N Chandrababu Naidu: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರನ್ನು ವಶಕ್ಕೆ ಪಡೆದ ಪೊಲೀಸರು
TDP chief N Chandrababu Naidu: ಚಿತ್ತೂರಿನಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಲು ಪೊಲೀಸರು ಅನುಮತಿ ನಿರಾಕರಿಸಿದ ಹಿನ್ನೆಲೆ ತಿರುಪತಿ ವಿಮಾನ ನಿಲ್ದಾಣದಲ್ಲಿ ಚಂದ್ರಬಾಬು ನಾಯ್ಡು ಧರಣಿ ಕುಳಿತಿದ್ದ ಚಂದ್ರಬಾಬು ನಾಯ್ಡು ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹೈದರಾಬಾದ್: ಚಿತ್ತೂರಿಗೆ ಚುನಾವಣಾ ಪ್ರಚಾರಕ್ಕೆ ಹೊರಟಿದ್ದ ಟಿಡಿಪಿ ಮುಖ್ಯಸ್ಥ ಹಾಗೂ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ರೇಣಿಗುಂಟಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಂಧ್ರಪ್ರದೇಶದ ತಿರುಪತಿ ವಿಮಾನ ನಿಲ್ದಾಣದಲ್ಲಿ ಚಂದ್ರಬಾಬು ನಾಯ್ಡು ಅವರನ್ನು ವಶಕ್ಕೆ ಪಡೆಯಲಾಗಿದೆ. ಚಿತ್ತೂರಿನಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಲು ಪೊಲೀಸರು ಅನುಮತಿ ನಿರಾಕರಿಸಿದ ಹಿನ್ನೆಲೆ ತಿರುಪತಿ ವಿಮಾನ ನಿಲ್ದಾಣದಲ್ಲಿ ಚಂದ್ರಬಾಬು ನಾಯ್ಡು ಧರಣಿ ಕುಳಿತಿದ್ದರು.
ಆಂಧ್ರಪ್ರದೇಶ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಚಿತ್ತೂರಿಗೆ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದಾಗ ತಿರುಪತಿ ಏರ್‌ಪೋರ್ಟ್‌ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚಂದ್ರಬಾಬು ನಾಯ್ಡು ಅವರು ಚುನಾವಣಾ ಪ್ರಚಾರ ನಡೆಸಲು ಚಿತ್ತೂರಿಗೆ ತೆರಳಲೆಂದು ರೇಣಿಗುಂಟಾದಲ್ಲಿರುವ ತಿರುಪತಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.ಆದರೆ ಚಿತ್ತೂರಿನಲ್ಲಿ ಚುನಾವಣಾ ಪ್ರಚಾರ ನಡೆಸಲು ಚುನಾವಣಾ ಆಯೋಗ ನೀಡಿದ ಅನುಮತಿಯಲ್ಲಿ ಕೆಲ ವ್ಯತ್ಯಾಸಗಳು ಕಂಡುಬಂದಿದ್ದು, ಪೊಲೀಸರು ಚಂದ್ರಬಾಬು ನಾಯ್ಡು ಅವರನ್ನು ಚುನಾವಣಾ ಪ್ರಚಾರಕ್ಕೆ ಚಿತ್ತೂರಿಗೆ ತೆರಳುವುದನ್ನು ತಡೆಗಟ್ಟಲು ವಶಕ್ಕೆ ಪಡೆದಿದ್ದಾರೆ.
ಪೊಲೀಸರು ವಶಕ್ಕೆ ಪಡೆದ ಘಟನೆಯನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕೆಲ ಕಾಲ ನೆಲದ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು. ಆದರೆ, ಪೊಲೀಸಲು ಚಿತ್ತೂರಿಗೆ ಪ್ರಚಾರಕ್ಕೆ ತೆರಳದಂತೆ ಅವರಿಗೆ ಹಲವು ಬಾರಿ ಮನವಿ ಮಾಡಿಕೊಂಡು. 40-45 ನಿಮಿಷಗಳ ನಂತರ ಅವರು ಪೊಲೀಸರ ವಿನಂತಿಗೆ ಓಗೊಟ್ಟು ಪ್ರತಿಭಟನೆ ನಿಲ್ಲಿಸಿ ಚಿತ್ತೂರಿಗೆ ತೆರಳದೇ ಮರಳಲು ಒಪ್ಪಿಗೆ ಸೂಚಿಸಿದರು ಎಂದು ಟೈಮ್ಸ್ ನೌ ವರದಿ ಮಾಡಿದೆ.
ನಡೆಯುತ್ತಿದೆ ಶೀತಲ ಸಮರ
ಆಂಧ್ರಪ್ರದೇಶದಲ್ಲಿನ YSR ಕಾಂಗ್ರೆಸ್ನ ಆಡಳಿತವನ್ನು ವಿರೋಧಿಸುತ್ತ ಬಂದಿರುವ ವಿಪಕ್ಷ ನಾಯಕರೂ ಆಗಿರುವ ಚಂದ್ರಬಾಬು ನಾಯ್ಡು ಇಂದು ಚಿತ್ತೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಧರಣಿ ನಡೆಸಲು ತೀರ್ಮಾನಿಸಿದ್ದರು. ಆದರೆ, ಚುನಾವಣಾ ನೀತಿ ಸಂಹಿತೆ ಮತ್ತು ಕೊರೊನಾ ಹೆಚ್ಚಳದ ಕಾರಣ ನೀಡಿ ಚಿತ್ತೂರ್ ಡಿಸಿಪಿ ಛಂದ್ರಬಾಬು ನಾಯ್ಡು ಅವರು ಚಿತ್ತೂರಿನಲ್ಲಿ ಧರಣಿ ನಡೆಸಲು ಅನುಮತಿ ನೀಡಿರಲಿಲ್ಲ. ಆದರೂ ಚಂದ್ರಬಾಬು ನಾಯ್ಡು ಭೇಟಿ ಮಾಡುವ ನಿರೀಕ್ಷೆಯಿದ್ದ ಕಾರಣ ಟಿಡಿಪಿ ಪಕ್ಷದ ಚಿತ್ತೂರು ಪ್ರಾಂತ್ಯದ ನಾಯರಾದ ಎನ್.ಅಮರನಾಥ್ ರೆಡ್ಡಿ, ಪುಲಿವರ್ತಿ ನಾನಿ, ಬಿ.ಎನ್.ರಾಜಸಿಂಹುಲು, ಜಿ.ನರಸಿಂಹಾ ಯಾದವ್ ಅವರನ್ನು ಸೋಮವಾರ ಬೆಳ್ಳಂಬೆಳಗ್ಗೆ ಗೃಹ ಬಂಧನದಲ್ಲಿ ಇರಿಸಲಾಗಿದೆ. ಇದರಿಂದ ಜಿಲ್ಲೆಯಾದ್ಯಂತ ಟಿಡಿಪಿ ಪಕ್ಷದ ಕಾರ್ಯಕರ್ತರಲ್ಲಿ ಆತಂಕ ಹೆಚ್ಚಿದೆ.
ಇಷ್ಟೇ ಅಲ್ಲದೇ, ಸದ್ಯದಲ್ಲೇ ನಡೆಯಲಿರುವ ಸ್ಥಳೀಯ ಪಾಲಿಕೆ ಚುನಾವಣೆಗಳಲ್ಲಿ ಗೆಲ್ಲಲೇಬೇಕೆಂಬ ಹುಕಿಯಲ್ಲಿರುವ ಟಿಡಿಪಿ ವಿರುದ್ಧ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಆದರೆ, ಆಡಳಿತಾರೂಢ YSR ಕಾಂಗ್ರೆಸ್ ತನ್ನ ಅಭ್ಯರ್ಥಿಗಳಿಗೆ ನಾಮಪತ್ರ ಹಿಂತೆಗೆದುಕೊಳ್ಳುವಂತೆ ಬಲವಂತವಾಗಿ ಒತ್ತಡ ಹೇರುತ್ತಿದೆ ಎಂದು ಚಂದ್ರಬಾವಬು ನಾಯ್ಡು ಆರೋಪಿಸಿದ್ದಾರೆ. ಈ ನಿಟ್ಟಿನಲ್ಲಿ ಚಿತ್ತೂರಿನಲ್ಲಿ ಧರಣಿ ನಡೆಸಲು ಅವರು ತೀರ್ಮಾನಿಸಿದ್ದರು.
ಪ್ರತಿಭಟನೆ ನಡೆಸಲೆಂದು ಅವರಿಗೆ ಅನುಮತಿ ನೀಡದಿದ್ದರೂ ಚಿತ್ತೂರಿಗೆ ತೆರಳುತ್ತಿದ್ದ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುಮಾರು ಮುಕ್ಕಾಲು ಗಂಟೆಗಳ ವಾಗ್ವಾದದ ನಂತರ ತಮ್ಮ ನಿಲುವನ್ನು ಸಡಿಲಿಸಿದ ಚಂದ್ರಬಾಬು ನಾಯ್ಡು ಚಿತ್ತೂರಿಗೆ ತೆರಳದೇ ಮರಳಿದ್ದಾರೆ. ಈ ಘಟನೆಯ ನಂತರ ಆಂಧ್ರಪ್ರದೇಶದಲ್ಲಿ YSR ಕಾಂಗ್ರೆಸ್ ಮತ್ತು ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ, ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಅವರ ನಡುವಿನ ಸಮರ ತೀವ್ರವಾಗಲಿದೆ ಎಂದು ಹೇಳಲಾಗುತ್ತಿದೆ.
ಸಿಎಂ ಜಗನ್ ಮೋಹನ್ ರೆಡ್ಡಿ ವಿರುದ್ಧ ಇದೇ ಮೊದಲಲ್ಲ ಹೋರಾಟ
ಒಂದು ದಿನದ ಮಟ್ಟಿಗೆ ತೆಲುಗು ದೇಶಂ ಪಾರ್ಟಿಯ (ಟಿಡಿಪಿ) 13 ಶಾಸಕರನ್ನು ಅಮಾನತು ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಆಂಧ್ರದ ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬುನಾಯ್ಡು ಪತ್ರಿಕಾಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು.
ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮೇಲೆ ಹರಿಹಾಯ್ದಿದ್ದ ಅವರು, ‘ಅವರು ನಾಚಿಕೆಯಿಲ್ಲದಂತೆ ಮಾತನಾಡುತ್ತಾರೆ. ಮುಖ್ಯಮಂತ್ರಿ ತಡವಾಗಿ ವಿಧಾನಸಭೆಗೆ ಬಂದಿದ್ದರಿಂದ, ತಡವಾಗಿ ಅಧಿವೇಶನ ಶುರುವಾಯಿತು. 14 ವರ್ಷ ಮುಖ್ಯಮಂತ್ರಿಯಾಗಿ, 12 ವರ್ಷ ಪ್ರತಿಪಕ್ಷ ನಾಯಕನಾಗಿ ಕೆಲಸ ಮಾಡಿದ್ದೇನೆ. ನನ್ನ ರಾಜಕೀಯ ಜೀವನದಲ್ಲಿ ಮೊದಲ ಬಾರಿ ಓರ್ವ ಫೇಕ್ ಸಿಎಂ ನೋಡುತ್ತಿದ್ದೇನೆ’ ಎಂದಿದ್ದರು.
ಪಂಚಾಯತ್ ರಾಜ್ ಕಾಯ್ದೆ ಬಗ್ಗೆ ಮಾತನಾಡಲು ಅವಕಾಶ ನೀಡದೆ, ಅಮಾನತು ಆದೇಶವನ್ನು ಅಂಗೀಕರಿಸಲಾಗಿದೆ. ಚಂಡಮಾರುತದಿಂದಾಗಿ ರೈತರು ಬೆಳೆದ 20 ಲಕ್ಷ ಎಕರೆ ಬೆಳೆ ಹಾನಿಗೀಡಾಗಿದೆ. ರೈತರು 1 ಲಕ್ಷ ಕೋಟಿ ಹಾನಿಗೀಡಾಗಿ ದಿಕ್ಕು ತೋಚದ ಸ್ಥಿತಿಯಲ್ಲಿದ್ದಾರೆ. ಇದನ್ನು ಹೇಳಿದರೆ ಮುಖ್ಯಮಂತ್ರಿ ಗಾಳಿಸುದ್ದಿ ಅಂತಾರೆ. ಬಹಳ ಅಹಂಕಾರದಿಂದ ಮಾತನಾಡ್ತಾರೆ ಎಂದು ಬೇಸರ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ: ಚಂದ್ರಬಾಬು ನಾಯ್ಡು ಅಮರಾವತಿ; ಕನಸಿಗೆ ಕೊಡಲಿ ಏಟು ಕೊಟ್ಟ ಸಿಎಂ ಜಗನ್ ರೆಡ್ಡಿ
Published On - 12:20 pm, Mon, 1 March 21