AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Teesta Setalvad: ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಮಧ್ಯಂತರ ಜಾಮೀನು ಜುಲೈ 19 ರವರೆಗೆ ವಿಸ್ತರಣೆ

ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರಿಗೆ ಜುಲೈ 1ರಂದು ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಇದೀಗ ಮತ್ತೆ ಈ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ಇಂದು ಜುಲೈ 19 ರ ಮುಂದಿನ ವಿಚಾರಣೆಯವರೆಗೆ ವಿಸ್ತರಿಸಿದೆ.

Teesta Setalvad: ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಮಧ್ಯಂತರ ಜಾಮೀನು ಜುಲೈ 19 ರವರೆಗೆ ವಿಸ್ತರಣೆ
ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌Image Credit source: indiatoday.in
ಅಕ್ಷಯ್​ ಪಲ್ಲಮಜಲು​​
|

Updated on:Jul 05, 2023 | 3:20 PM

Share

ದೆಹಲಿ: 2002 ಗುಜರಾತ್​ ಗಲಭೆಗೆ ಕೇಸ್​​ನಲ್ಲಿ ಸಾಕ್ಷ್ಯಧಾರಗಳನ್ನು ತಿರುಚಿಸಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ (Teesta Setalvad) ಅವರಿಗೆ ಜುಲೈ 1ರಂದು ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಇದೀಗ ಮತ್ತೆ ಈ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ಇಂದು ಜುಲೈ 19 ರ ಮುಂದಿನ ವಿಚಾರಣೆಯವರೆಗೆ ವಿಸ್ತರಿಸಿದೆ.

2002ರ ಗೋಧ್ರಾ ಗಲಭೆ ಪ್ರಕರಣಗಳಲ್ಲಿ ನಿರಪರಾಧಿಗಳನ್ನು ಬಂಧಿಸಲು ಸುಳ್ಳು ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದ ಪ್ರಕರಣದಲ್ಲಿ ಶರಣಾಗುವಂತೆ ಗುಜರಾತ್ ಹೈಕೋರ್ಟ್ ನೀಡಿದ ಆದೇಶದ ವಿರುದ್ಧ ತೀಸ್ತಾ ಸೆಟಲ್ವಾಡ್ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ. ಈ ಸಮಯದಲ್ಲಿ ತೀಸ್ತಾ ಸೆಟಲ್ವಾಡ್ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು.

ಆದರೆ ಸುಪ್ರಿಂ ಕೋರ್ಟ್​ ತೀಸ್ತಾ ಸೆಟಲ್ವಾಡ್ ಅವರಿಗೆ ಜುಲೈ 1ರಂದು ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು ಮತ್ತು ಸದ್ಯಕ್ಕೆ ಹೈಕೋರ್ಟ್ ಆದೇಶವನ್ನು ತಡೆಹಿಡಿದಿತ್ತು. ಶನಿವಾರ ತಡರಾತ್ರಿ ಈ ಪ್ರಕರಣದ ವಿಚಾರಣೆ ನಡೆಸಿದ ತ್ರಿಸದಸ್ಯ ಪೀಠವು, ಹೈಕೋರ್ಟ್ ಆದೇಶದ ವಿರುದ್ಧ ಪ್ರಶ್ನಿಸಲು ತೀಸ್ತಾ ಸೆಟಲ್ವಾಡ್ ಅವರಿಗೆ ಏಕೆ ಸಮಯ ನಿರಾಕರಿಸಲಾಗಿದೆ ಎಂದು ಪ್ರಶ್ನಿಸಿತ್ತು.

ಇದನ್ನೂ ಓದಿ: Breaking ತೀಸ್ತಾ ಸೆಟಲ್ವಾಡ್‌ಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂಕೋರ್ಟ್

ಮಧ್ಯಂತರ ಜಾಮೀನು ಮಂಜೂರಾತಿಗಾಗಿ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಿದ ಸುಪ್ರೀಂ ಸೆಪ್ಟೆಂಬರ್ 2, 2022ರ ಆದೇಶದ ಪ್ರಕಾರ ಕೆಲವು ಷರತ್ತುಗಳ ಮೇಲೆ ಜಾಮೀನು ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಧ್ರಾ ಗಲಭೆ ಪ್ರಕರಣಗಳಲ್ಲಿ ಮುಗ್ಧರನ್ನು ಬಂಧಿಸಲು ಅಹಮದಾಬಾದ್ ಕ್ರೈಂ ಬ್ರಾಂಚ್ ದಾಖಲಿಸಿದ ಅಪರಾಧದಲ್ಲಿ ಸೆಟಲ್ವಾಡ್ ಅವರ ಜತೆಗೆ ಗುಜರಾತ್ ಮಾಜಿ ಪೊಲೀಸ್ ಮುಖ್ಯಸ್ಥ ಆರ್‌ಬಿ ಶ್ರೀಕುಮಾರ್ ಮತ್ತು ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರನ್ನು ಬಂಧಿಸಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:49 pm, Wed, 5 July 23