AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗು ಎಂದು ಒತ್ತಾಯ, ಕೋಪದಲ್ಲಿ ಮಹಿಳೆಯ ಕೊಲೆ ಮಾಡಿದ ಟ್ಯಾಕ್ಸಿ ಡ್ರೈವರ್

ಮದುವೆಯಾಗು ಎಂದು ಪದೇ ಪದೇ ಒತ್ತಡ ಹಾಕುತ್ತಿದ್ದ ಮಹಿಳೆಯನ್ನು ಟ್ಯಾಕ್ಸಿ ಡ್ರೈವರ್​ ಕೊಲೆ ಮಾಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಏಪ್ರಿಲ್ 25 ರ ಬೆಳಗ್ಗೆ ನವಿ ಮುಂಬೈನ ಉರಾನ್ ಪ್ರದೇಶದ ಚಿರ್ನರ್-ಖಾರ್ಪಾಡಾದ ಉದ್ದಕ್ಕೂ ತಲೇಖರ್‌ನಲ್ಲಿ ಒಣ ಚರಂಡಿಯಲ್ಲಿ ಮಹಿಳೆಯ ವಿರೂಪಗೊಂಡ ದೇಹವು ಹೊದಿಕೆಯಲ್ಲಿ ಸುತ್ತಿಕೊಂಡಿತ್ತು ಸ್ಥಿತಿಯಲ್ಲಿ ಪತ್ತೆಯಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಮದುವೆಯಾಗು ಎಂದು ಒತ್ತಾಯ, ಕೋಪದಲ್ಲಿ ಮಹಿಳೆಯ ಕೊಲೆ ಮಾಡಿದ ಟ್ಯಾಕ್ಸಿ ಡ್ರೈವರ್
ನಯನಾ ರಾಜೀವ್
|

Updated on: Apr 28, 2024 | 1:23 PM

Share

ಮದುವೆಯಾಗು ಎಂದು ಒತ್ತಾಯ ಮಾಡಿದ್ದಕ್ಕೆ ಟ್ಯಾಕ್ಸಿ ಡ್ರೈವರ್ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ನವಿ ಮುಂಬೈನಲ್ಲಿ ನಡೆದಿದೆ. ಏಪ್ರಿಲ್ 25 ರ ಬೆಳಗ್ಗೆ ನವಿ ಮುಂಬೈನ ಉರಾನ್ ಪ್ರದೇಶದ ಚಿರ್ನರ್-ಖಾರ್ಪಾಡಾದ ಉದ್ದಕ್ಕೂ ತಲೇಖರ್‌ನಲ್ಲಿ ಒಣ ಚರಂಡಿಯಲ್ಲಿ ಮಹಿಳೆಯ ವಿರೂಪಗೊಂಡ ದೇಹವು ಹೊದಿಕೆಯಲ್ಲಿ ಸುತ್ತಿಕೊಂಡಿತ್ತು ಸ್ಥಿತಿಯಲ್ಲಿ ಪತ್ತೆಯಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಮತ್ತು 302 (ಕೊಲೆ) ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಉರಾನ್ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಸತೀಶ್ ನಿಕಮ್ ತಿಳಿಸಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವಾಗ, ಏಪ್ರಿಲ್ 18 ರಂದು ನೆರೆಯ ಮುಂಬೈನ ಮಾನ್ಕುರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತು. ಪರಿಶೀಲನೆಯ ನಂತರ, ಉರಾನ್‌ನಲ್ಲಿ ಪತ್ತೆಯಾದ ಶವ ನಾಪತ್ತೆಯಾದ ಮಹಿಳೆಯದ್ದು ಎಂದು ತಿಳಿದು ಬಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಶಿವಮೊಗ್ಗ: ಮೆಂಟಲ್ ಸೂರಿ ಹತ್ಯೆ ಪ್ರಕರಣ; ಮೃತನ ಮಗನೂ ಸೇರಿ ಮೂವರ ಬಂಧನ

ಹೆಚ್ಚಿನ ತನಿಖೆಯಿಂದ ಮಹಿಳೆ ಮುಂಬೈನ ನಾಗ್ಪಾಡಾ ನಿವಾಸಿ ಟ್ಯಾಕ್ಸಿ ಚಾಲಕನನ್ನು ಪ್ರೀತಿಸುತ್ತಿದ್ದಳು. ಮಹಿಳೆ ತನ್ನನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದಳು ಆದರೆ ಅವನು ನಿರಾಕರಿಸಿದ್ದರಿಂದ ಅವರ ನಡುವೆ ವಿವಾದಕ್ಕೆ ಕಾರಣವಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.

ಏಪ್ರಿಲ್ 18 ರಂದು ಸಂಜೆ, ವ್ಯಕ್ತಿ ಮನ್ಖುರ್ದ್‌ನಿಂದ ಮಹಿಳೆಯನ್ನು ತನ್ನ ಕಾರಿನಲ್ಲಿ ಥಾಣೆ ಜಿಲ್ಲೆಯ ಕಲ್ಯಾಣ್ ಪ್ರದೇಶದ ಖಡವ್ಲಿಗೆ ಕರೆದುಕೊಂಡು ಹೋಗಿದ್ದ. ಏಪ್ರಿಲ್ 19 ರಂದು ಬೆಳಗಿನ ಜಾವ 1 ಗಂಟೆ ಸುಮಾರಿಗೆ ಆಕೆಯನ್ನು ಕೊಂದು ಶವವನ್ನು ನದಿಗೆ ಎಸೆದಿದ್ದಾನೆ ಎಂದು ಅವರು ಹೇಳಿದ್ದಾರೆ.

ಆರೋಪಿಯನ್ನು ಶನಿವಾರ ಬಂಧಿಸಿ ಸ್ಥಳೀಯ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ಏಪ್ರಿಲ್ 29 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ