AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗುವುದಿಲ್ಲ ಎಂದಿದ್ದಕ್ಕೆ ಶಾಲೆಯಲ್ಲೇ ಶಿಕ್ಷಕಿಗೆ ಚಾಕುವಿನಿಂದ ಇರಿದು ಕೊಲೆ

ತಮಿಳುನಾಡಿನ ತಂಜಾವೂರು ಜಿಲ್ಲೆಯ ಕ್ಯಾಂಪಸ್‌ನಲ್ಲಿ ಶಿಕ್ಷಕಿಯೊಬ್ಬರನ್ನು ಹತ್ಯೆ ಮಾಡಲಾಗಿದೆ. ತನ್ನ ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ ಆರೋಪದ ಮೇಲೆ ಯುವಕ ಶಿಕ್ಷಕಿಗೆ ಚಾಕುವಿನಿಂದ ಇರಿದಿದ್ದಾನೆ. ಆತನನ್ನು ಬಂಧಿಸಲಾಗಿದೆ. ಎಐಎಡಿಎಂಕೆ ನಾಯಕ ಎಡಪ್ಪಾಡಿ ಪಳನಿಸಾಮಿ ಅವರು ಡಿಎಂಕೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಶಿಕ್ಷಣ ಸಚಿವರು ಈ ಕೃತ್ಯವನ್ನು ಖಂಡಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಮದುವೆಯಾಗುವುದಿಲ್ಲ ಎಂದಿದ್ದಕ್ಕೆ ಶಾಲೆಯಲ್ಲೇ ಶಿಕ್ಷಕಿಗೆ ಚಾಕುವಿನಿಂದ ಇರಿದು ಕೊಲೆ
ಮದನ್
ಸುಷ್ಮಾ ಚಕ್ರೆ
|

Updated on: Nov 20, 2024 | 6:23 PM

Share

ಚೆನ್ನೈ: ತಮಿಳುನಾಡಿನ ತಂಜಾವೂರು ಜಿಲ್ಲೆಯ ಮಲ್ಲಿಪಟ್ಟಿನಂ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಮಂಗಳವಾರ 26 ವರ್ಷದ ಶಾಲಾ ಶಿಕ್ಷಕಿ ರಮಣಿ ಅವರನ್ನು ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಕೊಂದಿದ್ದಾನೆ. ಮದನ್ ಎಂಬ ವ್ಯಕ್ತಿ ವಿದ್ಯಾರ್ಥಿಗಳು ಮತ್ತು ಇತರ ಶಿಕ್ಷಕರ ಎದುರಲ್ಲೇ ರಮಣಿಯ ಮೇಲೆ ಹಲ್ಲೆ ಮಾಡಿದ್ದಾನೆ. ಬಳಿಕ ಮದನ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ರಮಣಿ ಮತ್ತು ಮದನ್ ಪ್ರೇಮಿಗಳಾಗಿದ್ದರು. ಇದಕ್ಕೆ ರಮಣಿ ಅವರ ಕುಟುಂಬ ತೀವ್ರ ವಿರೋಧವನ್ನು ವ್ಯಕ್ತಪಡಿಸಿತ್ತು. ಇತ್ತೀಚೆಗೆ ಮದನ್‌ನ ಮದುವೆಯ ಪ್ರಸ್ತಾಪವನ್ನು ರಮಣಿ ತಿರಸ್ಕರಿಸಿದ ನಂತರ ಇಬ್ಬರ ನಡುವೆ ಜಗಳ ಹೆಚ್ಚಾಯಿತು. ಇದು ಮಾರಣಾಂತಿಕ ಹಲ್ಲೆಗೆ ಕಾರಣವಾಗಿದ್ದು, ಕೋಪದ ಭರದಲ್ಲಿ ಮದನ್ ರಮಣಿಗೆ ಇರಿದಿದ್ದಾನೆ.

ಇದನ್ನೂ ಓದಿ: ಬಾಬಾ ಸಿದ್ದಿಕಿ ಕೊಲೆಯ ಪ್ರಮುಖ ಆರೋಪಿ ಶಿವಕುಮಾರ್​ ಬಂಧನದಿಂದ ಬಯಲಾಯ್ತು ಮತ್ತಷ್ಟು ಭಯಾನಕ ವಿಚಾರ

ತೀವ್ರವಾಗಿ ಗಾಯಗೊಂಡಿರುವ ರಮಣಿಯನ್ನು ರಕ್ಷಿಸುವ ಪ್ರಯತ್ನದಲ್ಲಿ ವಿದ್ಯಾರ್ಥಿಗಳು ಆಕೆಯನ್ನು ಹೊತ್ತೊಯ್ದ ವಿಡಿಯೋ ಶಾಲೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಶಿಕ್ಷಕಿ ಮೃತಪಟ್ಟಿದ್ದಾರೆ. ಘಟನೆ ನಡೆದ ಬೆನ್ನಲ್ಲೇ ಪೊಲೀಸರು ಮದನ್‌ನನ್ನು ಹಿಡಿದು ತನಿಖೆ ಆರಂಭಿಸಿದ್ದಾರೆ.

ಈ ಸಾವು ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಪ್ರತಿಪಕ್ಷ ಎಐಎಡಿಎಂಕೆ ನಾಯಕ ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ರಾಜ್ಯ ಸರ್ಕಾರವನ್ನು ಖಂಡಿಸಿದ್ದಾರೆ. ಡಿಎಂಕೆ ಆಡಳಿತವು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಟೀಕಿಸಿದ್ದಾರೆ.

ಇದನ್ನೂ ಓದಿ: ಲಂಡನ್​ನಲ್ಲಿ ಹರ್ಷಿತಾ ಕೊಲೆ ಪ್ರಕರಣ, ಕತ್ತು ಹಿಸುಕಿ, ಶವವನ್ನು ಕಾರಿನ ಡಿಕ್ಕಿಯಲ್ಲಿಟ್ಟು ಪತಿ ಪರಾರಿ

ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ ತಮಿಳುನಾಡು ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಅವರು ಸಂತಾಪ ವ್ಯಕ್ತಪಡಿಸಿದ್ದು, ಈ ಹಿಂಸಾಚಾರವನ್ನು ಖಂಡಿಸಿದ್ದಾರೆ. ಮಲ್ಲಿಪಟ್ಟಿನಂ ಸರ್ಕಾರಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕಿ ರಮಣಿ ಮೇಲೆ ನಡೆದ ಹಲ್ಲೆಯನ್ನು ನಾವು ಬಲವಾಗಿ ಖಂಡಿಸುತ್ತೇವೆ. ಶಿಕ್ಷಕರ ಮೇಲಿನ ದೌರ್ಜನ್ಯವನ್ನು ಸಹಿಸಲು ಸಾಧ್ಯವಿಲ್ಲ. ಕೊಲೆ ಮಾಡಿದವನ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ