ಕರಾಟೆ ಬೆಲ್ಟ್​ನಿಂದ ತಾಯಿಯ ಕತ್ತು ಹಿಸುಕಿ ಕೊಂದ ಮಗಳು; ಪೊಲೀಸರಿಗೆ ಫೋನ್​ ಮಾಡಿ ಸುಳ್ಳು ಹೇಳಿ, ಸಿಕ್ಕಿಬಿದ್ದಳು

ಜು.30ರಂದು ಪೊಲೀಸ್​ ಠಾಣೆಗೆ ಕರೆ ಮಾಡಿದ ಬಾಲಕಿ, ನನ್ನ ತಾಯಿ ಏಕಾಏಕಿ ಬಿದ್ದು ಮೃತಪಟ್ಟಿದ್ದಾಳೆ ಎಂದು ಹೇಳಿದ್ದಳು. ನಂತರ ತಾಯಿಯ ಮೃತದೇಹವನ್ನು ಪೋಸ್ಟ್​ಮಾರ್ಟಮ್​ಗೆ ಕಳಿಸಲಾಗಿತ್ತು.

ಕರಾಟೆ ಬೆಲ್ಟ್​ನಿಂದ ತಾಯಿಯ ಕತ್ತು ಹಿಸುಕಿ ಕೊಂದ ಮಗಳು; ಪೊಲೀಸರಿಗೆ ಫೋನ್​ ಮಾಡಿ ಸುಳ್ಳು ಹೇಳಿ, ಸಿಕ್ಕಿಬಿದ್ದಳು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Aug 10, 2021 | 2:40 PM

ಥಾಣೆ: 15ವರ್ಷದ ಬಾಲಕಿಯೊಬ್ಬಳು ತನ್ನ ತಾಯಿಯ ಕುತ್ತಿಗೆಯನ್ನು ಕರಾಟೆ ಬೆಲ್ಟ್​​ನಿಂದ ಹಿಸುಕಿ ಕೊಂದ ಘಟನೆ ನವಿ ಮುಂಬೈನಲ್ಲಿ ನಡೆದಿದೆ. ತಾಯಿಯನ್ನು ಹತ್ಯೆ ಮಾಡಿದ್ದಲ್ಲದೆ, ಅದೊಂದು ಆಕಸ್ಮಿಕ ಸಾವೆಂಬಂತೆ ಬಿಂಬಿಸಲೂ ಪ್ರಯತ್ನ ಮಾಡಿದ್ದಾಳೆ. ಅಷ್ಟಕ್ಕೂ ಆ ಬಾಲಕಿ ಅಮ್ಮನನ್ನು ಕೊಂದಿದ್ದು, ಆಕೆಯ ಶಿಕ್ಷಣಕ್ಕೆ ಸಂಬಂಧಪಟ್ಟ ವಿಚಾರದಲ್ಲಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನವಿ ಮುಂಬೈನ ಏರೋಲಿ ಎಂಬಲ್ಲಿ ಜು.30ರಂದು ನಡೆದ ಘಟನೆ ಈಗ ಬೆಳಕಿಗೆ ಬಂದಿದೆ.

ಆ ತಾಯಿಗೆ ತನ್ನ ಮಗಳು ವೈದ್ಯಕೀಯ ಶಿಕ್ಷಣ ಅಭ್ಯಾಸ ಮಾಡಲಿ ಎಂದು ಆಸೆ. ಆದರೆ ಮಗಳಿಗೆ ಅದು ಸುತಾರಾಂ ಇಷ್ಟವಿರಲಿಲ್ಲ. ಇದೇ ವಿಚಾರಕ್ಕೆ ಅಮ್ಮ-ಮಗಳ ನಡುವೆ ಪದೇಪದೆ ಜಗಳ ಆಗುತ್ತಲೇ ಇತ್ತು. ಇದೇ ವಿಚಾರಕ್ಕೆ ಅಮ್ಮನ ವಿರುದ್ಧ ಕಳೆದ ತಿಂಗಳು ಈಕೆ ಪೊಲೀಸರಿಗೆ ದೂರನ್ನೂ ನೀಡಿದ್ದಳು. ಆದರೆ ಪೊಲೀಸರು ಅವರಿಬ್ಬರಿಗೂ ಬುದ್ಧಿ ಹೇಳಿ ಕಳಿಸಿದ್ದರು.

ಜು.30ರಂದು ಪೊಲೀಸ್​ ಠಾಣೆಗೆ ಕರೆ ಮಾಡಿದ ಬಾಲಕಿ, ನನ್ನ ತಾಯಿ ಏಕಾಏಕಿ ಬಿದ್ದು ಮೃತಪಟ್ಟಿದ್ದಾಳೆ ಎಂದು ಹೇಳಿದ್ದಳು. ನಂತರ ತಾಯಿಯ ಮೃತದೇಹವನ್ನು ಪೋಸ್ಟ್​ಮಾರ್ಟಮ್​ಗೆ ಕಳಿಸಲಾಗಿತ್ತು. ಅದರಲ್ಲಿ ಮಹಿಳೆ ಸಹಜವಾಗಿ ಸತ್ತಿಲ್ಲ..ಆಕೆಯ ಕತ್ತು ಹಿಸುಕಿ ಕೊಲ್ಲಲಾಗಿದೆ ಎಂಬ ವಿಚಾರ ಬೆಳಕಿಗೆ ಬಂತು. ಕೂಡಲೇ ಬಾಲಕಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಸತ್ಯ ಬೆಳಕಿಗೆ ಬಂತು. ಆಕೆ ತಾನು ತನ್ನ ತಾಯಿಯನ್ನು ಕರಾಟೆ ಬೆಲ್ಟ್​​ನಿಂದ ಕತ್ತು ಹಿಸುಕಿ ಕೊಂದಿದ್ದಾಗಿ ಆಕೆ ಒಪ್ಪಿಕೊಂಡಿದ್ದಾಳೆ. ಸದ್ಯ ಬಾಲಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಪೊಲೀಸರ ಕೈಗೆ ಸಿಗದ ಗುರು ದೇಶಪಾಂಡೆ; ಮೃತನ ಕುಟುಂಬಕ್ಕೆ 10 ಲಕ್ಷ ಪರಿಹಾರದ ಭರವಸೆ

Mi TV 4C: ಅತಿ ಕಡಿಮೆ ಬೆಲೆಯ ಎಂಐ 4ಸಿ ಸ್ಮಾರ್ಟ್​ಟಿವಿ ಲಾಂಚ್: ಆಫರ್​ನಲ್ಲಿ ಪಡೆಯಿರಿ ಮತ್ತಷ್ಟು ಡಿಸ್ಕೌಂಟ್

Published On - 2:40 pm, Tue, 10 August 21

‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು