ಶಿಕ್ಷಕರ ಕಿರುಕುಳ ತಾಳಲಾರದೆ ಶಾರದಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಆತ್ಮಹತ್ಯೆ; ಇಬ್ಬರು ಅಧ್ಯಾಪಕರ ಬಂಧನ
ಗ್ರೇಟರ್ ನೊಯ್ಡಾದ ಶಾರದಾ ವಿಶ್ವವಿದ್ಯಾಲಯದಲ್ಲಿ ಎರಡನೇ ವರ್ಷದ ಬಿಡಿಎಸ್ ವಿದ್ಯಾರ್ಥಿನಿ ಅಧ್ಯಾಪಕರ ಕಿರುಕುಳದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ. ಶಿಕ್ಷಕರೊಬ್ಬರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆಕೆ ಸೂಸೈಡ್ ನೋಟ್ ಬರೆದಿಟ್ಟಿದ್ದಾರೆ. ಪೊಲೀಸರು ಸ್ಥಳದಿಂದ ಅದನ್ನು ವಶಪಡಿಸಿಕೊಂಡಿದ್ದಾರೆ. ನಾಲೆಡ್ಜ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ವಿಶ್ವವಿದ್ಯಾಲಯದ ಹಾಸ್ಟೆಲ್ ಕೋಣೆಯಲ್ಲಿ ಈ ಘಟನೆ ನಡೆದಿದೆ.

ನೊಯ್ಡಾ, ಜುಲೈ 19: ಗ್ರೇಟರ್ ನೊಯ್ಡಾದ ಶಾರದಾ ವಿಶ್ವವಿದ್ಯಾಲಯದ (Sharda University) ಎರಡನೇ ವರ್ಷದ ದಂತ ಶಸ್ತ್ರಚಿಕಿತ್ಸೆ (ಬಿಡಿಎಸ್) ವಿದ್ಯಾರ್ಥಿನಿ ಮಹಿಳಾ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆಗೆ ಇಬ್ಬರು ಅಧ್ಯಾಪಕರು ಮಾನಸಿಕ ಕಿರುಕುಳ ನೀಡಿದ್ದರು ಎಂಬ ಆರೋಪ ಹೊರಿಸಲಾಗಿದೆ. ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಗೌತಮ್ ಬುದ್ಧ ನಗರದ ನಾಲೆಡ್ಜ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆತ್ಮಹತ್ಯೆಗೆ ಸಂಬಂಧಿಸಿದಂತೆ ಕ್ಯಾಂಪಸ್‌ನಲ್ಲಿ ಪ್ರತಿಭಟನೆಗಳು ಭುಗಿಲೆದ್ದ ಕಾರಣದಿಂದ ವಿಶ್ವವಿದ್ಯಾಲಯದ ಇಬ್ಬರು ಸಿಬ್ಬಂದಿಗಳಾದ ಮಹಿಂದರ್ ಮತ್ತು ಶೈರಿ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಆ ಸ್ಥಳದಿಂದ ಒಂದು ಸೂಸೈಡ್ ನೋಟ್ ಅನ್ನು ವಶಪಡಿಸಿಕೊಂಡಿದ್ದಾರೆ. ಅದರಲ್ಲಿ ಆ ಯುವತಿ ತನ್ನ ಶಿಕ್ಷಕರ ಮೇಲೆ ಕಿರುಕುಳ ಮತ್ತು ಅವಮಾನದ ಆರೋಪ ಮಾಡಿದ್ದಾರೆ. ತನ್ನ ಸೂಸೈಡ್ ನೋಟ್ನಲ್ಲಿ, ಪಿಸಿಪಿ ಮತ್ತು ಡೆಂಟಲ್ ಮೆಟೀರಿಯಲ್ಸ್‌ನ ಶಿಕ್ಷಕರು ತನ್ನ ಸಾವಿಗೆ ಕಾರಣರಾಗಿದ್ದಾರೆ. ಅವರು ತನಗೆ ಮಾನಸಿಕ ಕಿರುಕುಳ ನೀಡಿ, ಅವಮಾನ ಮಾಡಿದ್ದಾರೆ. ಇದರಿಂದಾಗಿ ಒತ್ತಡ ಉಂಟಾಗಿದೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾರೆ.
#WATCH | Puri, Odisha | On a minor girl allegedly set ablaze, SP Pinak Mishra says, “This morning, we received information that a minor girl was assaulted and an inflammable substance was used to set her on fire. The girl was rescued and was referred to AIIMS Bhubaneswar. The… pic.twitter.com/ThqfgbiU8X
— ANI (@ANI) July 19, 2025
ಇದನ್ನೂ ಓದಿ: ದೆಹಲಿಯಲ್ಲಿ ಆಘಾತಕಾರಿ ಘಟನೆ; ಅಕ್ರಮ ಸಂಬಂಧದಿಂದ ಮೈದುನನ ಜೊತೆ ಸೇರಿ ಗಂಡನನ್ನೇ ಕೊಂದ ಮಹಿಳೆ
ತನ್ನ ಸಾವಿಗೆ ಅವರೇ ಕಾರಣ. ಅವರೇ ಇದರ ಪರಿಣಾಮಗಳನ್ನು ಎದುರಿಸಬೇಕು ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ. ಈ ಘಟನೆಯ ನಂತರ, ಕಾಲೇಜು ಅಧಿಕಾರಿಗಳಿಂದ ಹೊಣೆಗಾರಿಕೆಯನ್ನು ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರಿಂದ ಕ್ಯಾಂಪಸ್‌ನಲ್ಲಿ ಉದ್ವಿಗ್ನತೆ ಹೆಚ್ಚಾಯಿತು. ಪೊಲೀಸ್ ಸಿಬ್ಬಂದಿ ಮತ್ತು ಪ್ರತಿಭಟನಾ ನಿರತ ವಿದ್ಯಾರ್ಥಿಗಳ ನಡುವೆ ಬಿಸಿ ಮಾತಿನ ಚಕಮಕಿಯೂ ನಡೆಯಿತು. ವಿದ್ಯಾರ್ಥಿಯ ಕುಟುಂಬ ಸಲ್ಲಿಸಿದ ದೂರಿನ ಆಧಾರದ ಮೇಲೆ, ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣವು ಪ್ರಸ್ತುತ ತನಿಖೆಯಲ್ಲಿದೆ.
ಇನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




