AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್​ ಮನೋಜ್ ಸಿನ್ಹಾರ ಮರಿಮೊಮ್ಮಗ ಆತ್ಮಹತ್ಯೆ, ಆತ್ಮದ ಕಾಟ?

ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ಮರಿ ಮೊಮ್ಮಗ ಆರವ್ ಸಿನ್ಹಾ ಕಾನ್ಪುರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆರವ್​ಗೆ 16 ವರ್ಷ ವಯಸ್ಸಾಗಿತ್ತು. ಈ ಆಘಾತಕಾರಿ ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಶವವನ್ನು ವಶಕ್ಕೆ ಪಡೆದರು. ಆರವ್ ರಾಜ್ಯ ಮಟ್ಟದ ಈಜುಗಾರನಾಗಿದ್ದ. ಮೃತನ ಜೇಬಿನಲ್ಲಿ ಪೊಲೀಸರು ಸಣ್ಣ ಪತ್ರವೊಂದು ಸಿಕ್ಕಿದ್ದು, ಪ್ರಕರಣದ ಸುತ್ತಲಿನ ನಿಗೂಢತೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್​ ಮನೋಜ್ ಸಿನ್ಹಾರ ಮರಿಮೊಮ್ಮಗ ಆತ್ಮಹತ್ಯೆ, ಆತ್ಮದ ಕಾಟ?
ಸಾಂದರ್ಭಿಕ ಚಿತ್ರ
ನಯನಾ ರಾಜೀವ್
|

Updated on:Oct 29, 2025 | 10:27 AM

Share

ಕಾನ್ಪುರ, ಅಕ್ಟೋಬರ್ 29: ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ಮರಿ ಮೊಮ್ಮಗ ಆರವ್ ಸಿನ್ಹಾ ಕಾನ್ಪುರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆರವ್​ಗೆ 16 ವರ್ಷ ವಯಸ್ಸಾಗಿತ್ತು. ಈ ಆಘಾತಕಾರಿ ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಶವವನ್ನು ವಶಕ್ಕೆ ಪಡೆದರು. ಆರವ್ ರಾಜ್ಯ ಮಟ್ಟದ ಈಜುಗಾರನಾಗಿದ್ದ. ಮೃತನ ಜೇಬಿನಲ್ಲಿ ಪೊಲೀಸರು ಸಣ್ಣ ಪತ್ರವೊಂದು ಸಿಕ್ಕಿದ್ದು, ಪ್ರಕರಣದ ಸುತ್ತಲಿನ ನಿಗೂಢತೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಕುಟುಂಬದವರು ಆರವ್ ಮೊಬೈಲ್ ಫೋನ್ ಪರಿಶೀಲಿಸಿದಾಗ, ಆತನ ನೋಟ್‌ಪ್ಯಾಡ್‌ನಲ್ಲಿ ಇಂಗ್ಲಿಷ್‌ನಲ್ಲಿ ಬರೆದಿದ್ದ ದೀರ್ಘ ಸಂದೇಶ ಕಂಡುಬಂದಿದೆ. ಅದರಲ್ಲಿ ಆರವ್ ಸ್ವಲ್ಪ ಸಮಯದಿಂದ ತೊಂದರೆಗೊಳಗಾಗಿದ್ದಾನೆ ಎಂದು ಬರೆಯಲಾಗಿತ್ತು. ಕನಸಿನಲ್ಲಿ ನಾಲ್ಕು ಜನರ ಆತ್ಮ ಬಂದು ತೊಂದರೆ ಕೊಡುತ್ತಿತ್ತು.

ತನ್ನ ಕುಟುಂಬಕ್ಕೆ ಹಾನಿ ಮಾಡಲು ಆತ್ಮಹತ್ಯೆ ಮಾಡಿಕೊಳ್ಳುವಂತೆ ಒತ್ತಾಯಿಸುತ್ತಿತ್ತು ಎಂದು ಆತ ಬರೆದಿದ್ದಾನೆ. ಘಟನೆ ನಡೆದ ಸಮಯದಲ್ಲಿ, ಆರವ್ ಮನೆಯಲ್ಲಿ ಒಬ್ಬಂಟಿಯಾಗಿದ್ದ. ಅವನ ಪೋಷಕರು ಮತ್ತು ಸಹೋದರಿ ಛತ್ ಪೂಜೆಗೆ ಭಾಗಲ್ಪುರಕ್ಕೆ ಹೋಗಿದ್ದರು.ಆರವ್‌ನ ಸಹೋದರಿ ಮನೆಗೆ ಹಿಂತಿರುಗಿದಾಗ, ಬಾಗಿಲು ಒಳಗಿನಿಂದ ಲಾಕ್ ಆಗಿರುವುದನ್ನು ಕಂಡು ಅಕ್ಕಪಕ್ಕದ ಮನೆಯವರಿಗೆ ಮಾಹಿತಿ ನೀಡಿದ್ದಳು.

ಮತ್ತಷ್ಟು ಓದಿ: ಹಲೋ ಎಲ್ಲಾ ಕೇಳಿಸ್ಕೊಳ್ಳಿ: ವಿಡಿಯೋ ಮಾಡಿಟ್ಟು ನವ ವಿವಾಹಿತ ಆತ್ಮಹತ್ಯೆ, ಹೆಂಡ್ತಿ ವಿರುದ್ಧ ಗಂಭೀರ ಆರೋಪ

ಕೂಡಲೇ ಬಾಗಿಲು ಒಡೆದು ಮನೆಯೊಳಗೆ ಪ್ರವೇಶಿಸಿದಾಗ ಆತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಪೊಲೀಸರು ಆತನ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದಾರೆ ಮತ್ತು ವಿಧಿವಿಜ್ಞಾನ ತಂಡ ತನಿಖೆ ನಡೆಸುತ್ತಿದೆ.

ಅವರ ಆತ್ಮಹತ್ಯೆಯ ಹಿಂದಿನ ಸಂಪೂರ್ಣ ಸತ್ಯವನ್ನು ಬಹಿರಂಗಪಡಿಸಲು ಅವರ ಕುಟುಂಬ ಸದಸ್ಯರನ್ನು ಸಹ ವಿಚಾರಣೆ ನಡೆಸಲಾಗುತ್ತಿದೆ. ಆರವ್ ಒಬ್ಬ ಅತ್ಯುತ್ತಮ ರಾಜ್ಯ ಮಟ್ಟದ ಈಜುಗಾರ ಎಂಬುದು ತಿಳಿದುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:27 am, Wed, 29 October 25

ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು