು.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 6:33 pm, Tue, 7 June 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್