Andhra Pradesh: ವಿಜಯವಾಡದಲ್ಲಿ ಕಿಡಿಗೇಡಿಗಳಿಂದ ಟಿಡಿಪಿ ಕಚೇರಿ ಧ್ವಂಸ, ಕಾರಿಗೆ ಬೆಂಕಿ

ವಿಜಯವಾಡದಲ್ಲಿ ಕಿಡಿಗೇಡಿಗಳು ತೆಲುಗು ದೇಶಂ ಪಕ್ಷದ ಕಚೇರಿಯನ್ನು ಧ್ವಂಸಗೊಳಿಸಿದ್ದು, ಕಾರಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ತೆಲುಗು ದೇಶಂ ಪಕ್ಷದ (ಟಿಡಿಪಿ) ಕಚೇರಿ ಮೇಲೆ ದಾಳಿ ಮಾಡಿದ ಅಪರಿಚಿತ ದುಷ್ಕರ್ಮಿಗಳು ಟಿಡಿಪಿ ಪ್ರಧಾನ ಕಾರ್ಯದರ್ಶಿ ಕೊನೇರು ಸಂದೀಪ್ ಅವರ ಕಾರಿಗೆ ಬೆಂಕಿ ಹಚ್ಚಿದ್ದಾರೆ.

Andhra Pradesh: ವಿಜಯವಾಡದಲ್ಲಿ ಕಿಡಿಗೇಡಿಗಳಿಂದ ಟಿಡಿಪಿ ಕಚೇರಿ ಧ್ವಂಸ, ಕಾರಿಗೆ ಬೆಂಕಿ
ತೆಲುಗು ದೇಶಂ ಪಕ್ಷದ ಕಚೇರಿ Image Credit source: The Hindu
Follow us
ನಯನಾ ರಾಜೀವ್
|

Updated on:Feb 21, 2023 | 11:10 AM

ವಿಜಯವಾಡದಲ್ಲಿ ಕಿಡಿಗೇಡಿಗಳು ತೆಲುಗು ದೇಶಂ ಪಕ್ಷದ ಕಚೇರಿಯನ್ನು ಧ್ವಂಸಗೊಳಿಸಿದ್ದು, ಕಾರಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ತೆಲುಗು ದೇಶಂ ಪಕ್ಷದ (ಟಿಡಿಪಿ) ಕಚೇರಿ ಮೇಲೆ ದಾಳಿ ಮಾಡಿದ ಅಪರಿಚಿತ ದುಷ್ಕರ್ಮಿಗಳು ಟಿಡಿಪಿ ಪ್ರಧಾನ ಕಾರ್ಯದರ್ಶಿ ಕೊನೇರು ಸಂದೀಪ್ ಅವರ ಕಾರಿಗೆ ಬೆಂಕಿ ಹಚ್ಚಿದ್ದಾರೆ.  ಈ ಕುರಿತು ಟಿಡಿಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಡಳಿತಾರೂಢ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷ (ವೈಎಸ್‌ಆರ್‌ಸಿಪಿ) ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದ ಬಳಿಕ ದುಷ್ಕರ್ಮಿಗಳು ಗನ್ನವರಂನಲ್ಲಿ ಟಿಡಿಪಿ ಕಚೇರಿ ಮತ್ತು ಟಿಡಿಪಿ ಮುಖಂಡರ ಕಾರುಗಳನ್ನು ಧ್ವಂಸಗೊಳಿಸಿದ್ದಾರೆ.

ದಾಳಿಯ ನಂತರ ಟಿಡಿಪಿ ಸದಸ್ಯರು ವಿಧ್ವಂಸಕ ಕೃತ್ಯಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ತೆಲಂಗಾಣದ ವಿಕಾರಾಬಾದ್ ಜಿಲ್ಲೆಯಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಶಾಸಕರೊಬ್ಬರ ಸಹಾಯಕರು ಹಿಂದೂ ಕಾರ್ಯಕರ್ತನ ಮನೆಯ ಮೇಲೆ ದಾಳಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಮತ್ತಷ್ಟು ಓದಿ: ಜೆಎನ್​ಯುನಲ್ಲಿ ಪೆರಿಯಾರ್, ಕಾರ್ಲ್​ ಮಾರ್ಕ್ಸ್​ ಭಾವಚಿತ್ರಗಳ ಧ್ವಂಸ: ವಿದ್ಯಾರ್ಥಿಗಳ ಈ ನಡೆಗೆ ಸ್ಟಾಲಿನ್ ಪ್ರತಿಕ್ರಿಯೆ

ದುಷ್ಕರ್ಮಿಗಳು ಹಿಂದೂ ಕಾರ್ಯಕರ್ತನ ಕಾರನ್ನು ಗುರಿಯಾಗಿಸಿ ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ. ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ. ವೈಎಸ್‌ಆರ್‌ಸಿಪಿ ಸದಸ್ಯರು ಮತ್ತು ಸ್ಥಳೀಯ ಶಾಸಕ ವಲ್ಲಭನೇನಿ ವಂಶಿ ಅವರ ಅನುಯಾಯಿಗಳಿಂದ ಹಾನಿಯಾಗಿದೆ ಎಂದು ಟಿಡಿಪಿ ಸದಸ್ಯರು ಆರೋಪಿಸಿದ್ದಾರೆ.

ಈ ಹಿಂದೆ, ಮಾಜಿ ಸಿಎಂ ಚಂದ್ರಬಾಬು ನಾಯ್ಡು ಮತ್ತು ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ವಿರುದ್ಧ ವಂಶಿ ಮಾಡಿದ ಕಾಮೆಂಟ್‌ಗಳ ಕುರಿತು ಟಿಡಿಪಿ ಮತ್ತು ವೈಎಸ್‌ಆರ್‌ಸಿಪಿ ಕಾರ್ಯಕರ್ತರು ವಾಗ್ವಾದಕ್ಕಿಳಿದ ನಂತರ ಮಾತಿನ ಚಕಮಕಿ ನಡೆಯಿತು.

ಕೆಲವು ಟಿಡಿಪಿ ನಾಯಕರು ತಮ್ಮ ನಾಯಕನ ಟೀಕೆಗೆ ವಂಶಿ ಬೆಂಬಲಿಗರು ಆಕ್ರೋಶಗೊಂಡರು. ಟಿಡಿಪಿ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮತ್ತು ಅವರ ಪುತ್ರ ನಾರಾ ಲೋಕೇಶ್ ಅವರ ಮೇಲೆ ವೈಯಕ್ತಿಕ ವಾಗ್ದಾಳಿ ನಡೆಸಿದ ನಂತರ ವಿರೋಧ ಪಕ್ಷಗಳ ಮುಖಂಡರು ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಎಂದು ಐಎಎನ್‌ಎಸ್ ವರದಿ ತಿಳಿಸಿದೆ.

ಏತನ್ಮಧ್ಯೆ, ಆಡಳಿತಾರೂಢ ವೈಎಸ್‌ಆರ್‌ಸಿಪಿ ನಾಯಕರು ನಡೆಸುತ್ತಿರುವ ದೌರ್ಜನ್ಯದ ಬಗ್ಗೆ ರಾಜ್ಯಪಾಲರು ಮಧ್ಯಪ್ರವೇಶಿಸಬೇಕೆಂದು ಚಂದ್ರಬಾಬು ನಾಯ್ಡು ಒತ್ತಾಯಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:08 am, Tue, 21 February 23

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್