Target Killing: ಜಮ್ಮು ಕಾಶ್ಮೀರದಲ್ಲಿ ಹಾಲು ಖರೀದಿಸಲು ತೆರಳಿದ್ದ ವ್ಯಕ್ತಿಯನ್ನು ಗುಂಡಿಕ್ಕಿ ಕೊಂದ ಉಗ್ರರು

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರು ಹಿಂದೂ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಸೋಮವಾರ ರಾತ್ರಿ ಹಾಲು ಖರೀದಿಸಲು ಮಾರುಕಟ್ಟೆಗೆ ಹೋಗುತ್ತಿದ್ದ ವೇಳೆ ಕಾರ್ಮಿಕನನ್ನು ಕೊಲೆ ಮಾಡಲಾಗಿದೆ.

Target Killing: ಜಮ್ಮು ಕಾಶ್ಮೀರದಲ್ಲಿ ಹಾಲು ಖರೀದಿಸಲು ತೆರಳಿದ್ದ ವ್ಯಕ್ತಿಯನ್ನು ಗುಂಡಿಕ್ಕಿ ಕೊಂದ ಉಗ್ರರು
ದೀಪಕ್Image Credit source: NDTV
Follow us
ನಯನಾ ರಾಜೀವ್
|

Updated on: May 31, 2023 | 7:50 AM

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರು ಹಿಂದೂ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಸೋಮವಾರ ರಾತ್ರಿ ಹಾಲು ಖರೀದಿಸಲು ಮಾರುಕಟ್ಟೆಗೆ ಹೋಗುತ್ತಿದ್ದ ವೇಳೆ ಕಾರ್ಮಿಕನನ್ನು ಕೊಲೆ ಮಾಡಲಾಗಿದೆ. ಅವರು ಜಮ್ಮು ಪ್ರದೇಶದ ಉಧಂಪುರ ಜಿಲ್ಲೆಯ ದೀಪಕ್ ಎಂದು ಗುರುತಿಸಲಾಗಿದ್ದು, ಜಂಗ್ಲಾತ್ ಮಂಡಿ ಪ್ರದೇಶದಲ್ಲಿ ಸರ್ಕಸ್‌ನಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸರ್ಕಸ್‌ಗೆ ಭದ್ರತೆ ಒದಗಿಸಲಾಗಿತ್ತು. ಸರ್ಕಸ್‌ಗೆ ಸಂಬಂಧಿಸಿದ ಜನರು ತಮ್ಮದೇ ಆದ ಭದ್ರತೆಯನ್ನು ಹೊಂದಿದ್ದರು. ಹತ್ಯೆ ಹೊಣೆಯನ್ನು ಲಷ್ಕರ್-ಎ-ತೊಯ್ಬಾ ಹೊತ್ತುಕೊಂಡಿದೆ.

ಪೊಲೀಸರ ಪ್ರಕಾರ, ದೀಪು ಹಾಲು ಖರೀದಿಸಲು ಹತ್ತಿರದ ಮಾರುಕಟ್ಟೆಗೆ ಹೋಗಿದ್ದಾಗ ಇಬ್ಬರು ಮೋಟಾರ್‌ಸೈಕಲ್‌ನಲ್ಲಿ ಬಂದ ಯುವಕರು ರಾತ್ರಿ 8.30 ರ ಸುಮಾರಿಗೆ ಹತ್ತಿರದಿಂದ ಮೂರು ಸುತ್ತು ಗುಂಡು ಹಾರಿಸಿದ್ದಾರೆ. ದೀಪಕ್ ಅವರನ್ನು ಆಸ್ಪತ್ರೆಗೆ ಕರೆದೊಯ್ದರು ಆದರೆ ಯಾವುದೇ ಪ್ರಯೋಜನವಾಗಲಿಲ್ಲ.

ಮತ್ತಷ್ಟು ಓದಿ: Khalistan Terrorist: ಲಾಹೋರ್​ನಲ್ಲಿ ಖಲಿಸ್ತಾನಿ ಉಗ್ರ ಪರಮ್​ಜಿತ್ ಸಿಂಗ್​ನನ್ನು ಗುಂಡಿಕ್ಕಿ ಹತ್ಯೆ

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯ್ ಕುಮಾರ್ ಅವರು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಹಂತಕರನ್ನು ಶೀಘ್ರವಾಗಿ ಬಂಧಿಸಲು ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸುವಂತೆ ಜಿಲ್ಲಾ ಪೊಲೀಸರಿಗೆ ಸೂಚಿಸಿದ್ದಾರೆ. ನಿಷೇಧಿತ ಪಾಕಿಸ್ತಾನ ಮೂಲದ ಸಂಘಟನೆ ಲಷ್ಕರ್-ಎ-ತೊಯ್ಬಾದೊಂದಿಗೆ ಸಂಯೋಜಿತವಾಗಿರುವ ಕಾಶ್ಮೀರ ಫ್ರೀಡಂ ಫೈಟರ್ಸ್ ಈ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದೆ. ಈ ವರ್ಷ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಮೂರನೇ ಉದ್ದೇಶಿತ ದಾಳಿ ಇದಾಗಿದೆ.

ಫೆಬ್ರವರಿ 27 ರಂದು ಭಯೋತ್ಪಾದಕರು ಕಾಶ್ಮೀರಿ ಪಂಡಿತ್ ಬ್ಯಾಂಕ್ ಗಾರ್ಡ್-43 ವರ್ಷದ ಸಂಜಯ್ ಕುಮಾರ್ ಅವರನ್ನು ಗುಂಡಿಕ್ಕಿ  ಹತ್ಯೆ ಮಾಡಲಾಗಿತ್ತು. ಸಂಜಯ್ ಕುಮಾರ್ ಕೂಡ ಪುಲ್ವಾಮಾ ಜಿಲ್ಲೆಯ ಅಂಗಡಿಯೊಂದರಿಂದ ದಿನಸಿ ಖರೀದಿಸುತ್ತಿದ್ದರು. ಅದಕ್ಕೂ ಕೆಲವು ದಿನಗಳ ಹಿಂದೆ ಜಮ್ಮು ಮತ್ತು ಕಾಶ್ಮೀರ ಪೊಲೀಸರೊಬ್ಬರ ಮಗ ದಾಳಿಯಲ್ಲಿ ಗಾಯಗೊಂಡಿದ್ದರು.

ಭಯೋತ್ಪಾದಕರು ದೀಪು ಅವರನ್ನು ಸಮೀಪದಿಂದ ಮೂರು ಬಾರಿ ಗುಂಡು ಹಾರಿಸಿದ್ದಾರೆ. ದುಷ್ಕರ್ಮಿಗಳು ದ್ವಿಚಕ್ರವಾಹನದಲ್ಲಿ ಬಂದಿದ್ದು, ಕತ್ತಲೆಯ ಲಾಭ ಪಡೆದು ಪರಾರಿಯಾಗಿದ್ದಾರೆ. ಜಂಗ್ಲತ್ ಮಂಡಿ ಪ್ರದೇಶದಲ್ಲಿ ಸರ್ಕಸ್ ನಡೆಯುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಎಡಿಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ