AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್ ಇಂಡಿಯಾ ವಿಮಾನ ಅಪಘಾತ ಸಂತ್ರಸ್ತರಿಗೆ ನೆರವಾಗಲು ಟಾಟಾ ಸನ್ಸ್​ನಿಂದ 500 ಕೋಟಿ ರೂ. ಟ್ರಸ್ಟ್ ಸ್ಥಾಪನೆ

ಏರ್ ಇಂಡಿಯಾ AI-171 ವಿಮಾನ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳು ಮತ್ತು ಗಾಯಗೊಂಡವರಿಗೆ ಸಹಾಯ ಮಾಡಲು ಟಾಟಾ ಸನ್ಸ್ 500 ಕೋಟಿ ರೂ.ಗಳ ‘ದಿ AI-171 ಮೆಮೋರಿಯಲ್ ಆ್ಯಂಡ್ ವೆಲ್‌ಫೇರ್ ಟ್ರಸ್ಟ್’ ಸ್ಥಾಪಿಸಿದೆ. ಮೃತರಿಗೆ 1 ಕೋಟಿ ರೂ. ಪರಿಹಾರ, ಗಾಯಾಳುಗಳಿಗೆ ಚಿಕಿತ್ಸೆ ಮತ್ತು ಹಾನಿಗೊಳಗಾದ ಹಾಸ್ಟೆಲ್ ಪುನರ್ನಿರ್ಮಾಣಕ್ಕೆ ಈ ಹಣವನ್ನು ಬಳಸಲಾಗುತ್ತದೆ.

ಏರ್ ಇಂಡಿಯಾ ವಿಮಾನ ಅಪಘಾತ ಸಂತ್ರಸ್ತರಿಗೆ ನೆರವಾಗಲು ಟಾಟಾ ಸನ್ಸ್​ನಿಂದ 500 ಕೋಟಿ ರೂ. ಟ್ರಸ್ಟ್ ಸ್ಥಾಪನೆ
ವಿಮಾನ ಅಪಘಾತ ಸಂತ್ರಸ್ತರಿಗೆ ನೆರವಾಗಲು ಟಾಟಾ ಸನ್ಸ್​ನಿಂದ 500 ಕೋಟಿ ರೂ. ಟ್ರಸ್ಟ್ ಸ್ಥಾಪನೆ
Ganapathi Sharma
|

Updated on: Jul 19, 2025 | 11:10 AM

Share

ಮುಂಬೈ, ಜುಲೈ 19: ಅಹಮದಾಬಾದ್​ನಲ್ಲಿ ಏರ್ ಇಂಡಿಯಾ ವಿಮಾನ AI-171 ಅಪಘಾತದ (Air India Plane Crash) ಸಂತ್ರಸ್ತರಿಗಾಗಿ ಟಾಟಾ ಸನ್ಸ್ (Tata Sons) ಶುಕ್ರವಾರ ಮುಂಬೈನಲ್ಲಿ ‘ದಿ AI-171 ಮೆಮೋರಿಯಲ್ ಆ್ಯಂಡ್ ವೆಲ್‌ಫೇರ್ ಟ್ರಸ್ಟ್ (The AI-171 Memorial and Welfare Trust)’ ಸ್ಥಾಪಿಸಿದೆ. ಟ್ರಸ್ಟ್‌ನ ನೋಂದಣಿ ಪ್ರಕ್ರಿಯೆಯು ಪೂರ್ಣಗೊಂಡಿದ್ದು, ಇದರ ಮೂಲಕ ಅಹಮದಾಬಾದ್ ವಿಮಾನ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳು, ಗಾಯಗೊಂಡವರು ಮತ್ತು ಈ ದುರಂತದಿಂದ ಬಾಧಿತರಾದ ಎಲ್ಲರಿಗೂ ಸಹಾಯ ಮಾಡಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ. ಈ ಸಹಾಯವು ತಕ್ಷಣದ ಮತ್ತು ದೀರ್ಘಾವಧಿಯದ್ದಾಗಿರುತ್ತದೆ ಎಂಬುದನ್ನೂ ಸಂಸ್ಥೆ ತಿಳಿಸಿದೆ.

ಟಾಟಾ ಟ್ರಸ್ಟ್ ಕೆಲಸವೇನು?

ಮೃತರಿಗೆ 1 ಕೋಟಿ ರೂ., ಗಾಯಾಳುಗಳಿಗೆ ಚಿಕಿತ್ಸೆ, ಹಾಸ್ಟೆಲ್ ಪುನರ್ನಿರ್ಮಾಣ ಕಾರ್ಯವನ್ನು ಟ್ರಸ್ಟ್ ನೆರವೇರಿಸಿಕೊಡಲಿದೆ. ಈ ಟ್ರಸ್ಟ್‌ಗೆ ಟಾಟಾ ಸನ್ಸ್ ಮತ್ತು ಟಾಟಾ ಟ್ರಸ್ಟ್‌ಗಳು ಒಟ್ಟಾಗಿ ಒಟ್ಟು 500 ಕೋಟಿ ರೂ.ಗಳನ್ನು ಕೊಡುಗೆಯಾಗಿ ನೀಡಲಿವೆ. ಎರಡೂ ಸಂಸ್ಥೆಗಳು ತಲಾ 250 ಕೋಟಿ ರೂ.ಗಳನ್ನು ನೀಡಲಿವೆ. ಟ್ರಸ್ಟ್‌ನ ಹಣವನ್ನು ಮೃತರ ಕುಟುಂಬಗಳಿಗೆ 1 ಕೋಟಿ ರೂ.ಗಳ ಪರಿಹಾರ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸಲು ಬಳಸಲಾಗುತ್ತದೆ. ಅಪಘಾತದಲ್ಲಿ ಹಾನಿಗೊಳಗಾದ ಬಿಜೆ ವೈದ್ಯಕೀಯ ಕಾಲೇಜು ಹಾಸ್ಟೆಲ್ ಅನ್ನು ಸಹ ಟ್ರಸ್ಟ್ ಪುನರ್ನಿರ್ಮಿಸಲಿದೆ.

ಹೇಗಿರಲಿದೆ ಟಾಟಾ ಟ್ರಸ್ಟ್?

ಟ್ರಸ್ಟ್‌ನ ಆಡಳಿತವನ್ನು ಐದು ಸದಸ್ಯರ ಮಂಡಳಿಯು ನೋಡಿಕೊಳ್ಳುತ್ತದೆ. ಪ್ರಸ್ತುತ, ಇಬ್ಬರು ಟ್ರಸ್ಟಿಗಳನ್ನು ನೇಮಿಸಲಾಗಿದೆ. ಟಾಟಾ ಗ್ರೂಪ್ ತನ್ನ ಮಾಜಿ ಹಿರಿಯ ಅಧಿಕಾರಿ ಎಸ್ ಪದ್ಮನಾಭನ್, ಟಾಟಾ ಸನ್ಸ್ ಜನರಲ್ ಕೌನ್ಸೆಲ್ ಸಿದ್ಧಾರ್ಥ್ ಶರ್ಮಾ ಅವರನ್ನು ಟ್ರಸ್ಟಿಗಳಾಗಿ ನೇಮಿಸಿದೆ. ಉಳಿದ ಮೂವರು ಟ್ರಸ್ಟಿಗಳನ್ನು ಶೀಘ್ರದಲ್ಲೇ ನೇಮಿಸಲಾಗುವುದು. ಟ್ರಸ್ಟ್‌ನ ಪೂರ್ಣ ಕಾರ್ಯಾಚರಣೆಗಾಗಿ ತೆರಿಗೆ ನೋಂದಣಿ ಮತ್ತು ಇತರ ಔಪಚಾರಿಕತೆಗಳು ನಡೆಯುತ್ತಿವೆ ಎಂದು ಸಂಸ್ಥೆ ತಿಳಿಸಿದೆ.

ವಿಮಾನ ಪತನ ಸಂತ್ರಸ್ತರಿಗಷ್ಟೇ ಅಲ್ಲ ನೆರವು!

ಈ ಟ್ರಸ್ಟ್ ಕೇವಲ ಸಂತ್ರಸ್ತರಿಗೆ ಸೀಮಿತವಾಗಿರದೆ, ಅಪಘಾತದ ನಂತರ ಸೇವೆಗಳನ್ನು ಒದಗಿಸಿದ ಪ್ರಥಮ ಚಿಕಿತ್ಸೆ ನೀಡುವವರು, ವೈದ್ಯಕೀಯ ಸಿಬ್ಬಂದಿ, ಸಾಮಾಜಿಕ ಕಾರ್ಯಕರ್ತರು ಮತ್ತು ಸರ್ಕಾರಿ ನೌಕರರಿಗೆ ಮಾನಸಿಕ, ಭಾವನಾತ್ಮಕ ಮತ್ತು ಇತರ ಬೆಂಬಲವನ್ನು ಒದಗಿಸಲಿದೆ.

ಇದನ್ನೂ ಓದಿ: Plane Crash: ಅಹಮದಾಬಾದ್ ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು; ಹೊಸ ವಿಡಿಯೋ ಇಲ್ಲಿದೆ

ಜೂನ್ 12 ರಂದು ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ, ಅಪಘಾತಕ್ಕೀಡಾಗಿ ಹತ್ತಿರದ ವೈದ್ಯಕೀಯ ಕಾಲೇಜು ಹಾಸ್ಟೆಲ್ ಕಟ್ಟಡದ ಮೇಲೆ ಬಿದ್ದಿತ್ತು. ಈ ಅಪಘಾತದಲ್ಲಿ, ವಿಮಾನದಲ್ಲಿದ್ದ 242 ಜನರಲ್ಲಿ 241 ಜನರು ಪ್ರಾಣ ಕಳೆದುಕೊಂಡಿದ್ದರು. ಇದಲ್ಲದೆ, ಕಟ್ಟಡದಲ್ಲಿ ವಾಸಿಸುತ್ತಿದ್ದ ಅನೇಕ ವೈದ್ಯರು ಮತ್ತು ನಾಗರಿಕರು ಸಾವನ್ನಪ್ಪಿದ್ದರು. ಈ ಅಪಘಾತದಲ್ಲಿ ಕನಿಷ್ಠ 275 ಜನರು ಸಾವನ್ನಪ್ಪಿದ್ದರು. ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಸಾವನ್ನಪ್ಪಿದವರಲ್ಲಿ ಒಬ್ಬರಾಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್