AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಕರ ನೇಮಕಾತಿ ಹಗರಣ: ಶಿಕ್ಷಕಿ ಸುಜಾತಾ ಜಾಗದಲ್ಲಿ 20 ವರ್ಷಗಳಿಂದ ಕೆಲಸ ಮಾಡ್ತಿದ್ದಿದ್ದು ಆಕೆಯ ಸಹೋದರಿ ಸಂಗೀತಾ

ಪಶ್ಚಿಮ ಬಂಗಾಳ(West Bengal)ದ ಬಹುಕೋಟಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನಡೆಸುತ್ತಿರುವ ತನಿಖೆಯಲ್ಲಿ ಸಾಕಷ್ಟು ಹೊಸ ವಿಚಾರಗಳು ಬಹಿರಂಗಗೊಂಡಿವೆ. ಕೆಲವು ತಿಂಗಳಿನಿಂದ ಇಡೀ ಪಶ್ಚಿಮ ಬಂಗಾಳದಲ್ಲಿ ನೇಮಕಾತಿ ಹಗರಣದ್ದೇ ಮಾತು, ಹೈಕೋರ್ಟ್​ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಸರ್ಕಾರವು ಹಲವು ನಾಯಕರ ಕೆಂಗಣ್ಣಿಗೂ ಗುರಿಯಾಗುತ್ತಿದೆ.

ಶಿಕ್ಷಕರ ನೇಮಕಾತಿ ಹಗರಣ: ಶಿಕ್ಷಕಿ ಸುಜಾತಾ ಜಾಗದಲ್ಲಿ 20 ವರ್ಷಗಳಿಂದ ಕೆಲಸ ಮಾಡ್ತಿದ್ದಿದ್ದು ಆಕೆಯ ಸಹೋದರಿ ಸಂಗೀತಾ
ಶಿಕ್ಷಕರ ನೇಮಕಾತಿ ಹಗರಣ
ನಯನಾ ರಾಜೀವ್
|

Updated on: Oct 19, 2023 | 3:29 PM

Share

ಪಶ್ಚಿಮ ಬಂಗಾಳ(West Bengal)ದ ಬಹುಕೋಟಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನಡೆಸುತ್ತಿರುವ ತನಿಖೆಯಲ್ಲಿ ಸಾಕಷ್ಟು ಹೊಸ ವಿಚಾರಗಳು ಬಹಿರಂಗಗೊಂಡಿವೆ. ಕೆಲವು ತಿಂಗಳಿನಿಂದ ಇಡೀ ಪಶ್ಚಿಮ ಬಂಗಾಳದಲ್ಲಿ ನೇಮಕಾತಿ ಹಗರಣದ್ದೇ ಮಾತು, ಹೈಕೋರ್ಟ್​ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಸರ್ಕಾರವು ಹಲವು ನಾಯಕರ ಕೆಂಗಣ್ಣಿಗೂ ಗುರಿಯಾಗುತ್ತಿದೆ.

2004ರಲ್ಲಿ ವಟಾರ್ ಬ್ಲಾಕ್‌ನ ಸಾಹೇಬ್‌ಗಂಜ್ ನಂ.1 ಗ್ರಾಮ ಪಂಚಾಯತ್‌ನಲ್ಲಿರುವ ನೊಣದಂಗ ಶಿಶು ಶಿಕ್ಷಣ ಕೇಂದ್ರದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ.

ಸುಜಾತಾ ಎಂಬುವವರು ಶಿಕ್ಷಕಿಯಾಗಿ ಕೆಲಸಕ್ಕೆ ನೇಮಕಗೊಂಡಿದ್ದರು, ಆದರೆ ಕಳೆದ 20 ವರ್ಷಗಳಿಂದ ಅವರ ಸಹೋದರಿ ಸಂಗೀತಾ ಎಂಬುವವರು ಶಿಕ್ಷಕಿಯಾಗಿ ಅಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಅಕ್ರಮ ಬೆಳಕಿಗೆ ಬರಬೇಕಾದರೆ 20 ವರ್ಷವೇ ಹಿಡಿಯಿತು ಎಂಬುದು ವಿಪರ್ಯಾಸ.

ಮತ್ತಷ್ಟು ಓದಿ: ಶಿಕ್ಷಕರ ನೇಮಕಾತಿ ಹಗರಣದಲ್ಲಿ ಯಾರೆಲ್ಲ ಭಾಗಿ? ಸಿಐಡಿ ವರದಿ ಹೇಳಿದ್ದೇನು?

ಸಂಗೀತಾ ನೇಮಕದಲ್ಲಿ ಕೆಲವು ಅವ್ಯವಹಾರಗಳು ಪತ್ತೆಯಾಗಿದ್ದವು. ಆದರೆ, ನೇಮಕಾತಿಯಲ್ಲಿ ನಡೆದಿರುವ ಅಕ್ರಮಗಳನ್ನು ಹಿಡಿಯಲು ಎರಡು ದಶಕಗಳಿಗೂ ಹೆಚ್ಚು ಕಾಲ ಬೇಕಾಯಿತು ಎಂಬ ಪ್ರಶ್ನೆ ನಾನಾ ವಲಯಗಳಿಂದ ಏಳಲಾರಂಭಿಸಿದೆ. ಮೂಲಗಳ ಪ್ರಕಾರ, ಸುಜಾತಾ 2004 ರಲ್ಲಿ ಆ ಮಕ್ಕಳ ಶಿಕ್ಷಣ ಕೇಂದ್ರದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡಲು ಪ್ರಾರಂಭಿಸಿದರು. ಆದರೆ ಸುಜಾತಾ ಅವರ ಬದಲಿಗೆ ಅವರ ಸಹೋದರಿ ಸಂಗೀತಾ ಭಟ್ಟಾಚಾರ್ಯ 20 ವರ್ಷಗಳಿಂದ ಆ ಮಕ್ಕಳ ಶಿಕ್ಷಣ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಸಂಭಾವನೆ ಪಡೆಯುತ್ತಿದ್ದಾರೆ.

ಈ ಸುದ್ದಿ ತಿಳಿದ ತಕ್ಷಣ ಬ್ಲಾಕ್‌ನಲ್ಲಿ ಅಲ್ಲೋಲ ಕಲ್ಲೋಲ ಉಂಟಾಯಿತು. ಬಿಡಿಒ ಅರುಣ್ ಕುಮಾರ್ ಬಿಸ್ವಾಸ್ ಅವರು ನೇಮಕಾತಿಯಲ್ಲಿ ತಪ್ಪು ಕಂಡುಬಂದಿರುವುದನ್ನು ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಈಗಾಗಲೇ ಉನ್ನತ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಪಂಚಾಯತ್ ಸಮಿತಿಯ ಅಧ್ಯಕ್ಷ ವಾಸುದೇವ್ ಯಶ್ ಹೇಳಿದ್ದಾರೆ.

ಮತ್ತೊಂದೆಡೆ, 2004ರಲ್ಲಿ ಸಿಪಿಎಂ ಆಡಳಿತಾವಧಿಯಲ್ಲಿ ಈ ನಿಯಮ ರೂಪಿಸಲಾಗಿತ್ತು. ಆಡಳಿತಾತ್ಮಕ ಮಟ್ಟದಲ್ಲಿ ತನಿಖೆ ಆರಂಭಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು.

ಆ ಬಳಿಕ ಸಿಪಿಎಂ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮಹಿಳೆಯ ವೇತನದಲ್ಲಿ ಪಕ್ಷಗಳಿಗೂ ಪಾಲಿತ್ತು, ಹಾಗಾಗಿ ಈ ವಿಚಾರವನ್ನು ಮುಚ್ಚಿಟ್ಟಿದ್ದಾರೆ ಎಂದಿದ್ದಾರೆ. ಆದರೆ ಎಡಪಕ್ಷಗಳು ಆರೋಪಗಳನ್ನು ತಳ್ಳಿ ಹಾಕಿವೆ. ಸಿಪಿಎಂ ವಿರುದ್ಧದ ಎಲ್ಲಾ ಆರೋಪಗಳು ಸುಳ್ಳು ಎಂದು ಸಿಪಿಎಂ ಮುಖಂಡ ಸುಭಾಷ್ ಮಂಡಲ್ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ