ತಿರುಪತಿ: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಟಿಡಿಪಿ ನಾಯಕ
ಆಂಧ್ರಪ್ರದೇಶದ ತಿರುಪತಿಯಲ್ಲಿ ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖಂಡರೊಬ್ಬರು ತಮ್ಮ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ವರದಿಯಾಗಿದೆ. ಚಂದ್ರಗಿರಿ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಟಿಡಿಪಿ ಪ್ರತಿಭಟನೆ ನಡೆಸಿದ್ದು, ಸಾವಿರಾರು ‘ನಕಲಿ’ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕುವಂತೆ ಒತ್ತಾಯಿಸಿತ್ತು.

ಪ್ರತಿಭಟನೆಯ ವೇಳೆ, ಟಿಡಿಪಿಯ ಚಂದ್ರಗಿರಿ ಉಸ್ತುವಾರಿ ಪುಲಿವರ್ತಿ ನಾನಿ ಮತ್ತು ಇತರ ಮುಖಂಡರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.
ಬಂಧನಕ್ಕೊಳಗಾದ ಬಳಿಕ ನಾನಿ ತನ್ನ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದರು, ಆದರೆ ಪೊಲೀಸ್ ಅಧಿಕಾರಿಗಳು ಸಕಾಲದಲ್ಲಿ ಮಧ್ಯಪ್ರವೇಶಿಸಿ ಪ್ರಯತ್ನವನ್ನು ವಿಫಲಗೊಳಿಸಿದರು.
ಮತ್ತಷ್ಟು ಓದಿ: ಮೈಸೂರು: ಉಪ ತಹಸೀಲ್ದಾರ್ ಕಿರುಕುಳ ಆರೋಪ, ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ
ಘಟನೆಯ ನಂತರ, ನಾನಿ ಅವರನ್ನು ಮತ್ತೆ ಪೊಲೀಸರು ಬಂಧಿಸಿದರು, ಇದು ಪೊಲೀಸರ ಅನುಚಿತ ವರ್ತನೆಯನ್ನು ಆರೋಪಿಸಿ ಟಿಡಿಪಿ ಕಾರ್ಯಕರ್ತರ ಪ್ರತಿಭಟನೆಗೆ ಕಾರಣವಾಯಿತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ