ಲಂಚ ಆರೋಪ: ಅರವಿಂದ್ ಕೇಜ್ರಿವಾಲ್ ಮನೆಗೆ ಬಂದು ನೋಟಿಸ್ ನೀಡಿದ ದೆಹಲಿ ಕ್ರೈಂ ಬ್ರಾಂಚ್

ಕಳೆದ ವಾರ ಪತ್ರಿಕಾಗೋಷ್ಠಿಯಲ್ಲಿ ದೆಹಲಿ ಸಚಿವೆ ಅತಿಶಿ, ಬಿಜೆಪಿ ತನ್ನ ಏಳು ಶಾಸಕರಿಗೆ ಪಕ್ಷವನ್ನು ತೊರೆಯಲು ತಲಾ 25 ಕೋಟಿ ರೂಪಾಯಿಗಳನ್ನು ನೀಡುವುದಾಗಿ ಆಫರ್ ಮಾಡಿದ್ದು ಕೇಜ್ರಿವಾಲ್ ಸರ್ಕಾರವನ್ನು ಉರುಳಿಸುವುದಾಗಿ ಬೆದರಿಕೆ ಹಾಕಿದರು ಎಂದು ಆರೋಪಿಸಿದ್ದರು. ಈ ಆರೋಪಕ್ಕೆ ಸಂಬಂಧಿಸಿದಂತೆ ನೋಟಿಸಿ ನೀಡಲು ದೆಹಲಿ ಕ್ರೈಂ ಬ್ರಾಂಚ್ ಕೇಜ್ರಿವಾಲ್ ಮನೆಗೆ ಬಂದಿದೆ.

ಲಂಚ ಆರೋಪ: ಅರವಿಂದ್ ಕೇಜ್ರಿವಾಲ್ ಮನೆಗೆ ಬಂದು ನೋಟಿಸ್ ನೀಡಿದ ದೆಹಲಿ ಕ್ರೈಂ ಬ್ರಾಂಚ್
ಅರವಿಂದ್ ಕೇಜ್ರಿವಾಲ್
Follow us
ರಶ್ಮಿ ಕಲ್ಲಕಟ್ಟ
|

Updated on: Feb 02, 2024 | 8:56 PM

ದೆಹಲಿ ಫೆಬ್ರುವರಿ 02: ಆಮ್ ಆದ್ಮಿ ಪಕ್ಷದ (AAP) ಶಾಸಕರಿಗೆ ಲಂಚ ನೀಡುವ ಯತ್ನದ ಆರೋಪಕ್ಕೆ ಸಂಬಂಧಿಸಿದಂತೆ ನೋಟಿಸ್ ನೀಡಲು ದೆಹಲಿ ಪೊಲೀಸರ ಕ್ರೈಂ ಬ್ರಾಂಚ್ (Delhi Crime Branch) ಘಟಕದ ತಂಡವು ಶುಕ್ರವಾರ ಸಂಜೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಮನೆಗೆ ಬಂದಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ವಾರ ಪತ್ರಿಕಾಗೋಷ್ಠಿಯಲ್ಲಿ ದೆಹಲಿ ಸಚಿವೆ ಅತಿಶಿ, ಬಿಜೆಪಿ ತನ್ನ ಏಳು ಶಾಸಕರಿಗೆ ಪಕ್ಷವನ್ನು ತೊರೆಯಲು ತಲಾ 25 ಕೋಟಿ ರೂಪಾಯಿಗಳನ್ನು ನೀಡುವುದಾಗಿ ಆಫರ್ ಮಾಡಿದ್ದು ಕೇಜ್ರಿವಾಲ್ ಸರ್ಕಾರವನ್ನು ಉರುಳಿಸುವುದಾಗಿ ಬೆದರಿಕೆ ಹಾಕಿದರು ಎಂದು ಆರೋಪಿಸಿದ್ದರು.

ಪಕ್ಷದ ಶಾಸಕರೊಬ್ಬರನ್ನು ಸಂಪರ್ಕಿಸಿದ ವ್ಯಕ್ತಿಯ ವಾಯ್ಸ್ ರೆಕಾರ್ಡ್ ಲಭ್ಯವಿದ್ದು, ಅದನ್ನು ನಂತರ ತೋರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಕೇಜ್ರಿವಾಲ್, ತಮ್ಮ ಪಕ್ಷದ ಏಳು ಶಾಸಕರನ್ನು “ಅವರು” ಅಥವಾ ಬಿಜೆಪಿಯವರು ಸಂಪರ್ಕಿಸಿದ್ದಾರೆ. ಶೀಘ್ರದಲ್ಲೇ ನನ್ನನ್ನು ಬಂಧಿಸಬಹುದು ಎಂದಿದ್ದಾರೆ. ದೆಹಲಿ ಸರ್ಕಾರ ಪತನಗೊಂಡ ನಂತರ ಚುನಾವಣೆಯಲ್ಲಿ ಸ್ಪರ್ಧಿಸಲು ಶಾಸಕರಿಗೆ ತಲಾ 25 ಕೋಟಿ ಮತ್ತು ಬಿಜೆಪಿ ಟಿಕೆಟ್ ನೀಡುವುದಾಗಿ ಭರವಸೆ ನೀಡಲಾಗಿತ್ತು ಎಂದು ಎಎಪಿ ನಾಯಕ ಆರೋಪಿಸಿದ್ದಾರೆ. ಎಲ್ಲಾ ಏಳು ಎಎಪಿ ಶಾಸಕರು ಪಕ್ಷ ತೊರೆಯಲು ನಿರಾಕರಿಸಿದ್ದಾರೆ ಎಂದು ಕೇಜ್ರಿವಾಲ್ ಹೇಳಿದರು.

ದೆಹಲಿಯಲ್ಲಿ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗದ ಬಿಜೆಪಿ ಅರವಿಂದ್ ಕೇಜ್ರಿವಾಲ್ ಸರ್ಕಾರವನ್ನು ಉರುಳಿಸಲು “ಕೊಳಕು ಪಿತೂರಿ” ನಡೆಸುತ್ತಿದೆ ಎಂದು ದೆಹಲಿಯ ಆಡಳಿತ ಪಕ್ಷ ಆರೋಪಿಸಿದೆ. ಕೇಜ್ರಿವಾಲ್ ಅವರು ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಭ್ರಷ್ಟಾಚಾರದ ತನಿಖೆ ನಡೆಸುತ್ತಿರುವ ಕೇಂದ್ರ ಸಂಸ್ಥೆಯಾದ ಜಾರಿ ನಿರ್ದೇಶನಾಲಯದ ಬಿಸಿಯನ್ನು ಎದುರಿಸುತ್ತಿದ್ದಾರೆ.

ಐದು ಬಾರಿ ಸಮನ್ಸ್ ಬಂದಿದ್ದು, ಸಮನ್ಸ್ ಅಕ್ರಮವಾಗಿದೆ ಎಂದು ಹೇಳಿ ಕೇಜ್ರಿವಾಲ್ ವಿಚಾರಣೆಗೆ ಹಾಜರಾಗಿಲ್ಲ.

ಆದಾಗ್ಯೂ, ದೆಹಲಿ ಬಿಜೆಪಿ ಈ ಆರೋಪಗಳನ್ನು ತಳ್ಳಿಹಾಕಿದ್ದು, ಆಫರ್‌ನೊಂದಿಗೆ ತಮ್ಮನ್ನು ಸಂಪರ್ಕಿಸಿದ ಶಾಸಕರು ಮತ್ತು ಜನರನ್ನು ಹೆಸರಿಸುವಂತೆ ಎಎಪಿಗೆ ಸವಾಲು ಹಾಕಿದೆ.

ಇದನ್ನೂ ಓದಿ: ದೆಹಲಿಯಲ್ಲಿ ಪ್ರತಿಭಟನೆಯ ನಡುವೆ ಎಎಪಿ ನಾಯಕರ ಬಂಧನ, ಕೇಜ್ರಿವಾಲ್ ರಾಜೀನಾಮೆಗೆ ಬಿಜೆಪಿ ಒತ್ತಾಯ

ದಿಲ್ಲಿಯ ಬಿಜೆಪಿ ಕಾರ್ಯದರ್ಶಿ ಹರೀಶ್ ಖುರಾನಾ ಅವರು ಅತಿಶಿ ಅವರನ್ನು ಸಂಪರ್ಕಿಸಿದ ಶಾಸಕರು ಮತ್ತು ಆಫರ್‌ನೊಂದಿಗೆ ತಮ್ಮನ್ನು ತಲುಪಿದವರನ್ನು ಹೆಸರಿಸುವಂತೆ ಸವಾಲು ಹಾಕಿದರು. ಮದ್ಯದ ಹಗರಣದಲ್ಲಿ ವಿಚಾರಣೆಗಾಗಿ ಇಡಿ ಸಮನ್ಸ್‌ಗಳಿಗೆ ಗೈರಾಗುವ ಮೂಲಕ ಕೇಜ್ರಿವಾಲ್‌ನಿಂದ ಗಮನವನ್ನು ಬದಲಾಯಿಸಲು ಎಎಪಿ ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ