AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಟಿ ಉದ್ಯೋಗಿಗಳಿಗೆ ಲೈಂಗಿಕ ಕಿರುಕುಳ, ಮತಾಂತರಕ್ಕೆ ಯತ್ನ, ನಾಸಿಕ್​ನ ಟಿಸಿಎಸ್ ಕಚೇರಿಗೆ ಬೀಗ

ಟಿಸಿಎಸ್ ನಾಸಿಕ್ ಕಚೇರಿಯಲ್ಲಿ ನಡೆದ ಲೈಂಗಿಕ ಕಿರುಕುಳ, ಮತಾಂತರ ಯತ್ನದ ಆರೋಪಗಳ ಹಿನ್ನೆಲೆಯಲ್ಲಿ ಸಂಸ್ಥೆ ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಇದು ಕೇವಲ ವೈಯಕ್ತಿಕ ಘರ್ಷಣೆಯಲ್ಲ, ಬದಲಿಗೆ ಸಂಘಟಿತ ಜಾಲದ ಕೃತ್ಯ ಎಂದು ಪೊಲೀಸರು ತಿಳಿಸಿದ್ದಾರೆ. ಎಟಿಎಸ್ ಮತ್ತು ಎನ್‌ಐಎ ತನಿಖೆ ನಡೆಸುತ್ತಿದ್ದು, ವಿದೇಶಿ ಸಂಪರ್ಕಗಳ ಶಂಕೆ ವ್ಯಕ್ತವಾಗಿದೆ. ಈ ಪ್ರಕರಣ ಐಟಿ ಉದ್ಯೋಗಿಗಳಿಗೆ ಸುರಕ್ಷತೆಯ ಬಗ್ಗೆ ದೊಡ್ಡ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಐಟಿ ಉದ್ಯೋಗಿಗಳಿಗೆ ಲೈಂಗಿಕ ಕಿರುಕುಳ, ಮತಾಂತರಕ್ಕೆ ಯತ್ನ, ನಾಸಿಕ್​ನ ಟಿಸಿಎಸ್ ಕಚೇರಿಗೆ ಬೀಗ
ಟಿಸಿಎಸ್Image Credit source: Federal
ನಯನಾ ರಾಜೀವ್
|

Updated on: Apr 16, 2026 | 10:03 AM

Share

ನಾಸಿಕ್, ಏಪ್ರಿಲ್ 16: ಭಾರತದ ಐಟಿ ದೈತ್ಯ ಸಂಸ್ಥೆ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS)  ತನ್ನ ನಾಸಿಕ್ ಕಚೇರಿಯ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಕೇವಲ ಕೆಲಸದ ಕಿರುಕುಳ ಎಂದು ಆರಂಭವಾದ ದೂರುಗಳು ಈಗ ಅತ್ಯಾಚಾರ, ಮತಾಂತರದ ಸಂಚು ಮತ್ತು ಅಂತರರಾಷ್ಟ್ರೀಯ ಸಂಪರ್ಕಗಳಂತಹ ಭಯಾನಕ ಸ್ವರೂಪ ಪಡೆದುಕೊಂಡಿವೆ.

ನಾಸಿಕ್ ಪೊಲೀಸ್ ಆಯುಕ್ತ ಸಂದೀಪ್ ಕಾರ್ಣಿಕ್ ಅವರು ಈ ಪ್ರಕರಣದ ಬಗ್ಗೆ ಸ್ಫೋಟಕ ಮಾಹಿತಿ ನೀಡಿದ್ದಾರೆ. “ಇದು ಕೇವಲ ವೈಯಕ್ತಿಕ ಘರ್ಷಣೆಯಲ್ಲ, ಬದಲಿಗೆ ಇದೊಂದು ಸಂಘಟಿತ ಜಾಲದಂತೆ ಕಂಡುಬರುತ್ತಿದೆ. ಹಿರಿಯ ಅಧಿಕಾರಿಗಳೇ ತಮ್ಮ ಕೈಕೆಳಗಿನ ಉದ್ಯೋಗಿಗಳನ್ನು ಗುರಿಯಾಗಿಸಿಕೊಂಡು ಈ ಕೃತ್ಯ ಎಸಗಿದ್ದಾರೆ,” ಎಂದು ಅವರು ತಿಳಿಸಿದ್ದಾರೆ ಎಂದು ನ್ಯೂಸ್​ 18 ವರದಿ ಮಾಡಿದೆ.

ತನಿಖೆಯ ತೀವ್ರತೆಯನ್ನು ಪರಿಗಣಿಸಿ, ಪ್ರಕರಣದ ವಿವರಗಳನ್ನು ಭಯೋತ್ಪಾದನಾ ನಿರೋಧಕ ದಳ (ATS) ಮತ್ತು ರಾಷ್ಟ್ರೀಯ ತನಿಖಾ ದಳ (NIA) ಗೆ ನೀಡಲಾಗಿದೆ. ಈ ಜಾಲಕ್ಕೆ ವಿದೇಶಿ ಹಣಕಾಸಿನ ನೆರವು ಅಥವಾ ಅಂತಾರಾಷ್ಟ್ರೀಯ ಸಂಪರ್ಕಗಳಿವೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ಎಫ್‌ಐಆರ್ ದಾಖಲಾದ ಪ್ರಮುಖ ಆರೋಪಿಗಳು ಪ್ರಸ್ತುತ ಎಂಟು ಉದ್ಯೋಗಿಗಳ ವಿರುದ್ಧ 9 ಎಫ್‌ಐಆರ್‌ಗಳು ದಾಖಲಾಗಿದ್ದು, ಈಗಾಗಲೇ ಏಳು ಮಂದಿಯನ್ನು ಬಂಧಿಸಲಾಗಿದೆ.

ಮತ್ತಷ್ಟು ಓದಿ: ಮಗು ಬೇಕಂದ್ರೆ ನಿನ್ನ ಹೆಂಡ್ತಿನ ನನ್ನ ಜತೆ ಕಳ್ಸು ಎಂದ ಟಿಸಿಎಸ್ ಬಾಸ್: ಐಟಿ ಉದ್ಯೋಗಿಯ ಸ್ಫೋಟಕ ಹೇಳಿಕೆ

ನಿದಾ ಖಾನ್: ಧಾರ್ಮಿಕ ಕಿರುಕುಳ ನೀಡಿದ ಆರೋಪ, ಅಶ್ವಿನಿ ಚಿನಾನಿ (ಮಾಜಿ ಎಚ್‌ಆರ್ ಹೆಡ್): ದೂರು ನೀಡಲು ಬಂದವರನ್ನು ಹೆದರಿಸಿ, ಆರೋಪಿಗಳಿಗೆ ಸಾಥ್ ನೀಡಿದ ಆರೋಪ. ಉಳಿದಂತೆ ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ನೀಡಿದ ಹಿರಿಯ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗಿದೆ.

ರಾಷ್ಟ್ರೀಯ ಮಹಿಳಾ ಆಯೋಗದಿಂದ ತನಿಖಾ ಸಮಿತಿ ರಚನೆ ಈ ಪ್ರಕರಣವು ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ, ರಾಷ್ಟ್ರೀಯ ಮಹಿಳಾ ಆಯೋಗ (NCW) ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ. ಸತ್ಯಶೋಧನೆಗಾಗಿ ವಿಶೇಷ ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿಯು ಏಪ್ರಿಲ್ 18 ರಂದು ನಾಸಿಕ್‌ಗೆ ಭೇಟಿ ನೀಡಿ ಸಂತ್ರಸ್ತರಿಂದ ಮಾಹಿತಿ ಸಂಗ್ರಹಿಸಲಿದೆ.

ಬಲಿಪಶುಗಳಿಗೆ ಪೊಲೀಸರ ಕರೆ ದೌರ್ಜನ್ಯಕ್ಕೊಳಗಾದ ಇನ್ನೂ ಹೆಚ್ಚಿನ ಮಹಿಳೆಯರು ಅಥವಾ ಪುರುಷ ಉದ್ಯೋಗಿಗಳು ಇದ್ದಲ್ಲಿ, ಅವರು ಯಾವುದೇ ಭಯವಿಲ್ಲದೆ ಮುಂದೆ ಬಂದು ದೂರು ನೀಡುವಂತೆ ಪೊಲೀಸ್ ಆಯುಕ್ತರು ವಿನಂತಿಸಿದ್ದಾರೆ. ಕೆಲಸದ ಸ್ಥಳದ ಸುರಕ್ಷತೆಯ ಬಗ್ಗೆ ಈಗ ದೊಡ್ಡ ಮಟ್ಟದ ಆತಂಕ ಮೂಡಿದ್ದು, ಕಾರ್ಪೊರೇಟ್ ವಲಯದಲ್ಲಿ ಇಂತಹ ‘ಸಂಘಟಿತ ಮತಾಂತರ’ದ ಯತ್ನಗಳು ನಡೆಯುತ್ತಿರುವುದು ಬೆಚ್ಚಿಬೀಳಿಸುವಂತಿದೆ.

ಟಿಸಿಎಸ್ ನಾಸಿಕ್ ಶಾಖೆಯು ಈಗ ಬಿಕೋ ಎನ್ನುತ್ತಿದೆ. ಒಂದು ಕಡೆ ಕಾನೂನು ಹೋರಾಟ ನಡೆಯುತ್ತಿದ್ದರೆ, ಮತ್ತೊಂದೆಡೆ ಐಟಿ ಕ್ಷೇತ್ರದ ಸುರಕ್ಷತೆಯ ಬಗ್ಗೆ ಜನರಲ್ಲಿ ಪ್ರಶ್ನೆಗಳು ಎದ್ದಿವೆ. ತನಿಖೆ ಮುಂದುವರೆದಂತೆ ಇನ್ನಷ್ಟು ಆಘಾತಕಾರಿ ಸತ್ಯಗಳು ಹೊರಬರುವ ಸಾಧ್ಯತೆಯಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!