13 ವರ್ಷದ ಕ್ಯಾನ್ಸರ್ ರೋಗಿ ಮೇಲೆ ಅತ್ಯಾಚಾರ ನಡೆಸಿ, ಗರ್ಭಿಣಿ ಮಾಡಿದ ಕಾಮುಕ
ಕ್ಯಾನ್ಸರ್ ರೋಗಿಯೆಂದೂ ಚೂರೂ ಕನಿಕರ ತೋರದೆ 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಯನ್ನು ಬಿಹಾರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಥಾಣೆಯಲ್ಲಿ ಅತ್ಯಾಚಾರ ನಡೆದಿತ್ತು. ಬಿಹಾರದಿಂದ ಕ್ಯಾನ್ಸರ್ ಚಿಕಿತ್ಸೆಗೆಂದು ಮಹಾರಾಷ್ಟ್ರಕ್ಕೆ ಬಂದಿದ್ದ ಬಾಲಕಿಗೆ ಉಳಿದುಕೊಳ್ಳಲು ಮನೆಯ ವ್ಯವಸ್ಥೆ ಮಾಡಿ ಬಳಿಕ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಬಾಲಕಿಗೆ ಪದೇ ಪದೇ ಕಿಮೋ ಮಾಡಿಸಬೇಕಾಗುತ್ತಿತ್ತು, ಈ ಸಂದರ್ಭದಲ್ಲಿ ವೈದ್ಯರಿಗೆ ಆಕೆ ಗರ್ಭಿಣಿ ಎನ್ನುವ ವಿಚಾರ ತಿಳಿದುಬಂದಿದೆ. ಬಳಿಕ ಈ ಎಲ್ಲಾ ಸತ್ಯಗಳು ಹೊರಬಿದ್ದಿವೆ.

ಥಾಣೆ, ಏಪ್ರಿಲ್ 06: ಚಿಕಿತ್ಸೆ ಕೊಡಿಸುವ ನೆಪದಲ್ಲಿ ವ್ಯಕ್ತಿಯೊಬ್ಬ 13 ವರ್ಷದ ಕ್ಯಾನ್ಸರ್(Cancer) ರೋಗಿ ಮೇಲೆ ಅತ್ಯಾಚಾರ ನಡೆಸಿ, ಗರ್ಭಿಣಿ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಬಿಹಾರದಲ್ಲಿ ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ. ಬಿಹಾರ ಮೂಲದ ಬಾಲಕಿ ಕ್ಯಾನ್ಸ್ ಚಿಕಿತ್ಸೆಗೆಂದು ಮಹಾರಾಷ್ಟ್ರಕ್ಕೆ ಬಂದಿದ್ದಳು. ಅದೇ ಹಳ್ಳಿಯಿಂದ ಬಂದಿರುವ ಈ ವ್ಯಕ್ತಿ ಆಕೆಗೆ ಸಹಾಯ ಮಾಡಿದ್ದ, ಎರಡು ತಿಂಗಳ ಹಿಂದೆ ಬದ್ಲಾಪುರದಲ್ಲಿ ವಾಸಿಸಲು ಒಂದು ಸ್ಥಳವನ್ನು ಬಾಡಿಗೆಗೆ ಪಡೆದಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.
ಬಾಲಕಿ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಆ ವ್ಯಕ್ತಿ ಆಕೆಯ ಮೇಲೆ ಮೂರು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮುಂಬೈ ಆಸ್ಪತ್ರೆಯಲ್ಲಿ, ಅಪ್ರಾಪ್ತ ಬಾಲಕಿಯೊಬ್ಬಳು ಕಿಮೊಥೆರಪಿ ಪಡೆಯುತ್ತಿದ್ದಾಗ ನಿಯಮಿತ ತಪಾಸಣೆಯ ಸಮಯದಲ್ಲಿ ಅವಳು ಗರ್ಭಿಣಿಯಾಗಿರುವುದು ಪತ್ತೆಯಾಗಿದೆ.
ಆರೋಪಿ ಸಂತ್ರಸ್ತೆಯ ಕುಟುಂಬಕ್ಕೆ ಸಹಾಯ ಮಾಡಿದ್ದ, ಈ ಸಮಯದಲ್ಲಿ, ಅವನು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಗರ್ಭ ಧರಿಸುವಂತೆ ಮಾಡಿದ್ದಾನೆಂದು ಆರೋಪಿಸಲಾಗಿದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತಾ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ.
ಮತ್ತಷ್ಟು ಓದಿ: 19 ವರ್ಷದ ಯುವತಿ ಮೇಲೆ ಅತ್ಯಾಚಾರ; ಗುಜರಾತ್ನ ದಿಗಂಬರ ಜೈನಮುನಿ ಶಾಂತಿಸಾಗರ್ ಮಹಾರಾಜ್‌ಗೆ 10 ವರ್ಷ ಜೈಲು
ಮತ್ತೊಂದು ಪ್ರಕರಣ ಮಧ್ಯಪ್ರದೇಶದ ಸಿಧಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಗ್ಯಾಂಗ್ರೇಪ್ ಮಾಡಿದ 5 ಮಂದಿಯನ್ನು ಬಂಧಿಸಲಾಗಿದೆ.ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ರೆಕಾರ್ಡ್‌ಗೆ ಸಂಬಂಧಿಸಿದಂತೆ ಶನಿವಾರ ಪೊಲೀಸರು ಪ್ರತ್ಯೇಕ ಪ್ರಕರಣವೊಂದರಲ್ಲಿ ಐದು ಜನರನ್ನು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಅಪರಾಧ ನಡೆದಾಗ ಐದನೇ ವ್ಯಕ್ತಿ ಸ್ಥಳದಲ್ಲಿದ್ದನು, ಆದರೆ ಇತರ ನಾಲ್ವರು ಆರೋಪಿಗಳು ಕಳೆದ ವರ್ಷ ಜುಲೈನಲ್ಲಿ ಬಾಲಕಿಯ ಮೇಲೆ ಹಲ್ಲೆ ನಡೆಸಿದ್ದರು. ಪೊಲೀಸರ ಪ್ರಕಾರ, ಸಂತ್ರಸ್ತೆಯ ತಾಯಿ ತನ್ನ ಇಬ್ಬರು ಸ್ನೇಹಿತರಿಗೆ ಅವಳನ್ನು ಮೋಟಾರ್ ಸೈಕಲ್‌ನಲ್ಲಿ ತನ್ನ ಮನೆಗೆ ಬಿಡಲು ಸೂಚಿಸಿದ್ದರು. ಅವರು ಅಪ್ರಾಪ್ತ ವಯಸ್ಕಳನ್ನು ಬಮುರಿ ಗ್ರಾಮದ ಮನೆಗೆ ಕರೆದೊಯ್ದರು, ಅಲ್ಲಿ ನಾಲ್ವರು ಪುರುಷರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಸಂತ್ರಸ್ತೆ ಮತ್ತು ಆಕೆಯ ತಾಯಿ ಗುರುವಾರ ಅಮಿಲಿಯಾ ಪೊಲೀಸ್ ಠಾಣೆಯ ಭಾಗವಾಗಿರುವ ಸಿಹಾವಲ್ ಪೊಲೀಸ್ ಠಾಣೆಗೆ ಹೋಗಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತಾ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ