AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ 13 ವರ್ಷದ ಬಾಲಕಿ

ಹದಿಮೂರು ವರ್ಷದ ಬಾಲಕಿಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಒಂದು ತಿಂಗಳೊಳಗೆ ನಡೆದ ನಾಲ್ಕನೇ ಘಟನೆ ಇದಾಗಿದೆ. ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಬಾಲಕಿ ಇಂದು ಕೊನೆಯುಸಿರೆಳೆದಿದ್ದಾಳೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಗೈಸಿಲಾತ್ ಪೊಲೀಸ್ ಠಾಣಾ ವ್ಯಾಪ್ತಿಯ ಫಿರಿಂಗ್ಮಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಒಡಿಶಾ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ 13 ವರ್ಷದ ಬಾಲಕಿ
ಆಸ್ಪತ್ರೆ Image Credit source: NDTV
ನಯನಾ ರಾಜೀವ್
|

Updated on: Aug 11, 2025 | 2:05 PM

Share

ಒಡಿಶಾ, ಆಗಸ್ಟ್ 11: ಹದಿಮೂರು ವರ್ಷದ ಬಾಲಕಿಯೊಬ್ಬಳು ಬೆಂಕಿ(Fire) ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಒಂದು ತಿಂಗಳೊಳಗೆ ನಡೆದ ನಾಲ್ಕನೇ ಘಟನೆ ಇದಾಗಿದೆ. ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಬಾಲಕಿ ಇಂದು ಕೊನೆಯುಸಿರೆಳೆದಿದ್ದಾಳೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಗೈಸಿಲಾತ್ ಪೊಲೀಸ್ ಠಾಣಾ ವ್ಯಾಪ್ತಿಯ ಫಿರಿಂಗ್ಮಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಫುಟ್ಬಾಲ್ ಮೈದಾನದಲ್ಲಿ ಅರ್ಧ ಸುಟ್ಟ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಗ್ರಾಮಸ್ಥರು ರಕ್ಷಿಸಿ ಬರ್ಗಢ ಜಿಲ್ಲಾ ಕೇಂದ್ರ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆತ್ಮಹತ್ಯೆ ನಿರ್ಧಾರಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. 8 ನೇ ತರಗತಿಯ ವಿದ್ಯಾರ್ಥಿನಿ ಪೆಟ್ರೋಲ್ ಬಳಸಿ ಬೆಂಕಿ ಹಚ್ಚಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಜುಲೈ 12 ರಿಂದ ಮೂವರು ಹೆಣ್ಣುಮಕ್ಕಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬಾಲಸೋರ್‌ನಲ್ಲಿ 20 ವರ್ಷದ ವಿದ್ಯಾರ್ಥಿನಿ ಜುಲೈ 14 ರಂದು ತನ್ನ ಕಾಲೇಜು ಕ್ಯಾಂಪಸ್‌ನಲ್ಲಿ ಬೆಂಕಿ ಹಚ್ಚಿಕೊಂಡಿದ್ದರು ಬಳಿಕ ಭುವನೇಶ್ವರದ ಏಮ್ಸ್‌ನಲ್ಲಿ ಕೊನೆಯುಸಿರೆಳೆದಿದ್ದರು.

ಮತ್ತಷ್ಟು ಓದಿ: ಲೈಂಗಿಕ ಕಿರುಕುಳ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕಾಲೇಜು ವಿದ್ಯಾರ್ಥಿನಿ

ಜುಲೈ 19 ರಂದು ಬಲಂಗಾದಲ್ಲಿ ಮೂವರು ದುಷ್ಕರ್ಮಿಗಳು ಅಪ್ರಾಪ್ತ ಬಾಲಕಿಯನ್ನು ಸುಟ್ಟುಹಾಕಿದ್ದರು ಮತ್ತು ಆಗಸ್ಟ್ 2 ರಂದು ದೆಹಲಿಯ ಏಮ್ಸ್‌ನಲ್ಲಿ ಆಕೆ ಸಾವನ್ನಪ್ಪಿದ್ದರು. ಆಗಸ್ಟ್ 6 ರಂದು ಕೇಂದ್ರಪಾರ ಜಿಲ್ಲೆಯಲ್ಲಿ ಮೂರನೇ ಘಟನೆ ನಡೆದಿದ್ದು, ಪಟ್ಟಮುಂಡೈ (ಗ್ರಾಮೀಣ) ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯಲ್ಲಿ ಕಾಲೇಜು ವಿದ್ಯಾರ್ಥಿನಿಯ ಸುಟ್ಟ ಶವ ಪತ್ತೆಯಾಗಿತ್ತು.

ಬಾಲಕಿ ತನ್ನ ಮಾವನ ಮನೆಗೆ ಹೊರಟಿದ್ದಳು, ಬರ್ಗಢದ ಫಿರಿಂಗಿಮಲ್ ಗ್ರಾಮದ ಫುಟ್ಬಾಲ್ ಮೈದಾನದಲ್ಲಿ ತೀವ್ರ ಸುಟ್ಟಗಾಯಗಳೊಂದಿಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಆಂಬ್ಯುಲೆನ್ಸ್ ಬರಲು 45 ನಿಮಿಷಗಳಿಗಿಂತ ಹೆಚ್ಚು ಸಮಯ ತೆಗೆದುಕೊಂಡಿತು . ಸ್ಥಳೀಯರು ಪ್ರಥಮ ಚಿಕಿತ್ಸೆ ನೀಡಿದರು ಮತ್ತು ಅಧಿಕಾರಿಗಳಿಂದ ಪದೇ ಪದೇ ಸಹಾಯವನ್ನು ಕೋರಿದರು. ಆಂಬ್ಯುಲೆನ್ಸ್ ಸೇವೆಗಳು ಮತ್ತು ಪೊಲೀಸರ ನಿಧಾನಗತಿಯ ಪ್ರತಿಕ್ರಿಯೆಯನ್ನು ಜನರು ಟೀಕಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ