AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ ಮುಖ್ಯ ನ್ಯಾಯಾಧೀಶರಾಗುವ ಕನಸು ನನ್ನದು ಎಂದು ಹೇಳಿದ ಪ್ರತಿಭಾನ್ವಿತ ಬಾಲಕಿಗೆ ಮೋದಿ ಕೊಟ್ಟ ಸಲಹೆ ಹೀಗಿತ್ತು

ತನಿಷ್ಕಾ ಸುಜಿತ್‌ಗೆ 13ನೇ ವಯಸ್ಸಿನಲ್ಲಿ ಬಿಎ (ಮನೋವಿಜ್ಞಾನ) ಮೊದಲ ವರ್ಷ ಪ್ರವೇಶ ನೀಡಲಾಗಿದ್ದು, ವಿಶ್ವವಿದ್ಯಾನಿಲಯವು ಆಕೆಗೆ ನಡೆಸಿದ ಪ್ರವೇಶ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದರು ಎಂದು ದೇವಿ ಅಹಲ್ಯಾ ವಿಶ್ವವಿದ್ಯಾನಿಲಯದ ಸಮಾಜ ವಿಜ್ಞಾನ ಅಧ್ಯಯನ ವಿಭಾಗದ ಮುಖ್ಯಸ್ಥೆ ರೇಖಾ ಆಚಾರ್ಯ ಹೇಳಿದ್ದಾರೆ.

ದೇಶದ ಮುಖ್ಯ ನ್ಯಾಯಾಧೀಶರಾಗುವ ಕನಸು ನನ್ನದು ಎಂದು ಹೇಳಿದ ಪ್ರತಿಭಾನ್ವಿತ ಬಾಲಕಿಗೆ ಮೋದಿ ಕೊಟ್ಟ ಸಲಹೆ ಹೀಗಿತ್ತು
ತನಿಷ್ಕಾ ಸುಜಿತ್Image Credit source: Twitter/@jdjsindore
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Apr 11, 2023 | 1:01 PM

Share

ಮುಖ್ಯಾಂಶಗಳು

  • ತನಿಷ್ಕಾ ಸುಜಿತ್ 15 ನೇ ವಯಸ್ಸಿನಲ್ಲಿ ಬ್ಯಾಚುಲರ್ ಆಫ್ ಆರ್ಟ್ಸ್ ಅಂತಿಮ ವರ್ಷದ ಪರೀಕ್ಷೆಗೆ ಹಾಜರಾಗಲು ಸಿದ್ಧರಾಗಿದ್ದಾರೆ.
  • ಭೋಪಾಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದ ಬಾಲಕಿ
  • 0 ನೇ ತರಗತಿಯನ್ನು ಮೊದಲ ದರ್ಜೆಯಲ್ಲಿ ಉತ್ತೀರ್ಣರಾದ ನಂತರ ಅವರು 13 ನೇ ವಯಸ್ಸಿನಲ್ಲಿ 12 ನೇ ತರಗತಿ ಪರೀಕ್ಷೆ ಪಾಸಾಗಿದ್ದರು.

ಇಂದೋರ್: ಮಧ್ಯಪ್ರದೇಶದ ಇಂದೋರ್‌ನ ಪ್ರತಿಭಾನ್ವಿತ ವಿದ್ಯಾರ್ಥಿನಿ ತನಿಷ್ಕಾ ಸುಜಿತ್ (Tanishka Sujit) 15 ನೇ ವಯಸ್ಸಿನಲ್ಲಿ ಬ್ಯಾಚುಲರ್ ಆಫ್ ಆರ್ಟ್ಸ್ (BA) ಅಂತಿಮ ವರ್ಷದ ಪರೀಕ್ಷೆಗೆ ಹಾಜರಾಗಲು ಸಿದ್ಧರಾಗಿದ್ದಾರೆ. ಈ ಬಾಲಕಿ ಮುಂದೆ ಕಾನೂನು ಅಧ್ಯಯನ ಮಾಡಿ ದೇಶದ ಮುಖ್ಯ ನ್ಯಾಯಾಧೀಶರಾಗುವ ಗುರಿ ಹೊಂದಿದ್ದಾರೆ.2020 ರಲ್ಲಿ ಕೋವಿಡ್​​ನಿಂದ ತನ್ನ ತಂದೆ ಮತ್ತು ಅಜ್ಜನನ್ನು ಕಳೆದುಕೊಂಡ ಹದಿಹರೆಯದ ಹುಡುಗಿ, ಕೆಲವು ದಿನಗಳ ಹಿಂದೆ ಭೋಪಾಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿ ಮಾಡಿದ್ದರು. ಅಲ್ಲಿ ಮೋದಿ ಅವರು ತನ್ನ ಕನಸನ್ನು ಮುಂದುವರಿಸಲು ಅವರು ಹೇಗೆ ಪ್ರೋತ್ಸಾಹಿಸಿದರು ಎಂಬುದನ್ನು  ತನಿಷ್ಕಾ ಪಿಟಿಐ ಜತೆ ಹಂಚಿಕೊಂಡಿದ್ದಾರೆ.

ಇಂದೋರ್‌ನ ದೇವಿ ಅಹಲ್ಯಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿ ತನಿಷ್ಕಾ ಸುಜಿತ್ ಏಪ್ರಿಲ್ 19 ರಿಂದ 28 ರವರೆಗೆ ನಡೆಯಲಿರುವ ತನ್ನ ಬಿಎ (ಮನೋವಿಜ್ಞಾನ) ಅಂತಿಮ ವರ್ಷದ ಪರೀಕ್ಷೆಗಳಿಗೆ ಹಾಜರಾಗಲಿದ್ದಾರೆ.10 ನೇ ತರಗತಿಯನ್ನು ಮೊದಲ ದರ್ಜೆಯಲ್ಲಿ ಉತ್ತೀರ್ಣರಾದ ನಂತರ ಅವರು 13 ನೇ ವಯಸ್ಸಿನಲ್ಲಿ 12 ನೇ ತರಗತಿ ಪರೀಕ್ಷೆ ಪಾಸಾಗಿದ್ದರು.

ತನಿಷ್ಕಾ ಸುಜಿತ್‌ಗೆ 13ನೇ ವಯಸ್ಸಿನಲ್ಲಿ ಬಿಎ (ಮನೋವಿಜ್ಞಾನ) ಮೊದಲ ವರ್ಷ ಪ್ರವೇಶ ನೀಡಲಾಗಿದ್ದು, ವಿಶ್ವವಿದ್ಯಾನಿಲಯವು ಆಕೆಗೆ ನಡೆಸಿದ ಪ್ರವೇಶ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದರು ಎಂದು ದೇವಿ ಅಹಲ್ಯಾ ವಿಶ್ವವಿದ್ಯಾನಿಲಯದ ಸಮಾಜ ವಿಜ್ಞಾನ ಅಧ್ಯಯನ ವಿಭಾಗದ ಮುಖ್ಯಸ್ಥೆ ರೇಖಾ ಆಚಾರ್ಯ ಹೇಳಿದ್ದಾರೆ.

ಸಂಯೋಜಿತ ಕಮಾಂಡರ್‌ಗಳ ಸಮ್ಮೇಳನಕ್ಕಾಗಿ ಏಪ್ರಿಲ್ 1 ರಂದು ರಾಜ್ಯದ ರಾಜಧಾನಿ ಭೋಪಾಲ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ತನಿಷ್ಕಾ ಸುಜಿತ್ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದರು. ಸುಮಾರು 15 ನಿಮಿಷಗಳ ಕಾಲ ಬಾಲಕಿ ಮೋದಿ ಜತೆ ಮಾತುಕತೆ ನಡೆಸಿದ್ದರು. ತಾನು ಬಿಎ ಪರೀಕ್ಷೆಯಲ್ಲಿ ತೇರ್ಗಡೆಯಾದ ನಂತರ ಅಮೆರಿಕದಲ್ಲಿ ಕಾನೂನು ಕಲಿಯಲು ಬಯಸಿದ್ದೇನೆ. ಮುಂದೊಂದು ದಿನ ನಾನು ಭಾರತದ ಮುಖ್ಯ ನ್ಯಾಯಮೂರ್ತಿಯಾಗುವ ಕನಸು ಕಂಡಿದ್ದೇನೆ ಎಂದು ಪ್ರಧಾನಿಯವರಲ್ಲಿ ಹೇಳಿರುವುದಾಗಿ ತನಿಷ್ಕಾ ಹೇಳಿದ್ದಾರೆ.

ಇದನ್ನೂ ಓದಿ: Ramayana Video Viral: ಡಬ್ ಮಾಡಿ ರಾಮಾಯಣದ ವೀಡಿಯೋ ಬಾರ್‌ನಲ್ಲಿ ಪ್ಲೇ ಮಾಡಿದ ಇಬ್ಬರ ಬಂಧನ

ನನ್ನ ಗುರಿಯ ಬಗ್ಗೆ ಕೇಳಿದ ಪ್ರಧಾನಿ, ಸುಪ್ರೀಂಕೋರ್ಟ್‌ಗೆ ಹೋಗಿ ಅಲ್ಲಿನ ವಕೀಲರ ವಾದಗಳನ್ನು ವೀಕ್ಷಿಸಲು ಸಲಹೆ ನೀಡಿದರು, ಅದು ನನ್ನ ಗುರಿಯನ್ನು ಸಾಧಿಸಲು ನನಗೆ ಪ್ರೇರೇಪಿಸುತ್ತದೆ. ಪ್ರಧಾನಿಯವರನ್ನು ಭೇಟಿಯಾಗುವ ನನ್ನ ಕನಸು ನನಸಾಗಿದೆ ಎಂದು ಆಕೆ ಹೇಳಿದ್ದಾರೆ. ನನ್ನ ಪತಿ ಮತ್ತು ಮಾವ 2020 ರಲ್ಲಿ ಕೊರೊನಾವೈರಸ್ ನಿಂದ ಸಾವನ್ನಪ್ಪಿದ್ದಾರೆ. ಮಗಳಿಗಾಗಿ ನಾನು ನನ್ನ ದುಃಖವನ್ನು ಅದುಮಿ, ಆಕೆಯ ಜತೆ ನಿಂತೆ. ಆಕೆ ಶಿಕ್ಷಣದಲ್ಲಿ ಉತ್ತಮ ಸಾಧನೆ ಮಾಡಿದಳು ಎಂದು ತನಿಷ್ಕಾ ಅವರ ತಾಯಿ ಅನುಭಾ ಹೇಳಿದ್ದಾರೆ.

ಕುಟುಂಬದ ಇಬ್ಬರು ಸದಸ್ಯರನ್ನು ಕಳೆದುಕೊಂಡ ನನಗೆ ದಿಕ್ಕೇ ತೋಚಲಿಲ್ಲ. ಎರಡು ಮೂರು ತಿಂಗಳ ನಂತರ, ನನ್ನ ಮಗಳ ಭವಿಷ್ಯದ ಹಿತದೃಷ್ಟಿಯಿಂದ ಆಕೆಯ ಶಿಕ್ಷಣದತ್ತ ಗಮನ ಹರಿಸಬೇಕು ಇದಕ್ಕಾಗಿ ಹೋರಾಡಬೇಕು ಎಂದು ನಾನು ನಿರ್ಧರಿಸಿದೆ ಎಂದಿದ್ದಾರೆ ಅನುಭಾ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್