Tejashwi Yadav: ಬಿಜೆಪಿಯವರನ್ನೂ ಇದೇ ಪ್ರಶ್ನೆ ಕೇಳಿ; ಉದ್ಯೋಗದ ಭರವಸೆ ಕುರಿತ ಪ್ರಶ್ನೆಗೆ ತೇಜಸ್ವಿ ಯಾದವ್ ಉತ್ತರ

ನಮ್ಮನ್ನು ಪ್ರಶ್ನಿಸುತ್ತಿರುವ ರೀತಿಯಲ್ಲೇ 2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರತಿ ವರ್ಷ ಭರವಸೆ ನೀಡಿದ 2 ಕೋಟಿ ಉದ್ಯೋಗಗಳ ಭರವಸೆ ಏನಾಯಿತು? ಎಂದು ಬಿಜೆಪಿ ನಾಯಕರನ್ನು ಕೇಳಿ ಎಂದು ಡಿಸಿಎಂ ತೇಜಸ್ವಿ ಯಾದವ್ ಹೇಳಿದ್ದಾರೆ.

Tejashwi Yadav: ಬಿಜೆಪಿಯವರನ್ನೂ ಇದೇ ಪ್ರಶ್ನೆ ಕೇಳಿ; ಉದ್ಯೋಗದ ಭರವಸೆ ಕುರಿತ ಪ್ರಶ್ನೆಗೆ ತೇಜಸ್ವಿ ಯಾದವ್ ಉತ್ತರ
ತೇಜಸ್ವಿ ಯಾದವ್Image Credit source: NDTV
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Aug 13, 2022 | 4:12 PM

ಪಾಟ್ನಾ: 2020ರ ಬಿಹಾರ ಚುನಾವಣೆಯಲ್ಲಿ (Bihar Election) ಅಧಿಕಾರಕ್ಕೆ ಬಂದರೆ 10 ಲಕ್ಷ ಉದ್ಯೋಗಗಳನ್ನು ನೀಡುವುದಾಗಿ ತೇಜಸ್ವಿ ಯಾದವ್ ಭರವಸೆ ನೀಡಿದ್ದರು. ಇದೀಗ ಉಪಮುಖ್ಯಮಂತ್ರಿಯಾಗಿರುವ ತೇಜಸ್ವಿ ಯಾದವ್ (Tejashwi Yadav) ಅವರು ಭರವಸೆ ನೀಡಿದ್ದನ್ನು ಪದೇ ಪದೇ ನೆನಪಿಸುತ್ತಿರುವ ಬಿಜೆಪಿಯ ಪ್ರಶ್ನೆಗೆ ಉತ್ತರಿಸಿದ ಕ್ಲಿಪ್ ಅನ್ನು ಪೋಸ್ಟ್ ಮಾಡಿಕೊಂಡಿದ್ದಾರೆ.

“ಹಿಂದೂ-ಮುಸ್ಲಿಂ ವಿಷಯಗಳ ಬದಲು ನಮ್ಮಲ್ಲಿ ಉದ್ಯೋಗದ ಬಗ್ಗೆ ಕೇಳುತ್ತಿರುವುದು ನಮ್ಮ ಯಶಸ್ಸಾಗಿದೆ. ಯಾವತ್ತೂ ಉದ್ಯೋಗದ ಬಗ್ಗೆ ಕೇಳದೆ, ಸದಾ ನಿದ್ದೆ ಮಾಡುತ್ತಿದ್ದ ಜನರಿಗೆ ಧನ್ಯವಾದಗಳು. ಮಾಧ್ಯಮಗಳೂ ಈಗ ಎಚ್ಚೆತ್ತುಕೊಂಡಿವೆ. ಇದು ನಮ್ಮ ಯಶಸ್ಸಲ್ಲವೇ?” ಎಂದು ತೇಜಸ್ವಿ ಯಾದವ್ ಪ್ರಶ್ನಿಸಿದ್ದಾರೆ.

“ಬಿಜೆಪಿ ತನ್ನ ಭರವಸೆಯನ್ನು ಎಂದಿಗೂ ಈಡೇರಿಸುವುದಿಲ್ಲ. ಆದರೆ, ನಾವು ನಮ್ಮ ಭರವಸೆಗಳನ್ನು ಈಡೇರಿಸುತ್ತೇವೆ. ನೀವು 10 ಲಕ್ಷ ಯಾವಾಗ ಕೊಡುತ್ತೀರಿ?” ಎಂದು ನಿರ್ಭಯವಾಗಿ ಕೇಳುತ್ತಿರುವ ಈ ಪ್ರಶ್ನೆಗಳಿಗೆ ಮುಖ್ಯಮಂತ್ರಿಗಳು ನಿಮ್ಮ ಮುಂದೆ ಉತ್ತರಿಸಿಲ್ಲವೇ?” ಎಂದು ತೇಜಸ್ವಿ ಯಾದವ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಹಾರದಲ್ಲಿ10 ಲಕ್ಷ ಯುವಕರಿಗೆ ಉದ್ಯೋಗ; ತೇಜಸ್ವಿ ಯಾದವ್ ನೀಡಿದ ಭರವಸೆ ಬಗ್ಗೆ ನಿತೀಶ್ ಹೇಳಿದ್ದೇನು?

ನಮ್ಮನ್ನು ಪ್ರಶ್ನಿಸುತ್ತಿರುವ ರೀತಿಯಲ್ಲೇ 2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರತಿ ವರ್ಷ ಭರವಸೆ ನೀಡಿದ 2 ಕೋಟಿ ಉದ್ಯೋಗಗಳ ಭರವಸೆ ಏನಾಯಿತು? ಎಂದು ಬಿಜೆಪಿ ನಾಯಕರನ್ನು ಕೇಳಿ. ಅವರು ಸುಮಾರು 2 ವರ್ಷಗಳ ಬಿಹಾರದಲ್ಲಿ ಕಾಲ ಅಧಿಕಾರದಲ್ಲಿದ್ದರು. ಬಿಜೆಪಿಯವರು ಭರವಸೆ ನೀಡಿದ 19 ಲಕ್ಷ ಉದ್ಯೋಗಗಳಲ್ಲಿ 19ನ್ನಾದರೂ ನೀಡಿದೆಯೇ? ಎಂದು ತೇಜಸ್ವಿ ಯಾದವ್ ಕೇಳಿದ್ದಾರೆ.

ತೇಜಸ್ವಿ ಯಾದವ್ ಅವರ 10 ಲಕ್ಷ ಉದ್ಯೋಗಗಳ ಭರವಸೆಯ ಬಗ್ಗೆ ಕೇಳಲಾದ ಪ್ರಶ್ನೆಗೆ, “ನಾವು ನಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಆ ಭರವಸೆಯನ್ನು ಖಂಡಿತವಾಗಿಯೂ ಈಡೇರಿಸಲು ಪ್ರಯತ್ನಿಸುತ್ತೇವೆ” ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದರು. ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡಿದ್ದ ನಿತೀಶ್ ಕುಮಾರ್ 2 ದಿನಗಳ ಹಿಂದಷ್ಟೇ ವಿರೋಧ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡು ಹೊಸ ಸರ್ಕಾರ ರಚಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್