AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೌಶಲ್ಯಾಭಿವೃದ್ಧಿ ಹಗರಣ ಪ್ರಕರಣ: ಚಂದ್ರಬಾಬು ನಾಯ್ಡುಗೆ 14 ದಿನಗಳ ನ್ಯಾಯಾಂಗ ಬಂಧನ

ಕೌಶಲ್ಯಾಭಿವೃದ್ಧಿ ಹಗರಣ ಪ್ರಕರಣ ಆಂಧ್ರಪ್ರದೇಶ ರಾಜಕೀಯದಲ್ಲಿ ಸಂಚಲನ ಮೂಡಿಸಿರುವುದು ಗೊತ್ತೇ ಇದೆ. ಈ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಅವರನ್ನು ಸಿಐಡಿ ಅಧಿಕಾರಿಗಳು ಶನಿವಾರ ನಂದ್ಯಾಲದಲ್ಲಿ ಬಂಧಿಸಿ ವಿಜಯವಾಡ ಸಿಐಡಿ ಕಚೇರಿಗೆ ಕರೆದೊಯ್ದಿದ್ದಾರೆ. ಸದ್ಯ ನಾಯ್ಡು ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕೌಶಲ್ಯಾಭಿವೃದ್ಧಿ ಹಗರಣ ಪ್ರಕರಣ: ಚಂದ್ರಬಾಬು ನಾಯ್ಡುಗೆ 14 ದಿನಗಳ ನ್ಯಾಯಾಂಗ ಬಂಧನ
ಚಂದ್ರಬಾಬು ನಾಯ್ಡುಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ಎಸಿಬಿ ನ್ಯಾಯಾಲಯ
Rakesh Nayak Manchi
|

Updated on:Sep 10, 2023 | 7:49 PM

Share

ಅಮರಾವತಿ, ಸೆ.10: ಆಂಧ್ರಪ್ರದೇಶ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಕೌಶಲ್ಯಾಭಿವೃದ್ಧಿ ಹಗರಣ (Skill development scam) ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಮುಖ್ಯಮಂತ್ರಿ ಹಾಗೂ ಟಿಡಿಪಿ ನಾಯಕ ಎನ್ ಚಂದ್ರಬಾಬು ನಾಯ್ಡು (N Chandrababu Naidu) ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಎಸ್‌ಐಟಿ ವಾದವನ್ನು ಒಪ್ಪಿಕೊಂಡಿರುವ ಎಸಿಬಿ ನ್ಯಾಯಾಲಯವು ಕೌಶಲ್ಯಾಭಿವೃದ್ಧಿ ಪ್ರಕರಣದಲ್ಲಿ ಚಂದ್ರಬಾಬುಗೆ ಸೆ.22 ರ ವರೆಗೆ, ಅಂದರೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಇಂದು ರಾತ್ರಿ ಚಂದ್ರಬಾಬು ಅವರನ್ನು ಎಸ್‌ಐಟಿ ಕಚೇರಿಗೆ ಕರೆದೊಯ್ದು ಸೋಮವಾರ ಬೆಳಗ್ಗೆ ರಾಜಮಂಡ್ರಿ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಗುತ್ತದೆ.

ಇದನ್ನೂ ಓದಿ: 37ನೇ ಆರೋಪಿಯಾಗಿ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅರೆಸ್ಟ್​​​​: ಕೌಶಲ್ಯಾಭಿವೃದ್ಧಿ ಹಗರಣ ಬೆಳಕಿಗೆ ಬಂದಿದ್ದು ಹೇಗೆ.. ಸಿಎಂ ಬಾಬು ಪಾತ್ರವೇನು?

ಕೌಶಲ್ಯಾಭಿವೃದ್ಧಿ ಹಗರಣ ಪ್ರಕರಣ ಆಂಧ್ರಪ್ರದೇಶ ರಾಜಕೀಯದಲ್ಲಿ ಸಂಚಲನ ಮೂಡಿಸಿರುವುದು ಗೊತ್ತೇ ಇದೆ. ಈ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಅವರನ್ನು ಸಿಐಡಿ ಅಧಿಕಾರಿಗಳು ಶನಿವಾರ ನಂದ್ಯಾಲದಲ್ಲಿ ಬಂಧಿಸಿ ವಿಜಯವಾಡ ಸಿಐಡಿ ಕಚೇರಿಗೆ ಕರೆದೊಯ್ದಿದ್ದರು.

ಒಟ್ಟು 34 ಆರೋಪಗಳನ್ನು ದಾಖಲಿಸಿಕೊಂಡಿರುವ ಸಿಐಡಿ, ಚಂದ್ರಬಾಬು ಅವರನ್ನು ವಿಚಾರಣೆ ನಡೆಸಿದ ಬಳಿಕ ಭಾನುವಾರ ಬೆಳಗ್ಗೆ ಸಿಬಿಐ ಅಧಿಕಾರಿಗಳು ಎಸಿಬಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಈ ಕೌಶಲ್ಯಾಭಿವೃದ್ಧಿ ಪ್ರಕರಣದ ಸಂಚಿನ ಸೂತ್ರಧಾರಿ ಚಂದ್ರಬಾಬು ಎಂದು ಸಿಐಡಿ ಎಸಿಬಿ ನ್ಯಾಯಾಲಯಕ್ಕೆ ರಿಮಾಂಡ್ ವರದಿ ಸಲ್ಲಿಸಿದೆ.

ಕೌಶಲಾಭಿವೃದ್ಧಿ ಹಗರಣ ನಡೆದ ರೀತಿಯನ್ನು ವಿವರಿಸಿದ ಸಿಐಡಿ, ಚಂದ್ರಬಾಬು ಆದೇಶದ ಮೇರೆಗೆ ಹಣ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದೆ. ಈ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರನ್ನು ಆರೋಪಿಯನ್ನಾಗಿ ಸೇರಿಸಲು ಸಿಐಡಿ ಮೆಮೊ ಸಲ್ಲಿಸಿತ್ತು.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:47 pm, Sun, 10 September 23