AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್​ ಶಾರನ್ನು ಭೇಟಿಯಾದ ಚಂದ್ರಬಾಬು ನಾಯ್ಡು, ತೆಲಂಗಾಣ ಚುನಾವಣೆಗೆ ಬಿಜೆಪಿ ಜತೆ ಮೈತ್ರಿ?

ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು(Chandrababu Naidu)  ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಅವರನ್ನು ಭೇಟಿ ಮಾಡಿದರು.

ಅಮಿತ್​ ಶಾರನ್ನು ಭೇಟಿಯಾದ ಚಂದ್ರಬಾಬು ನಾಯ್ಡು, ತೆಲಂಗಾಣ ಚುನಾವಣೆಗೆ ಬಿಜೆಪಿ ಜತೆ ಮೈತ್ರಿ?
ಅಮಿತ್ ಶಾ, ಚಂದ್ರಬಾಬು ನಾಯ್ಡು
ನಯನಾ ರಾಜೀವ್
|

Updated on: Jun 04, 2023 | 10:04 AM

Share

ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು(Chandrababu Naidu)  ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಅವರನ್ನು ಭೇಟಿ ಮಾಡಿದರು. ಶನಿವಾರ ಮಧ್ಯಾಹ್ನ ದೆಹಲಿ ತಲುಪಿದ ಚಂದ್ರಬಾಬು ರಾತ್ರಿ 8 ಗಂಟೆಗೆ ಅಮಿತ್ ಶಾ ನಿವಾಸದಲ್ಲಿ ಜೆಪಿ ನಡ್ಡಾ ಶಾ ಅವರನ್ನು ಭೇಟಿ ಮಾಡಿದರು. ಈ ಮೂವರ ನಡುವಿನ ಸಭೆ ಸುಮಾರು 40 ನಿಮಿಷಕ್ಕೂ ಹೆಚ್ಚು ಕಾಲ ನಡೆಯಿತು. ಇತ್ತೀಚಿನ ರಾಜಕೀಯ ಬೆಳವಣಿಗೆ ಮತ್ತಿತರ ವಿಷಯಗಳ ಕುರಿತು ಮೂವರು ನಾಯಕರು ಚರ್ಚೆ ನಡೆಸಿದ್ದಾರೆಂದು ತೋರುತ್ತದೆ. ಈ ವರ್ಷ ನಡೆಯಲಿರುವ ತೆಲಂಗಾಣ ವಿಧಾನಸಭಾ ಚುನಾವಣೆಗೆ ಬಿಜೆಪಿ ಮತ್ತು ಟಿಡಿಪಿ ಮೈತ್ರಿ ಮಾಡಿಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ.

2019 ರ ಚುನಾವಣೆಯ ನಂತರ ಆಜಾದಿ ಕಾ ಅಮೃತ್ ಮಹೋತ್ಸವದ ಸಂದರ್ಭದಲ್ಲಿ ಚಂದ್ರಬಾಬು ಒಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದರು. ಟಿಡಿಪಿ 2014 ರಲ್ಲಿ ಎನ್‌ಡಿಎ ಭಾಗವಾಗಿತ್ತು ಆದರೆ 2019 ರ ಚುನಾವಣೆಯ ಮೊದಲು ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನದ ವಿಚಾರವಾಗಿ ಮಾರ್ಚ್ 2018 ರಲ್ಲಿ ಆಡಳಿತ ಮೈತ್ರಿಕೂಟವನ್ನು ತ್ಯಜಿಸಿತು.

ಮತ್ತಷ್ಟು ಓದಿ: ಚಂದ್ರಬಾಬು ನಾಯ್ಡು ಜೊತೆ ಸೇರಿ ಎನ್​ಟಿಆರ್ ಅವರನ್ನು ಮತ್ತೆ ಕೊಂದಿದ್ದಾರೆ ರಜಿನೀಕಾಂತ್: ನಟಿ ರೋಜಾ

ಅದರ ನಂತರ, ಅವರು ಜಿ 20 ಪೂರ್ವಸಿದ್ಧತಾ ಸಮ್ಮೇಳನದಲ್ಲಿ ಭಾಗವಹಿಸಲು ದೆಹಲಿಗೆ ಹೋದಾಗ ಮತ್ತೆ ಭೇಟಿಯಾದರು. ಸಂಪರ್ಕದಲ್ಲಿರಿ ಎಂದು ಪ್ರಧಾನಿ ಮೋದಿ ಆ ಸಂದರ್ಭದಲ್ಲಿ ಚಂದ್ರಬಾಬುಗೆ ಸಲಹೆ ನೀಡಿದ್ದು ಗೊತ್ತೇ ಇದೆ. ಇತ್ತೀಚೆಗಷ್ಟೇ ದೆಹಲಿಯಲ್ಲಿ ಚಂದ್ರಬಾಬು ಅವರು ಜೆಪಿ ನಡ್ಡಾ ಹಾಗೂ ಅಮಿತ್ ಶಾ ಅವರನ್ನು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಮುಂದಿನ ಚುನಾವಣೆಯಲ್ಲಿ ತೆಲುಗು ದೇಶಂ ಪಕ್ಷ, ಜನಸೇನೆ ಹಾಗೂ ಬಿಜೆಪಿ ಒಟ್ಟಾಗಿ ಸ್ಪರ್ಧಿಸಲಿವೆ ಎಂಬ ಸುದ್ದಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಚಂದ್ರಬಾಬು ದೆಹಲಿ ಭೇಟಿ ಮಹತ್ವ ಪಡೆದುಕೊಂಡಿದೆ. ಆದರೆ, ಚಂದ್ರಬಾಬು ಅವರ ದೆಹಲಿ ಭೇಟಿ ಖಾಸಗಿಯಾಗಿದ್ದು ಎಂದು ಪಕ್ಷದ ಮೂಲಗಳು ತಿಳಿಸಿವೆ. ತೆಲಂಗಾಣದಲ್ಲಿ ತೆಲುಗು ದೇಶಂ ಪಕ್ಷಕ್ಕೆ ಹತ್ತಿರವಾದರೆ ಬಿಜೆಪಿಗೆ ಲಾಭಕ್ಕಿಂತ ನಷ್ಟವೇ ಹೆಚ್ಚು ಎಂದು ತೆಲಂಗಾಣ ಬಿಜೆಪಿ ನಾಯಕರು ಆರಂಭದಲ್ಲಿ ಅಭಿಪ್ರಾಯಪಟ್ಟಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ