ಗಾಳಿಯಲ್ಲೇ ಕೆಟ್ಟು ನಿಂತ ಹೆಲಿಕಾಪ್ಟರ್​, ತುರ್ತು ಭೂಸ್ಪರ್ಶ, ಕೇದಾರನಾಥದಲ್ಲಿ ತಪ್ಪಿದ ಅನಾಹುತ

ತಾಂತ್ರಿಕ ದೋಷದಿಂದಾಗಿ ಕೇದಾರನಾಥಕ್ಕೆ ಭಕ್ತರನ್ನು ಹೊತ್ತೊಯ್ಯುತಿದ್ದ ವಿಮಾನ ಗಾಳಿಯಲ್ಲೇ ಕೆಟ್ಟು ನಿಂತಿತ್ತು, ಬಳಿಕ ತುರ್ತು ಭೂಸ್ಪರ್ಶ ಮಾಡಲಾಯಿತು.

Follow us
ನಯನಾ ರಾಜೀವ್
|

Updated on:May 24, 2024 | 12:55 PM

ಕೇದಾರನಾಥ(Kedarnath) ಬಳಿ ಹೆಲಿಕಾಪ್ಟರ್​ ಒಂದು ಗಾಳಿಯಲ್ಲೇ ಕಟ್ಟು ನಿಂತಿದ್ದು, ತುರ್ತು ಭೂಸ್ಪರ್ಶ ಮಾಡಲಾಗಿದ್ದು, ಭಾರಿ ಅನಾಹುತ ತಪ್ಪಿದೆ. ಚಾರ್ ಧಾಮ್ ಯಾತ್ರೆ ಮುಂದುವರೆದಿದೆ. ಇಲ್ಲಿಯವರೆಗೆ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಿದ್ದಾರೆ. ಕೇದಾರನಾಥ ಧಾಮಕ್ಕೆ ಜನರನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್​ನಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಯಿತು. ಆದರೆ, ಯಾವುದೇ ಪ್ರಾಣಹಾನಿ ಅಥವಾ ಆಸ್ತಿ-ಪಾಸ್ತಿ ನಷ್ಟವಾಗಿಲ್ಲ ಎಂಬುದು ಸಮಾಧಾನದ ಸಂಗತಿ. ಹೆಲಿಕಾಪ್ಟರ್​ನಲ್ಲಿ 6 ಮಂದಿ ಪ್ರಯಾಣಿಕರಿದ್ದರು.

ಇಲ್ಲಿಯವರೆಗೆ 3 ಲಕ್ಷ 40 ಸಾವಿರ ಯಾತ್ರಿಕರು ಗಂಗೋತ್ರಿ-ಯಮುನೋತ್ರಿ ಧಾಮಕ್ಕೆ ಭೇಟಿ ನೀಡಿದ್ದಾರೆ. ಕಳೆದ ಗುರುವಾರದವರೆಗೆ 1 ಲಕ್ಷದ 64 ಸಾವಿರಕ್ಕೂ ಹೆಚ್ಚು ಯಾತ್ರಾರ್ಥಿಗಳು ಯಮುನೋತ್ರಿ ಧಾಮಕ್ಕೆ ಭೇಟಿ ನೀಡಿದ್ದು, 1 ಲಕ್ಷದ 51 ಸಾವಿರ ಯಾತ್ರಿಕರು ಗಂಗೋತ್ರಿ ಧಾಮಕ್ಕೆ ಭೇಟಿ ನೀಡಿದ್ದಾರೆ.

ನಿಷೇಧಾಜ್ಞೆ ನಡುವೆಯೂ ದೇವಾಲಯದ ಆವರಣದಲ್ಲಿ ವಿಡಿಯೋ ಮಾಡದಂತೆ ಕ್ರಮ ಕೈಗೊಳ್ಳುವ ಸಂದರ್ಭದಲ್ಲಿ ಬದರಿನಾಥ ಧಾಮದಲ್ಲಿರುವ ದೇವಾಲಯದ ಆವರಣದಿಂದ 50 ಮೀಟರ್ ವ್ಯಾಪ್ತಿಯಲ್ಲಿ ವಿಡಿಯೋ ಮಾಡುತ್ತಿದ್ದ 37 ಮಂದಿಗೆ ಚಲನ್ ಜಾರಿ ಮಾಡಲಾಗಿದೆ. ಗುರುವಾರದವರೆಗೆ 1 ಲಕ್ಷ 77 ಸಾವಿರದ 749 ಭಕ್ತರು ಬದರಿನಾಥ ಧಾಮಕ್ಕೆ ಭೇಟಿ ನೀಡಿದ್ದಾರೆ.

ಮತ್ತಷ್ಟು ಓದಿ: Char Dham Yatra 2024: ಕಳೆದ 10 ದಿನಗಳಲ್ಲಿ ಚಾರ್ ಧಾಮ ಯಾತ್ರೆಗೆ 6 ಲಕ್ಷಕ್ಕೂ ಹೆಚ್ಚು ಭಕ್ತರು ಭೇಟಿ

ಇದಲ್ಲದೆ, ರಾಜ್ಯ ಸರ್ಕಾರವು ಚಾರ್ಧಾಮ್ ಯಾತ್ರೆಗೆ ಬರುವ ಯಾತ್ರಾರ್ಥಿಗಳಿಗೆ ನೋಂದಣಿಯನ್ನು ಕಡ್ಡಾಯಗೊಳಿಸಿದೆ. ರಾಜ್ಯದ ಮುಖ್ಯ ಕಾರ್ಯದರ್ಶಿ ಈ ಆದೇಶ ಹೊರಡಿಸಿದ್ದಾರೆ.

ಸಂಘಟಿತ ಪ್ರಯಾಣಕ್ಕೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಈಗಾಗಲೇ ಸೂಚನೆಗಳನ್ನು ನೀಡಿದ್ದಾರೆ. ಪ್ರವಾಸ ಮತ್ತು ಪ್ರಯಾಣ ಏಜೆನ್ಸಿಗಳಿಗೂ ಸೂಚನೆಗಳನ್ನು ನೀಡಲಾಗಿದೆ. ಈ ಸೂಚನೆಯ ಪ್ರಕಾರ ನೋಂದಾಯಿತ ಪ್ರಯಾಣಿಕರನ್ನು ಮಾತ್ರ ಕರೆತರುವಂತೆ ಸೂಚನೆ ನೀಡಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:50 am, Fri, 24 May 24