AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ದಿನಗಳಿಂದ ಹೋಟೆಲ್​ ರೂಂನಲ್ಲಿ ಬಂಧಿಯಾಗಿದ್ದ ವಿದ್ಯಾರ್ಥಿನಿಯ ರಕ್ಷಣೆ

ಕಳೆದ 20 ದಿನಗಳಿಂದ ಹೋಟೆಲ್​ ರೂಂನಲ್ಲಿ ಬಂಧಿಯಾಗಿದ್ದ ವಿದ್ಯಾರ್ಥಿನಿಯನ್ನು ಹೈದರಾಬಾದ್​ನ ಮಹಿಳಾ ಪೊಲೀಸರು ರಕ್ಷಿಸಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆಕೆಯನ್ನು ಕರೆದೊಯ್ದು ರೂಮಿನಲ್ಲಿ ಬಂಧಿಸಿಟ್ಟಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.

20 ದಿನಗಳಿಂದ ಹೋಟೆಲ್​ ರೂಂನಲ್ಲಿ ಬಂಧಿಯಾಗಿದ್ದ  ವಿದ್ಯಾರ್ಥಿನಿಯ ರಕ್ಷಣೆ
ಅಪರಹಣImage Credit source: Shutterstock
ನಯನಾ ರಾಜೀವ್
|

Updated on: Sep 09, 2024 | 8:36 AM

Share

ಕಳೆದ 20 ದಿನಗಳಿಂದ ಹೋಟೆಲ್​ ರೂಂನಲ್ಲಿ ಬಂಧಿಯಾಗಿದ್ದ ವಿದ್ಯಾರ್ಥಿನಿಯನ್ನು ಹೈದರಾಬಾದ್​ನ ಮಹಿಳಾ ಪೊಲೀಸರು ರಕ್ಷಿಸಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆಕೆಯನ್ನು ಕರೆದೊಯ್ದು ರೂಮಿನಲ್ಲಿ ಬಂಧಿಸಿಟ್ಟಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.

ಹೈದರಾಬಾದ್​ ಪೊಲೀಸ್​ ವಿಭಾಗದ ‘SHE’ತಂಡವು ವಿದ್ಯಾರ್ಥಿನಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದೆ. 19 ವರ್ಷದ ಆರೋಪಿಯನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ನಾರಾಯಣಗುಡ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ನ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಭೈಂಸಾ ಪಟ್ಟಣದ ವಿದ್ಯಾರ್ಥಿನಿಯ ಪೋಷಕರು ಹೈದರಾಬಾದ್‌ನ ಶಿ ಟೀಮ್​ಗೆ ದೂರು ಸಲ್ಲಿಸಿದ್ದರು, ತಮ್ಮ ಮಗಳು ಟ್ರ್ಯಾಪ್​ ಆಗಿದ್ದಾಳೆ ಎಂಬುದನ್ನು ತಿಳಿಸಿದ್ದರು. ಆರೋಪಿ ಬೆದರಿಕೆ ಹಾಕಿದ್ದ, ಹೈದರಾಬಾದ್​ಗೆ ಬರುವಂತೆ ಒತ್ತಾಯಿಸಿದ್ದ, 20 ದಿನಗಳ ಕಾಲ ಹೋಟೆಲ್​ ಕೊಠಡಿಯಲ್ಲಿ ಬೀಗ ಹಾಕಿ ಕೂರಿಸಿದ್ದ ಎಂದು ವಿದ್ಯಾರ್ಥಿನಿ ಹೇಳಿದ್ದಾಳೆ.

ಮತ್ತಷ್ಟು ಓದಿ: ತೆಲಂಗಾಣ: ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ 9ನೇ ತರಗತಿ ವಿದ್ಯಾರ್ಥಿನಿ ಈಗ ಗರ್ಭಿಣಿ

ಆಕೆ ಇನ್​ಸ್ಟೆಂಟ್ ಮೆಸೇಜಿಂಗ್ ಆ್ಯಪ್ ಮೂಲಕ ಪೋಷಕರಿಗೆ ಸಂದೇಶ ಕಳುಹಿಸಿದ್ದಳು. ತಕ್ಷಣವೇ ಪೊಲೀಸರು ಸ್ಥಳವನ್ನು ಪತ್ತೆ ಹಚ್ಚಿದ್ದಾರೆ.

ನಾರಾಯಣಗುಡಾದಲ್ಲಿ ಬೀಗ ಹಾಕಲಾದ ಹೋಟೆಲ್ ಕೋಣೆಯಲ್ಲಿ ಬಾಲಕಿಯನ್ನು ಪತ್ತೆಹಚ್ಚಿ, ರಕ್ಷಿಸಿ ಪೋಷಕರಿಗೆ ಒಪ್ಪಿಸಿದ್ದಾರೆ. ಬಳಿಕ ಆರೋಪಿಯನ್ನೂ ಬಂಧಿಸಲಾಗಿದೆ. ಹೈದರಾಬಾದ್​ನಲ್ಲಿ ಮಹಿಳೆಯರ ಸುರಕ್ಷತೆಗಾಗಿಯೇ ಶಿ ಟೀಮ್ಸ್​ ವಿಭಾಗವನ್ನು ತೆರೆಯಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ