Mahua Moitra: ಕೊನೆಗೂ ಸರ್ಕಾರಿ ಬಂಗಲೆಯಿಂದ ಹೊರ ನಡೆದ ಮಾಜಿ ಸಂಸದೆ ಮಹುವಾ ಮೊಯಿತ್ರಾ
ಟಿಎಂಸಿಯ ಮಾಜಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಸರ್ಕಾರಿ ಬಂಗಲೆಯಿಂದ ಹೊರಹಾಕಲು ತಂಡವನ್ನು ಕಳುಹಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಟಿಎಂಸಿಯ ಮಾಜಿ ಸಂಸದೆ ಮಹುವಾ ಮೊಯಿತ್ರಾ(Mahua Moitra) ಅವರನ್ನು ಸರ್ಕಾರಿ ಬಂಗಲೆಯಿಂದ ಹೊರಹಾಕಲು ತಂಡವನ್ನು ಕಳುಹಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದೀಗ ಸರ್ಕಾರಿ ಬಂಗಲೆಯಿಂದ ಮೊಯಿತ್ರಾ ಹೊರನಡೆದಿದ್ದಾರೆ. ತೃಣಮೂಲ ಕಾಂಗ್ರೆಸ್‌ನ ಮಾಜಿ ಸಂಸದ ಮಹುವಾ ಮೊಯಿತ್ರಾ ಅವರನ್ನು ದೆಹಲಿಯಲ್ಲಿರುವ ಸರ್ಕಾರಿ ಬಂಗಲೆಯಿಂದ ಹೊರಹಾಕಲು ಎಸ್ಟೇಟ್ ನಿರ್ದೇಶನಾಲಯ ತಂಡವನ್ನು ಕಳುಹಿಸಿದೆ ಎಂದು ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.
ಬಂಗಲೆಯನ್ನು ತೆರವು ಮಾಡುವಂತೆ ಟಿಎಂಸಿ ನಾಯಕಿಗೆ ನೀಡಿದ್ದ ತೆರವು ನೋಟಿಸ್‌ಗೆ ತಡೆಯಾಜ್ಞೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದ ಒಂದು ದಿನದ ನಂತರ ತಂಡವನ್ನು ಕಳುಹಿಸಲಾಗಿದೆ.
ಮತ್ತಷ್ಟು ಓದಿ: ಬಂಗಲೆ ತೆರವು ನೋಟಿಸ್ ಪ್ರಶ್ನಿಸಿ ಮಹುವಾ ಮೊಯಿತ್ರಾ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್
ತನಗೆ ನೀಡಲಾಗಿದ್ದ ಸರ್ಕಾರಿ ಬಂಗಲೆಯನ್ನು ತೆರವು ಮಾಡುವಂತೆ ತನಗೆ ಕಳುಹಿಸಿದ್ದ ನೋಟಿಸ್ ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್‌ನ ಮಾಜಿ ಸಂಸದೆ ಮಹುವಾ ಮೊಯಿತ್ರಾ(Mahua Moitra) ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ . ಗುರುವಾರ ಹೊರಡಿಸಿದ ತನ್ನ ಆದೇಶದಲ್ಲಿ, ಮೊಯಿತ್ರಾ ಅವರು ಸಂಸದೆಯಾಗಿ
ಅಮಾನತುಗೊಂಡಿರುವುದರಿಂದ ಬಂಗಲೆಯಲ್ಲಿ ವಾಸಿಸುವ ಹಕ್ಕು ಇಲ್ಲ ಎಂದು ಹೈಕೋರ್ಟ್ ಹೇಳಿದೆ. ಲೋಕಸಭೆಯಲ್ಲಿ ಪ್ರಶ್ನೆಗಳನ್ನು ಕೇಳಲು ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ಉಡುಗೊರೆಗಳನ್ನು ಸ್ವೀಕರಿಸಿದ ಆರೋಪದ ಮೇಲೆ ಡಿಸೆಂಬರ್ 8 ರಂದು ಅವರನ್ನು ಉಚ್ಛಾಟಿಸಿದ ಬಳಿಕ ಜನವರಿ 7ರೊಳಗೆ ಬಂಗೆ ಖಾಲಿ ಮಾಡುವಂತೆ ಸೂಚನೆ ನೀಡಲಾಗಿತ್ತು.
ನಂತರ ತೃಣಮೂಲ ಕಾಂಗ್ರೆಸ್‌ನ ನಾಯಕರು ಡಿಒಇ ಆದೇಶವನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ನ ಮೊರೆ ಹೋಗಿದ್ದರು. ಆದಾಗ್ಯೂ, ಜನವರಿ 4 ರಂದು ನ್ಯಾಯಾಲಯವು ಮಹುವಾ ಮೊಯಿತ್ರಾ ಅವರಿಗೆ ಸರ್ಕಾರವು ಮಂಜೂರು ಮಾಡಿದ ವಸತಿಗೃಹದಲ್ಲಿ ಉಳಿಯಲು ಅನುಮತಿಗಾಗಿ DoE ಅನ್ನು ಸಂಪರ್ಕಿಸಲು ಕೇಳಿತು.
ಮೊಯಿತ್ರಾ ಅವರು ತಕ್ಷಣ ಬಂಗಲೆಯನ್ನು ಖಾಲಿ ಮಾಡುವಂತೆ ಡಿಒಇಯ ಸೂಚನೆಯನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಮೊರೆ ಹೋದರು. ಆದಾಗ್ಯೂ, ನ್ಯಾಯಾಲಯವು ಆಕೆಯ ಮನವಿಯನ್ನು ತಿರಸ್ಕರಿಸಿತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:05 am, Fri, 19 January 24