ಕಳೆದ 20 ದಿನಗಳಿಂದ ಹೋಟೆಲ್ ರೂಂನಲ್ಲಿ ಬಂಧಿಯಾಗಿದ್ದ ವಿದ್ಯಾರ್ಥಿನಿಯನ್ನು ಹೈದರಾಬಾದ್‌ನ ಮಹಿಳಾ ಪೊಲೀಸರು ರಕ್ಷಿಸಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆಕೆಯನ್ನು ಕರೆದೊಯ್ದು ರೂಮಿನಲ್ಲಿ ಬಂಧಿಸಿಟ್ಟಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.
ಹೈದರಾಬಾದ್ ಪೊಲೀಸ್ ವಿಭಾಗದ ‘SHE’ತಂಡವು ವಿದ್ಯಾರ್ಥಿನಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದೆ.
19 ವರ್ಷದ ಆರೋಪಿಯನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ನಾರಾಯಣಗುಡ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ನ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಭೈಂಸಾ ಪಟ್ಟಣದ ವಿದ್ಯಾರ್ಥಿನಿಯ ಪೋಷಕರು ಹೈದರಾಬಾದ್‌ನ ಶಿ ಟೀಮ್ಗೆ ದೂರು ಸಲ್ಲಿಸಿದ್ದರು, ತಮ್ಮ ಮಗಳು ಟ್ರ್ಯಾಪ್ ಆಗಿದ್ದಾಳೆ ಎಂಬುದನ್ನು ತಿಳಿಸಿದ್ದರು. ಆರೋಪಿ ಬೆದರಿಕೆ ಹಾಕಿದ್ದ, ಹೈದರಾಬಾದ್ಗೆ ಬರುವಂತೆ ಒತ್ತಾಯಿಸಿದ್ದ, 20 ದಿನಗಳ ಕಾಲ ಹೋಟೆಲ್ ಕೊಠಡಿಯಲ್ಲಿ ಬೀಗ ಹಾಕಿ ಕೂರಿಸಿದ್ದ ಎಂದು ವಿದ್ಯಾರ್ಥಿನಿ ಹೇಳಿದ್ದಾಳೆ.
ಮತ್ತಷ್ಟು ಓದಿ: ತೆಲಂಗಾಣ: ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ 9ನೇ ತರಗತಿ ವಿದ್ಯಾರ್ಥಿನಿ ಈಗ ಗರ್ಭಿಣಿ
ಆಕೆ ಇನ್ಸ್ಟೆಂಟ್ ಮೆಸೇಜಿಂಗ್ ಆ್ಯಪ್ ಮೂಲಕ ಪೋಷಕರಿಗೆ ಸಂದೇಶ ಕಳುಹಿಸಿದ್ದಳು. ತಕ್ಷಣವೇ ಪೊಲೀಸರು ಸ್ಥಳವನ್ನು ಪತ್ತೆ ಹಚ್ಚಿದ್ದಾರೆ.
ನಾರಾಯಣಗುಡಾದಲ್ಲಿ ಬೀಗ ಹಾಕಲಾದ ಹೋಟೆಲ್ ಕೋಣೆಯಲ್ಲಿ ಬಾಲಕಿಯನ್ನು ಪತ್ತೆಹಚ್ಚಿ, ರಕ್ಷಿಸಿ ಪೋಷಕರಿಗೆ ಒಪ್ಪಿಸಿದ್ದಾರೆ. ಬಳಿಕ ಆರೋಪಿಯನ್ನೂ ಬಂಧಿಸಲಾಗಿದೆ. ಹೈದರಾಬಾದ್ನಲ್ಲಿ ಮಹಿಳೆಯರ ಸುರಕ್ಷತೆಗಾಗಿಯೇ ಶಿ ಟೀಮ್ಸ್ ವಿಭಾಗವನ್ನು ತೆರೆಯಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ